ETV Bharat / state

ಪಕ್ಷ ಸಂಘಟನೆ ಹಾಗೂ ಪುನಾರಚನೆ ಕಸರತ್ತು.. ಕಾಂಗ್ರೆಸ್ ನಾಯಕರ ಜೊತೆ ಡಿಕೆಶಿ ಚರ್ಚೆ

author img

By

Published : Jun 29, 2021, 12:35 PM IST

ಮುಂಬರುವ ದಿನಗಳಲ್ಲಿ ಪಕ್ಷದ ವಿವಿಧ ಸಮಿತಿಗಳ ರಚನೆ ಹಾಗೂ ಸಂಘಟನೆಗೆ ಹೊಸತನ ನೀಡುವ ಕಾರ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮುಂದಾಗಲಿದ್ದಾರೆ. ಈ ನಿಟ್ಟಿನಲ್ಲಿ ಅವರು ಪಕ್ಷದ ವಿವಿಧ ನಾಯಕರು ಹಾಗೂ ವಿಭಾಗಗಳ ಹಾಲಿ ಮತ್ತು ಮಾಜಿ ಅಧ್ಯಕ್ಷರ ಜೊತೆ ನಿರಂತರವಾಗಿ ಸಮಾಲೋಚನೆ ನಡೆಸುತ್ತಿದ್ದಾರೆ.

DKS_HOUSE_MEETING_
DKS_HOUSE_MEETING_

ಬೆಂಗಳೂರು: ಪಕ್ಷ ಸಂಘಟನೆ ಹಾಗೂ ಪುನಾರಚನೆಗೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಪಕ್ಷದ ವಿವಿಧ ಮುಖಂಡರೊಂದಿಗೆ ಚರ್ಚಿಸಿದರು. ಶಾಸಕ ಯಶವಂತರಾಯಗೌಡ ಪಾಟೀಲ್, ಮಾಜಿ ಶಾಸಕ ಅಪ್ಪಾಜಿ ನಾಡಗೌಡ, ಎಂಎಲ್​​ಸಿ ಶ್ರೀನಿವಾಸ ಮಾನೆ, ಮಾಜಿ ಎಂಎಲ್​ಸಿ ಎಂ.ಡಿ. ಲಕ್ಷ್ಮೀನಾರಾಯಣ ಅವರು ಡಿ.ಕೆ. ಶಿ ಅವರನ್ನು ಸದಾಶಿವನಗರದ ನಿವಾಸದಲ್ಲಿ ಬೆಳಗ್ಗೆ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

ಕಳೆದ ವಾರ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದಿರುವ ಡಿಕೆಶಿ, ಮುಂಬರುವ ದಿನಗಳಲ್ಲಿ ಪಕ್ಷದ ವಿವಿಧ ಸಮಿತಿಗಳ ರಚನೆ ಹಾಗೂ ಸಂಘಟನೆಗೆ ಹೊಸತನ ನೀಡುವ ಕಾರ್ಯಕ್ಕೆ ಮುಂದಾಗಲಿದ್ದಾರೆ.

ಕಾಂಗ್ರೆಸ್ ನಾಯಕರ ಜೊತೆ ಡಿಕೆಶಿ ಚರ್ಚೆ

ಈ ನಿಟ್ಟಿನಲ್ಲಿ ಪಕ್ಷದ ವಿವಿಧ ನಾಯಕರು ಹಾಗೂ ವಿಭಾಗಗಳ ಹಾಲಿ ಮತ್ತು ಮಾಜಿ ಅಧ್ಯಕ್ಷರ ಜೊತೆ ನಿರಂತರವಾಗಿ ಸಮಾಲೋಚನೆ ನಡೆಸುತ್ತಿದ್ದಾರೆ. ಇದರ ಭಾಗವಾಗಿಯೇ ಇಂದು ಸಹ ಮಹತ್ವದ ಸಭೆ ನಡೆದಿದ್ದು, ಪಕ್ಷ ಕಟ್ಟುವ ವಿಚಾರವಾಗಿ ಗಂಭೀರ ಚರ್ಚೆ ಮಾಡಿದ್ದಾರೆ.

dks meeting with congress leaders
ಕಾಂಗ್ರೆಸ್ ನಾಯಕರ ಜೊತೆ ಡಿಕೆಶಿ ಚರ್ಚೆ

ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷರಾಗಿರುವ ಎಮ್ ಡಿ ಲಕ್ಷ್ಮಿ ನಾರಾಯಣ್ ಸಹ ಇಂದು ಭೇಟಿಯಾಗಿ ಚರ್ಚಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಸಮಿತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವ ಅವರು ಸಂದರ್ಭದಲ್ಲಿ ರಾಜ್ಯ ಸಂಚಾರ ಮಾಡಲು ಸಾಧ್ಯವಿಲ್ಲ ಎಂಬ ಕಾರಣ ನೀಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರು ಈವರೆಗೆ ಅಂಗೀಕರಿಸಿಲ್ಲ. ಇಂದಿನ ಚರ್ಚೆಯ ಬಳಿಕ ಒಂದು ನಿರ್ಧಾರ ಕೈಗೊಂಡಿರುವ ಸಾಧ್ಯತೆ ಇದೆ.

ಒಟ್ಟಾರೆ ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ವಿಚಾರವಾಗಿ ಗಂಭೀರ ಚರ್ಚೆಗಳು ಹಾಗೂ ಹೇಳಿಕೆಗಳು ಕೇಳಿ ಬರುತ್ತಿರುವ ಸಂದರ್ಭದಲ್ಲಿ, ಈ ವಿಚಾರಕ್ಕೆ ಹೆಚ್ಚಿನ ಗಮನ ಹರಿಸದೆ ಪಕ್ಷ ಸಂಘಟನೆಗೆ ಡಿಕೆಶಿ ಮುಂದಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.