ETV Bharat / state

ಕೃಷಿ ವಿವಿ ವ್ಯವಸ್ಥಾಪನಾ ಮಂಡಳಿ ನಾಮನಿರ್ದೇಶಿತ ಸದಸ್ಯರ ಪದಾವಧಿ ವಿಸ್ತರಣೆ: ಕೃಷಿ ಸಚಿವರಿಗೆ ಮನವಿ

author img

By

Published : Jan 27, 2022, 5:34 PM IST

ಕೃಷಿ ವಿಶ್ವವಿದ್ಯಾಲಯಗಳ ವ್ಯವಸ್ಥಾಪನಾ ಮಂಡಳಿಯ ನಾಮನಿರ್ದೇಶಿತ ಸದಸ್ಯರ ಪದಾವಧಿಯನ್ನು ವಿಸ್ತರಿಸುವಂತೆ ಕೋರಿ ಕೃಷಿ ಸಚಿವ ಬಿ.ಸಿ. ಪಾಟೀಲ್​ಗೆ ಮನವಿ ಸಲ್ಲಿಸಲಾಗಿದೆ. ಇದನ್ನು ಪರಿಶೀಲಿಸಿ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಸಚಿವರು ಸದಸ್ಯರಿಗೆ ಭರವಸೆ ನೀಡಿದ್ದಾರೆ.

appeal to Agriculture Minister
ಕೃಷಿ ಸಚಿವರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿರುವ ಕೃಷಿ ವಿಶ್ವವಿದ್ಯಾಲಯಗಳ ವ್ಯವಸ್ಥಾಪನಾ ಮಂಡಳಿಯ ನಾಮನಿರ್ದೇಶಿತ ಸದಸ್ಯರ ಪದಾವಧಿಯನ್ನು ವಿಸ್ತರಿಸುವಂತೆ ಎಲ್ಲಾ ವಿವಿಯ ಸದಸ್ಯರು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ವಿಶ್ವವಿದ್ಯಾಲಯಗಳ ನಾಮನಿರ್ದೇಶಿತ ಸದಸ್ಯರ ಪದಾವಧಿಯು ಪ್ರಸ್ತುತ 3 ವರ್ಷವಿದ್ದು, ಇದನ್ನು 4 ವರ್ಷಕ್ಕೆ ಹೆಚ್ಚಿಸಬೇಕೆಂದು ವಿಕಾಸಸೌಧದ ಕಚೇರಿಯಲ್ಲಿ ಮನವಿ ಮಾಡಲಾಯಿತು.

ತಮಿಳುನಾಡು ಕೃಷಿ ವಿಶ್ವವಿದ್ಯಾಲಯ, ಕೊಯಂಬತ್ತೂರಿನಲ್ಲಿ ಕುಲಪತಿಗಳು ಹಾಗೂ ವ್ಯವಸ್ಥಾಪನಾ ಮಂಡಳಿಯ ನಾಮನಿರ್ದೇಶಿತ ಸದಸ್ಯರ ಪದಾವಧಿ ನಾಲ್ಕು ವರ್ಷವಿದೆ. ಆದರೆ ರಾಜ್ಯದಲ್ಲಿ ನೂತನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳ ಅಧಿನಿಯಮ 2009 ರಲ್ಲಿ ಜಾರಿಗೆ ಬಂದ ನಂತರ ಕುಲಪತಿಗಳ ಪದಾವಧಿಯನ್ನು ವಿಶ್ವವಿದ್ಯಾಲಯದ ಆಡಳಿತ ಹಾಗೂ ಅಭಿವೃದ್ಧಿಯ ಹಿತದೃಷ್ಟಿಯಿಂದ 3 ವರ್ಷಗಳಿಂದ 4 ವರ್ಷಗಳಿಗೆ ಹೆಚ್ಚಿಸಲಾಗಿದೆ. ಆದರೆ ವ್ಯವಸ್ಥಾಪನಾ ಮಂಡಳಿಯ ನಾಮನಿರ್ದೇಶಿತ ಸದಸ್ಯರ ಪದಾವಧಿಯನ್ನು 3 ವರ್ಷಗಳಿಗೆ ಸೀಮಿತಗೊಳಿಸಿ, ಯಾವುದೇ ಪ್ರಾಧಿಕಾರಕ್ಕೆ ಮುಂದಿನ ಅವಧಿಗೆ ಮರುನಿಯೋಜನೆಗೂ ಅವಕಾಶವಿಲ್ಲ.

ಇದನ್ನೂ ಓದಿ: ಬಿಬಿಎಂಪಿ ಅಖಾಡಕ್ಕೆ ಬಿಜೆಪಿ ಸನ್ನದ್ಧ: ಅಭ್ಯರ್ಥಿಗಳ ಆಯ್ಕೆಗೆ ಸಿದ್ಧವಾಯ್ತು ಹೊಸ ತಂತ್ರ

ಕುಲಪತಿಗಳು ಮತ್ತು ವ್ಯವಸ್ಥಾಪನಾ ಮಂಡಳಿಯ ನಾಮನಿರ್ದೇಶಿತ ಸದಸ್ಯರ ಪದಾವಧಿಯು ಏಕರೂಪವಾದಲ್ಲಿ ವಿಶ್ವವಿದ್ಯಾಲಯದ ಆಡಳಿತಾತ್ಮಕ ಮತ್ತು ಇತರೆ ಅಭಿವೃದ್ಧಿ ಕಾರ್ಯದಲ್ಲಿ ಸಮನ್ವಯತೆಯನ್ನು ಸಾಧಿಸಲು ಅನುಕೂಲವಾಗುತ್ತದೆ. ಹಾಗಾಗಿ ಕರ್ನಾಟಕದಲ್ಲಿರುವ ಕೃಷಿ ವಿಶ್ವವಿದ್ಯಾಲಯಗಳ ವ್ಯವಸ್ಥಾಪನಾ ಮಂಡಳಿಯ ನಾಮನಿರ್ದೇಶಿತ ಸದಸ್ಯರ ಪದಾವಧಿಯನ್ನು ವಿಸ್ತರಿಸುವಂತೆ ಸದಸ್ಯರು ಮನವಿ ಸಲ್ಲಿಸಿದ್ದಾರೆ. ಇದನ್ನು ಪರಿಶೀಲಿಸಿ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಸಚಿವ ಬಿ.ಸಿ.ಪಾಟೀಲ್ ಅವರು ಸದಸ್ಯರಿಗೆ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸದಸ್ಯ ದಯಾನಂದ್, ಸುರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.