ETV Bharat / state

ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕರಾಗಿ ಡಾ.ಸಿ.ಎನ್.ಮಂಜುನಾಥ್ ಮುಂದುವರಿಕೆ

author img

By

Published : Jul 18, 2022, 10:14 PM IST

ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರನ್ನಾಗಿ ಡಾ.ಸಿ.ಎನ್. ಮಂಜುನಾಥ್ ಅವರನ್ನು ಮುಂದಿನ ಒಂದು ವರ್ಷಕ್ಕೆ ಮರುನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

dr-c-n-manjunath-continues-as-director-of-jayadeva-heart-hospital
ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿ ಡಾ.ಸಿ.ಎನ್.ಮಂಜುನಾಥ್ ಮುಂದುವರಿಕೆ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರನ್ನಾಗಿ ಡಾ.ಸಿ.ಎನ್. ಮಂಜುನಾಥ್ ಅವರನ್ನು ಮರು ಆಯ್ಕೆ ಮಾಡಲಾಗಿದೆ.

ಜುಲೈ 19ಕ್ಕೆ ಇವರ ಅಧಿಕಾರವಧಿ ಮುಕ್ತಾಯಗೊಳ್ಳಲಿದ್ದು, ಮುಂದಿನ 1 ವರ್ಷಕ್ಕೆ ನಿರ್ದೇಶಕರಾಗಿ ಮುಂದುವರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಂಸ್ಥೆಯ ಆಡಳಿತ ಮಂಡಳಿಯ ಘಟನೋತ್ತರ ಅನುಮೋದನೆ ಪಡೆಯುವ ಷರತ್ತಿಗೊಳಪಟ್ಟು, ಸಂಸ್ಥೆಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಡಾ.ಸಿ.ಎನ್.ಮಂಜುನಾಥ್ ರನ್ನು ನಿರ್ದೇಶಕರಾಗಿ ಮುಂದುವರಿಸಲಾಗಿದೆ.

ಜುಲೈ 20, 2022 ರಿಂದ ಜುಲೈ 15, 2023 ರ ವರೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರ ಹುದ್ದೆಯಲ್ಲಿ ಮುಂದುವರೆಸಿ ಆದೇಶಿಸಲಾಗಿದ್ದು, ಡಾ.ಸಿ.ಎನ್.ಮಂಜುನಾಥ್ ಅವರನ್ನೇ ಮುಂದುವರಿಸುವಂತೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಸಿಎಂ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದರು.

ಓದಿ : ಜಿಎಸ್​ಟಿ ಹೆಚ್ಚಳದಿಂದ ಜನರು ಚಿಟ್ ಫಂಡ್​ಗಳಿಗೆ ಹಣ ಕಟ್ಟಲು ಹಿಂಜರಿಯುವಂತಾಗಿದೆ: ಬಸವಲಿಂಗಪ್ಪ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.