ETV Bharat / state

ಪರೀಕ್ಷೆಗೆ ಹಾಜರಾಗದೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

author img

By

Published : Jul 20, 2022, 9:07 PM IST

Engineering student commits suicide without appearing for exam
ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಾನಿ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿನಿ ಬುಧವಾರ ಪರೀಕ್ಷೆಗೆ ಹಾಜರಾಗದೇ, ಹಾಸ್ಟೆಲ್​ನಲ್ಲಿ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಜೆಎಸ್ಎಸ್ ಕಾಲೇಜಿನ ಇಂಜಿನಿಯರಿಂಗ್ ವಿಭಾಗದ ಹಾಸ್ಟೆಲ್​ನಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಶಿವಾನಿ (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಇಂದು ಪರೀಕ್ಷೆಗೆ ಹಾಜರಾಗದೇ ಇದ್ದಿದ್ದರಿಂದ ಮಧ್ಯಾಹ್ನ ಹಾಸ್ಟೆಲ್ ವಾರ್ಡನ್ ಹೋಗಿ ಪರಿಶೀಲಿಸಿದಾಗ ವಿದ್ಯಾರ್ಥಿನಿ ಫ್ಯಾನಿಗೆ ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಘಟನೆಯ ಬಗ್ಗೆ ಕೆಂಗೇರಿ ಪೊಲೀಸರಿಗೆ ಕಾಲೇಜು ಮಂಡಳಿ ಮಾಹಿತಿ ನೀಡಿದ್ದು, ಪ್ರಿನ್ಸಿಪಾಲ್ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅವಾಚ್ಯವಾಗಿ ಬೈದನೆಂದು ಫೇಸ್​​​ಬುಕ್​​ನಲ್ಲಿ ವಿಡಿಯೋ ಅಪ್ಲೋಡ್​​ : ಸಿಮ್ಸ್ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.