ETV Bharat / state

ನೆರೆ ಹಾನಿ ಸಂಬಂಧ ಸಂತ್ರಸ್ತರಿಗೆ ತಕ್ಷಣ ಪರಿಹಾರ ವಿತರಣೆ: ಸಿಎಂ ಬಿಎಸ್​ವೈ

author img

By

Published : Oct 22, 2020, 12:25 PM IST

ರಾಜ್ಯದ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿ ಸಮೀಕ್ಷೆ ಮಾಡಿದ್ದೇವೆ. ಭಾರೀ ಪ್ರಮಾಣದಲ್ಲಿ ಬೆಳೆಹಾನಿ ಆಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಸಿಎಂ ಬಿ.ಎಸ್​ ಯಡಿಯೂರಪ್ಪ
ಸಿಎಂ ಬಿ.ಎಸ್​ ಯಡಿಯೂರಪ್ಪ

ಬೆಂಗಳೂರು: ಕಳೆದ ಬಾರಿಗಿಂತಲೂ ಈ ಸಲ ನೆರೆ ‌ಹಾನಿ ಹೆಚ್ಚಾಗಿದೆ. ಅತಿವೃಷ್ಟಿಯಿಂದ ಆಗಿರುವ ಹಾನಿ ಸಮೀಕ್ಷೆ ಮಾಡಿದ್ದೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿ ಸಮೀಕ್ಷೆ ಮಾಡಿದ್ದೇವೆ. ಭಾರೀ ಪ್ರಮಾಣದಲ್ಲಿ ಬೆಳೆಹಾನಿ ಆಗಿದೆ. ಮನೆ ಕಳೆದುಕೊಂಡವರಿಗೆ ತಕ್ಷಣ ಈಗಾಗಲೇ ಹತ್ತು ಸಾವಿರ ರೂಪಾಯಿ ತಾತ್ಕಾಲಿಕ ಪರಿಹಾರ ವಿತರಣೆ ಮಾಡಿದ್ದೇವೆ. ಹಾನಿಯ ಅಂದಾಜಿನ ಬಗ್ಗೆ ಇಂದು ಸಚಿವ ಸಂಪುಟದಲ್ಲೂ ಚರ್ಚಿಸುತ್ತೇವೆ ಎಂದು ವಿವರಿಸಿದರು.

ನೆರೆ ಹಾನಿ ಪರಿಹಾರ ಸಂಬಂಧ ಕೇಂದ್ರಕ್ಕೆ ಮನವಿ ಸಲ್ಲಿಸುತ್ತೇವೆ. ಎನ್​ಡಿಆರ್​ಎಫ್ ನಿಯಮಾವಳಿ ತಿದ್ದುಪಡಿ ಬಗ್ಗೆಯೂ ಚರ್ಚಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.