ETV Bharat / state

'ನಾನು ಆರೋಗ್ಯವಾಗಿದ್ದೇನೆ.. ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗಿ': ಸಂದೇಶ ರವಾನಿಸಿದ ಮಾಜಿ ಪ್ರಧಾನಿ

author img

By

Published : Sep 23, 2022, 11:07 AM IST

Updated : Sep 23, 2022, 11:22 AM IST

ನನ್ನ ಆರೋಗ್ಯ ಉತ್ತಮವಾಗಿದೆ. ಮನೆಯಿಂದಲೇ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಿಸುತ್ತೇನೆಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದ್ದಾರೆ.

My health is good says Former PM Deve Gowda  Former PM Deve Gowda  JDS leader Deve Gowda health report  Former PM Deve Gowda health update  ಮಾಜಿ ಪ್ರಧಾನಿ ದೇವೇಗೌಡ  ನನ್ನ ಆರೋಗ್ಯ ಉತ್ತಮ  ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ  ಕಂದಾಯ ಸಚಿವ ಅಶೋಕ್
ಮಾಜಿ ಪ್ರಧಾನಿ ದೇವೇಗೌಡ ಆರೋಗ್ಯ ವಿಚಾರಿಸಿದ ಬಿಜೆಪಿ ಪಕ್ಷದ ಮುಖಂಡರು

ಬೆಂಗಳೂರು: 'ನನ್ನ ಆರೋಗ್ಯ ಉತ್ತಮವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ. ಸದ್ಯಕ್ಕೆ ಮನೆಯಿಂದಲೇ ಜೆಡಿಎಸ್ ಪಕ್ಷದ ಜವಾಬ್ದಾರಿಗಳನ್ನು ನಿರ್ಹಿಸುತ್ತಿದ್ದೇನೆ' ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ತಿಳಿಸಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿ ಮಾಹಿತಿ ನೀಡಿರುವ ದೇವೇಗೌಡರು, ಆರೋಗ್ಯ ವಿಚಾರಿಸಲು ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಮುಖಂಡರು ನಿವಾಸಕ್ಕೆ ಬರುವುದು ಬೇಡವೆಂದು ಮನವಿ ಮಾಡಿದ್ದಾರೆ.

ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು. ಆದಕಾರಣ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು. ಮನೆಯಿಂದಲೇ ನನ್ನೆಲ್ಲ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಣೆ ಮಾಡುವುದಾಗಿ ತಿಳಿಸಿದ್ದಾರೆ.

My health is good says Former PM Deve Gowda  Former PM Deve Gowda  JDS leader Deve Gowda health report  Former PM Deve Gowda health update  ಮಾಜಿ ಪ್ರಧಾನಿ ದೇವೇಗೌಡ  ನನ್ನ ಆರೋಗ್ಯ ಉತ್ತಮ  ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ  ಕಂದಾಯ ಸಚಿವ ಅಶೋಕ್
ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಬಿಜೆಪಿ ಪಕ್ಷದ ಮುಖಂಡರು

ಮನೆಯಲ್ಲಿಯೇ ಇದ್ದು ವಿಶ್ರಾಂತಿ ಪಡೆದ ನಂತರ ಖುದ್ದಾಗಿ ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜೊತೆಗೆ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗಲಿದ್ದೆನೆ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ. ಇದನ್ನು ಯಾವುದೇ ಕಾರಣಕ್ಕೂ ಮುಖಂಡರು, ಕಾರ್ಯಕರ್ತರು ಅನ್ಯತಾ ಭಾವಿಸಬಾರದೆಂದು ದೇವೇಗೌಡರು ಕೋರಿದ್ದಾರೆ.

My health is good says Former PM Deve Gowda  Former PM Deve Gowda  JDS leader Deve Gowda health report  Former PM Deve Gowda health update  ಮಾಜಿ ಪ್ರಧಾನಿ ದೇವೇಗೌಡ  ನನ್ನ ಆರೋಗ್ಯ ಉತ್ತಮ  ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ  ಕಂದಾಯ ಸಚಿವ ಅಶೋಕ್
ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿರುವ ಯಡಿಯೂರಪ್ಪ

ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕಂದಾಯ ಸಚಿವ ಅಶೋಕ್ ಸೇರಿದಂತೆ ಇತರೆ ಎಲ್ಲಾ ಸಚಿವರು ಹಾಗೂ ಮುಖಂಡರಿಗೆ ಆಭಾರಿಯಾಗಿದ್ದಾಗಿ ಮಾಜಿ ಪ್ರಧಾನಿ ತಿಳಿಸಿದ್ದಾರೆ. ಆರೋಗ್ಯ ಚೇತರಿಕೆಗಾಗಿ ನಾಡಿನ ದೇವಾಲಯಗಳಲ್ಲಿ ಪೂಜೆ, ಹರಕೆ ಮಾಡಿಕೊಂಡು ಅನ್ನದಾನ ಇತ್ಯಾದಿಗಳನ್ನು ಮಾಡಿದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಪ್ರೀತಿ ವಿಶ್ವಾಸಕ್ಕೆ ನನ್ನ ಹೃದಯ ತುಂಬಿ ಬಂದಿದೆ. ಅವರೆಲ್ಲರಿಗೂ ನನ್ನ ಶುಭ ಹಾರೈಕೆಗಳು ಎಂದು ದೇವೇಗೌಡರು ಹೇಳಿದ್ದಾರೆ.

My health is good says Former PM Deve Gowda  Former PM Deve Gowda  JDS leader Deve Gowda health report  Former PM Deve Gowda health update  ಮಾಜಿ ಪ್ರಧಾನಿ ದೇವೇಗೌಡ  ನನ್ನ ಆರೋಗ್ಯ ಉತ್ತಮ  ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ  ಕಂದಾಯ ಸಚಿವ ಅಶೋಕ್
ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿರುವ ಸಿದ್ದರಾಮಯ್ಯ

ಓದಿ: ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ

Last Updated : Sep 23, 2022, 11:22 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.