ETV Bharat / state

ಜಾತಿ ಪದ್ಧತಿ ಹೋಗಲಾಡಿಸಲು ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡಿ : ವಿಜಯ ಸಿದ್ಧೇಶ್ವರ ಸ್ವಾಮೀಜಿ

author img

By

Published : Jun 4, 2022, 7:26 PM IST

Encourage the Inter caste Marriage: says vijaya siddeshwara swamiji
ಜಾತಿ ಪದ್ಧತಿಯನ್ನು ಹೋಗಲಾಡಿಸಲು ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡಿ

ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಲು ವ್ಯಾಪಕ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಂತಲಿಂಗೇಶ್ವರ ಮಠದ ಪೂಜ್ಯ ಶ್ರೀ ವಿಜಯ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು..

ಬೆಂಗಳೂರು : ಸಮಾಜದಲ್ಲಿ ಮೇಲು-ಕೀಳು, ತಾರತಮ್ಯಗಳನ್ನು ನಿವಾರಿಸಿ ಸಾಮರಸ್ಯ ಮೂಡಿಸುವ ಹಾಗೂ ಹಿಂದೂಗಳಲ್ಲಿ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಲು ವ್ಯಾಪಕ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮನ್ನಿಕೇರಿಯ ವಿಶ್ವ ಹಿಂದೂ ಅಂತರ್ಜಾತಿ ವಿವಾಹ ಪ್ರೋತ್ಸಾಹಕ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಮಹಾಂತಲಿಂಗೇಶ್ವರ ಮಠದ ಪೂಜ್ಯ ಶ್ರೀ ವಿಜಯ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ಪ್ರೆಸ್ ಕ್ಲಬ್​ನಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರ್ಜಾತಿ ವಿವಾಹ ಪ್ರೋತ್ಸಾಹಿಸಲು ರಾಜ್ಯಾದ್ಯಂತ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಅಂತರ್ಜಾತಿ ವಿವಾಹವಾದ ದಂಪತಿಯನ್ನು ಗೌರವಿಸುವ, ಅವರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸ್ನೇಹ ಸಮ್ಮೇಳನ ಹಾಗೂ ಇನ್ನಿತರೆ ವಿವಿಧ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

ವಿವಾಹವಾದ ದಂಪತಿಗೆ ಪ್ರೋತ್ಸಾಹ ನೀಡುವ ಜೊತೆಗೆ ಸರ್ಕಾರದ ಸೌಲಭ್ಯಗಳನ್ನು ದೊರಕಿಸಿ ಕೊಡಲಾಗುವುದು. ಒಟ್ಟಾರೆ ಜಾತಿವ್ಯವಸ್ಥೆ ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಎಲ್ಲರಿಗೂ ಧಾರ್ಮಿಕ ಹಾಗೂ ಸಾಮಾಜಿಕ ಸಮಾನತೆಯ ಅವಕಾಶಗಳನ್ನು ದೊರಕಿಸುವ, ಸಮಾನತೆ ಸಾರುವ ವಿಚಾರ ಧಾರೆಗಳನ್ನು ಉತ್ತೇಜಿಸುವಂತಹ ಉದಾತ್ತ ಧ್ಯೇಯ ಹೊಂದಿದ್ದು, ಈ ಮೂಲಕ ಹಿಂದೂ ಧರ್ಮದಿಂದ ಅನ್ಯ ಧರ್ಮಗಳಿಗೆ ಮತಾಂತರವಾಗುವುದನ್ನು ತಪ್ಪಿಸುವುದು ನಮ್ಮ ಪರಮ ಗುರಿಯಾಗಿದೆ. ಈಗಾಗಲೇ ಮತಾಂತರಗೊಂಡವರನ್ನು ಮನವೊಲಿಸಿ ಮತ್ತೆ ಹಿಂದೂ ಧರ್ಮಕ್ಕೆ ಮರಳಿ ಕರೆತರುವ ಉದ್ದೇಶ ಹೊಂದಲಾಗಿದೆ ಎಂದರು.

ಇದನ್ನೂ ಓದಿ: ಓವೈಸಿ ರಾಷ್ಟ್ರಭಕ್ತಿಯನ್ನು ಹೃದಯದಲ್ಲಿ ಇಟ್ಟುಕೊಳ್ಳಬೇಕು: ಕೆ.ಎಸ್. ಈಶ್ವರಪ್ಪ

ಲಕ್ಷಾಂತರ ಜನರು ಅಂತರ್ಜಾತಿ ವಿವಾಹವಾಗಿದ್ದು, ಅವರೆಲ್ಲರನ್ನು ಒಂದೇ ವೇದಿಕೆಗೆ ತರುವ ಜೊತೆಗೆ ಅಂತರ್ಜಾತಿ ವಿವಾಹವಾದ ಹಿಂದೂಗಳು ಹಾಗೂ ಹಿಂದೂ ಧರ್ಮಕ್ಕೆ ಸೇರ್ಪಡೆಗೊಂಡು ಆರ್ಥಿಕವಾಗಿ ಹಿಂದುಳಿದ ಬಡಕುಂಟುಂಬಗಳಿಗೆ ನೆರವು, ಶೈಕ್ಷಣಿಕ, ಸಾಮಾಜಿಕ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದರು. ಹಿಂದೂ ಧರ್ಮೀಯರು ಅನ್ಯಧರ್ಮಗಳಿಗೆ ಮಾರು ಹೋಗಬಾರದು. ನಮ್ಮ ಧರ್ಮದಲ್ಲಿ ಅಂತರ್ಜಾತಿ ವಿವಾಹವಾಗುವತ್ತ ಯುವಕರು ಮನಸ್ಸು ಮಾಡಬೇಕು ಎಂದು ಕರೆಕೊಟ್ಟರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.