ETV Bharat / state

ಬೆಂಗಳೂರಿನಲ್ಲಿ ಭರ್ಜರಿ ಮಾದಕ ಬೇಟೆ: 11 ಕೋಟಿ ಮೌಲ್ಯದ ಹಶಿಶ್ ಜಪ್ತಿ, ಓರ್ವನ ಬಂಧನ

author img

By

Published : Dec 8, 2021, 1:59 PM IST

Updated : Dec 8, 2021, 5:12 PM IST

Drugs mafhiy in Bangalore
11 ಕೋಟಿ ಮೌಲ್ಯದ ಹ್ಯಾಶಿಶ್ ಆಯಿಲ್ ಜಪ್ತಿ

ಆಂಧ್ರಪ್ರದೇಶ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ವ್ಯವಸ್ಥಿತವಾಗಿ ಡ್ರಗ್ಸ್ ತರಿಸಿಕೊಂಡು ಬೆಂಗಳೂರು, ಮಂಗಳೂರು ಹಾಗೂ ಕೇರಳ ರಾಜ್ಯದಲ್ಲಿ ಹೌಸ್ ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿ 11 ಕೆ.ಜಿ ಹಶಿಶ್ ಆಯಿಲ್ ಮತ್ತು 250 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ಬೆಂಗಳೂರು: ಬೆಂಗಳೂರು, ಮಂಗಳೂರು ಸೇರಿದಂತೆಯೂ ಹೊರರಾಜ್ಯಗಳಲ್ಲಿ ನಡೆಯುತ್ತಿದ್ದ ಹೈ-ಫೈ-ಪಾರ್ಟಿಗಳಿಗೆ ನಿರಂತರವಾಗಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ 11 ಕೋಟಿ ಮೌಲ್ಯದ ಹಶಿಶ್ ಆಯಿಲ್ ಜಪ್ತಿ ಮಾಡಿಕೊಂಡಿದ್ದಾರೆ.

ಕೇರಳ‌‌ ಮೂಲದ ಅನೂಪ್ ಬಂಧಿತ ಆರೋಪಿ. ಹಲವು ವರ್ಷಗಳಿಂದ ನಗರದ ಹೊರವಲಯ ಬಿದರಹಳ್ಳಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ. ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ವ್ಯವಸ್ಥಿತ ಮಾರ್ಗವಾಗಿ ಖಾಸಗಿ ವಾಹನಗಳಿಂದ ಡ್ರಗ್ಸ್ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ. ದಂಧೆಯಲ್ಲಿ ತೊಡಗಿದ್ದ ಓರ್ವನನ್ನ ಬಂಧಿಸಲಾಗಿದ್ದು ಇನ್ನಿಬ್ಬರು ಪ್ರಮುಖ ಆರೋಪಿಗಳನ್ನು ತಲೆಮರೆಸಿಕೊಂಡಿದ್ದು ಶೀಘ್ರದಲ್ಲಿ ಅವರನ್ನು ಬಂಧಿಸಲಾಗುವುದು ಎಂದು ನಗರ ಈಶಾನ್ಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.

ಹಲವು ವರ್ಷಗಳಿಂದ ದಂಧೆ ನಡೆಸುತ್ತಿದ್ದ ಆರೋಪಿಗಳು ರಸ್ತೆ ಮಾರ್ಗವಾಗಿ ನಗರಕ್ಕೆ ಡ್ರಗ್ಸ್ ತರಿಸಿಕೊಂಡು ಬೆಂಗಳೂರು, ಮಂಗಳೂರು ಹಾಗೂ ಕೇರಳ ರಾಜ್ಯದಲ್ಲಿ ಹೌಸ್ ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದರು. ಸಾರ್ವಜನಿಕರಿಗೆ ಮಾದಕವಸ್ತು ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ಹೆಬ್ಬಾಳ ಬಳಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನ ವಿರುದ್ಧ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಉಡುಪಿ ಸೇರಿದಂತೆ ವಿವಿಧ‌ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಸೆರೆಯಾಗಿರುವ ಆರೋಪಿ ನಗರದ ಹಲವು ಮಂದಿ ಉದ್ಯಮಿಗಳಿಗೆ, ಸೆಲೆಬ್ರೆಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿರುವ ವಿಚಾರ ಬಯಲಿಗೆ ಬಂದಿದೆ. ತಲೆಮರೆಸಿಕೊಂಡಿರುವ ಅರೋಪಿಗಳು ಬಂಧನ ಬಳಿಕ ಎಷ್ಟು ಜನಕ್ಕೆ ಡ್ರಗ್ಸ್ ಸರಬರಾಜು ಮಾಡುತ್ತಿರುವ ವಿಚಾರ ಗೊತ್ತಾಗಲಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

Last Updated :Dec 8, 2021, 5:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.