ETV Bharat / state

ಬೆಂಗಳೂರಿನ ಸಾಗರ್​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ... ಬೆಂಕಿ ನಂದಿಸಿದ ಅಗ್ನಿ ಶಾಮಕ ಸಿಬ್ಬಂದಿ

author img

By

Published : Feb 9, 2020, 2:10 PM IST

ಕುಮಾರಸ್ವಾಮಿ ಲೇ ಔಟ್​ನ ಸಾಗರ ಆಸ್ಪತ್ರೆಗೆ ಬೆಂಕಿ ತಗುಲಿದ್ದು, ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

Fire on Sagara hospital of Bangalore!
ಆಸ್ಪತ್ರೆಗೆ ತಗುಲಿದ ಬೆಂಕಿ.....ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ ಅಗ್ನಿ ಶಾಮಕ ಸಿಬ್ಬಂದಿ

ಬೆಂಗಳೂರು: ಕುಮಾರಸ್ವಾಮಿ ಲೇ ಔಟ್​ನ ಸಾಗರ ಆಸ್ಪತ್ರೆಗೆ ಬೆಂಕಿ ತಗುಲಿದ್ದು, ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಆಸ್ಪತ್ರೆಗೆ ತಗುಲಿದ ಬೆಂಕಿ.....ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ ಅಗ್ನಿ ಶಾಮಕ ಸಿಬ್ಬಂದಿ

ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಹೊತ್ತಿ ಉರಿದಿದೆ. ತಕ್ಷಣ ಆಸ್ಪತ್ರೆಯ ಸಿಬ್ಬಂದಿ ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ರವಾನೆ ಮಾಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನ ಅಲ್ಲೇ ಸ್ಥಳೀಯ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಇನ್ನು ವಿಚಾರ ತಿಳಿದು ಕುಮಾರಸ್ವಾಮಿ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಹೇಗೆ ತಗುಲಿತು ಅನ್ನೋದರ ಕುರಿತು ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.