ETV Bharat / state

CM Siddaramaiah: ಭಾರತೀಯ ಆಹಾರ ನಿಗಮದಿಂದ ಅಕ್ಕಿ ಕೊಡುವ ಬದ್ಧತೆಯ ಪತ್ರ ಟ್ವೀಟ್ ಮಾಡಿ ಸಿ.ಟಿ. ರವಿಗೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ!

author img

By

Published : Jun 16, 2023, 4:23 PM IST

CM Siddaramaiah gave Tucker to CT Rav
ಎಫ್​ಸಿಐಯ ಅಕ್ಕಿ ಕೊಡುವ ಕಮಿಟ್ಮೆಂಟ್ ಪತ್ರ ಟ್ವೀಟ್: ಸಿ.ಟಿ. ರವಿಗೆ ಟಕ್ಕರ್ ನೀಡಿದ ಸಿಎಂ..

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್​ನಲ್ಲಿ, ಎಫ್​ಸಿಐ ಕಮಿಟ್ಮೆಂಟ್ ಪತ್ರ ಪೋಸ್ಟ್ ಮಾಡುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಟಾಂಗ್ ನೀಡಿದ್ದಾರೆ.

ಬೆಂಗಳೂರು: ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುವ ಕಮಿಟ್ಮೆಂಟ್ (ಬದ್ಧತೆ) ಪತ್ರ ಬಹಿರಂಗಗೊಳಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಸಿ.ಟಿ. ರವಿಗೆ ತಿರುಗೇಟು ನೀಡಿದ್ದಾರೆ. ಎಫ್​ಸಿಐ ಅಕ್ಕಿ ಕೊಡುವುದಾಗಿ ಹೇಳಿರುವ ಕಮಿಟ್ಮೆಂಟ್ ಪತ್ರ ತೋರಿಸಲಿ ಎಂದು ಸಿ.ಟಿ.ರವಿ ಸವಾಲು ಹಾಕಿದ್ದರು. ಇದೀಗ, ಇಲ್ಲಿದೆ ಎಫ್‌ಸಿಐ ಕಮಿಟ್‌ಮೆಂಟ್ ಪತ್ರ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು ಎಂದು ಸಿಎಂ ಕಿಡಿ ಕಾರಿದ್ದಾರೆ. ಸಿ.ಟಿ. ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

  • ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ‌ ನಾಯಕ @CTRavi_BJP ಸವಾಲು ಹಾಕಿದ್ದರು.

    ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ.

    ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ… pic.twitter.com/y6uT7eLXlw

    — Siddaramaiah (@siddaramaiah) June 16, 2023 " class="align-text-top noRightClick twitterSection" data=" ">

ಸಿ.ಟಿ. ರವಿ ಹೇಳಿದ್ದೇನು?: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವುದಾಗಿ ಭಾರತೀಯ ಆಹಾರ ನಿಗಮ (ಎಫ್‌ಸಿಐ) ನೀಡಿದ ಕಮಿಟ್ಮೆಂಟ್ ಪತ್ರವನ್ನು ಸಿಎಂ ಸಿದ್ದರಾಮಯ್ಯ ತೋರಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ‌. ರವಿ ಸವಾಲು ಹಾಕಿದ್ದರು. ಕೇಂದ್ರದ ಒಪ್ಪಿಗೆ ಆಧಾರದ ಮೇಲೆ ಜುಲೈ 1ರಿಂದ 10 ಕೆಜಿ ಅಕ್ಕಿ ನೀಡುತ್ತೇವೆ ಎಂದಿದ್ದೆವು. ಬಳಿಕ ಕೇಂದ್ರ ಸರ್ಕಾರ ಉಲ್ಟಾ ಹೊಡೆಯುತ್ತಿದೆ ಎಂದು ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದರು. ಸಿದ್ದರಾಮಯ್ಯ ಸುಳ್ಳು ರಾಮಯ್ಯ ಅಲ್ಲ ಎನ್ನುವುದಾದರೆ ಎಫ್‌ಸಿಐ ಕಮಿಟ್ಮೆಂಟ್ ಪತ್ರವನ್ನು ತೋರಿಸಲಿ ಎಂದಿದ್ದರು.

ಕೇಂದ್ರದ ಮೇಲೆ ಕಾಂಗ್ರೆಸ್ ಆರೋಪದ ಕುರಿತು ಮಾತನಾಡಿದ್ದ ಸಿ.ಟಿ. ರವಿ, "ಆರೋಪ ಮಾಡುವುದನ್ನು ಬಿಟ್ಟು ಜನರಿಗೆ ಹಣ ಕೊಡಿ, ಅವರು ಅಕ್ಕಿ ತೆಗೆದುಕೊಳ್ಳುತ್ತಾರೆ. ನಾವು ನಿಮಗೆ ಅಕ್ಕಿ ಕಳಿಸುತ್ತೇವೆ. ನಿಮ್ಮ ಹೆಸರು ಹಾಕಿಕೊಂಡು ಕೊಡಿ ಎಂದು ಕೇಂದ್ರ ಸರ್ಕಾರದಿಂದ ಪತ್ರ ಕಳಿಸಿಲ್ಲ. ಹಾಗಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಮಿಟ್ಮೆಂಟ್ ಪತ್ರ ತೋರಿಸಲಿ. ಎಫ್​ಸಿಐ ನಿಮಗೆ ಅಗತ್ಯವಿರುವ ಅಕ್ಕಿಯನ್ನು ಕಳಿಸುತ್ತೇವೆಂದು ಹೇಳಿದ್ದಾರಾ? ತಮ್ಮ ಕೈಯ್ಯಲ್ಲಿ ಆಗದಿರುವುದಕ್ಕೆ ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಶುರು ಮಾಡಿದ್ದೀರಾ" ಎಂದು ಕಿಡಿಕಾರಿದ್ದರು.

ಸಿದ್ದರಾಮಯ್ಯನವರು ನಾಲ್ಕೈದು ತಿಂಗಳ ನಂತರ ಆರೋಪ ಮಾಡುತ್ತಾರೆ ಎಂದು ತಿಳಿದಿದ್ದೆ. ಆದರೆ, ಅವರು ಆರೋಪ ಮಾಡುವುದನ್ನು ಈಗಿನಿಂದಲೇ ಶುರು ಮಾಡಿದ್ದಾರೆ. ಜುಲೈ 1ರಿಂದ ಉಚಿತ ಅಕ್ಕಿ ಎಂದು ಭಾಷಣ ಮಾಡಿ, ಸದ್ಯ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿರುವುದು ಸರಿನಾ? ನೀವು ಎಲ್ಲ ಬಿಪಿಎಲ್ ಚೀಟಿದಾರರ ಖಾತೆಗೆ ಹಣ ಹಾಕಿ, ಅವರೇ ಅಕ್ಕಿ ಖರೀದಿ ಮಾಡಿಕೊಳ್ಳುತ್ತಾರೆ ಎಂದು ತಿರುಗೇಟು ನೀಡಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಟಿಪ್ಪು ಯುಗ ಆರಂಭ: ಆರ್.ಅಶೋಕ್ ಆರೋಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.