ETV Bharat / state

ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ: ಸಿಎಂ ಬೊಮ್ಮಾಯಿ

author img

By

Published : Aug 1, 2021, 2:47 PM IST

Updated : Aug 1, 2021, 3:56 PM IST

ಹಿಂದಿನ ಪರಿಹಾರದ ಹಣವೇ ಕೊಟ್ಟಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ‌ ಸಿಎಂ, ಪ್ರವಾಹ ಬಂದಾಗ ಕೂಡಲೇ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡ್ತಿದೆ. ಈ ಹಿಂದೆ ಅವರು ಯಾವ ರೀತಿ ಮಾಡಿದ್ದಾರೆ ಎಂದು ಗೊತ್ತಿದೆ. ಹೀಗಾಗಿ, ಮಾಜಿ ಸಿಎಂ ಆಗಿದ್ದವರು ಸ್ವಲ್ಪ ಅರ್ಥ ಮಾಡಿಕೊಂಡು ಮಾತಾಡಬೇಕು..

Bommai
ಸಿಎಂ ಬೊಮ್ಮಾಯಿ

ಬೆಂಗಳೂರು : ನೆರೆಹಾನಿ ಸಂತ್ರಸ್ತರಿಗೆ ಯಡಿಯೂರಪ್ಪ ಸರ್ಕಾರದಲ್ಲಿ ನೀಡುತ್ತಿದ್ದ ಮಾದರಿಯಲ್ಲಿಯೇ ಪರಿಹಾರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಹಾನಿ ಸಮೀಕ್ಷೆಗೆ ಕೇಂದ್ರ ತಂಡ ಕಳುಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

ಸರ್ಕಾರದಿಂದ ನೆರೆ ಪರಿಹಾರ ಕಾರ್ಯ ಮಾಡುವ ಸಂಬಂಧ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ ನಡೆಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆರ್ಥಿಕ ಇಲಾಖೆಯ ಅಧಿಕಾರಿ ಐಎನ್ಎಸ್ ಪ್ರಸಾದ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದು, ನೆರೆ ಪರಿಹಾರ ಕಾರ್ಯಗಳಿಗೆ ಹಾಗೂ ಸಂತ್ರಸ್ತರಿಗೆ ನೆರವು ನೀಡಲು ಅಗತ್ಯ ಹಣಕಾಸು ಒದಗಿಸುವ ಸಂಬಂಧ ಚರ್ಚೆ ನಡೆಸಲಾಗಿದೆ.

ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, ಮಳೆಯಿಂದಾಗಿ 466 ಗ್ರಾಮಗಳಲ್ಲಿ ಸಮಸ್ಯೆಯಾಗಿದೆ. 13 ಜನ ಸಾವನ್ನಪ್ಪಿದ್ದಾರೆ, ಒಬ್ಬರು ನಾಪತ್ತೆಯಾಗಿದ್ದಾರೆ. ರಸ್ತೆಗಳು, ಸೇತುವೆಗಳು ಹಾಳಾಗಿವೆ. ಕೂಡಲೇ ಸರಿಪಡಿಸಲು ಸೂಚನೆ ನೀಡಲಾಗಿದೆ. ಅದಕ್ಕಾಗಿ 510 ಕೋಟಿ ರೂ. ರಾಜ್ಯ ಸರ್ಕಾರದಿಂದ ನೀಡಲಾಗುತ್ತದೆ. 150 ಕೋಟಿ ರೂಪಾಯಿ ಎನ್‌ಡಿಆರ್​​​ಎಫ್​​ ಅನುದಾನದಲ್ಲಿ ಬಳಕೆ ಹಾಗೂ 700 ಕೋಟಿಗೂ ಹೆಚ್ಚು ಹಣ ಡಿಸಿಗಳ ಬಳಿ ಇದೆ ಎಂದಿದ್ದಾರೆ.

ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ:

ಬೆಳೆ ಹಾನಿ ಸಮೀಕ್ಷೆ 15 ದಿನಗಳೊಳಗೆ ಆಗಬೇಕು, ಮನೆ ಬಿದ್ದಿರೋರಿಗೆ ತಕ್ಷಣ 10 ಸಾವಿರ ಕೊಡೋದಕ್ಕೆ ಸೂಚನೆ ನೀಡಿದ್ದು, ಪೂರ್ಣ ಮನೆ ಬಿದ್ದವರಿಗೆ ಯಡಿಯೂರಪ್ಪ ಸರ್ಕಾರದಲ್ಲಿ ನೀಡ್ತಿದ್ದಂತೆ 5 ಲಕ್ಷ ಪರಿಹಾರ ಅರ್ಧ ಬಿದ್ದವರಿಗೆ 3 ಲಕ್ಷ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದರು.

ನೆರೆ ಹಾನಿ ಸಮೀಕ್ಷೆಗೆ ಕೇಂದ್ರ ತಂಡ ಕಳುಹಿಸುವಂತೆ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇನೆ. ಮುಂದಿನ ದೆಹಲಿ ಪ್ರವಾಸದ ವೇಳೆ ಭೇಟಿ ಮಾಡಿ ಮತ್ತೊಮ್ಮೆ ಪರಿಹಾರದ ಮನವಿ ಮಾಡಲಿದ್ದೇನೆ ಎಂದರು.

ಹಿಂದಿನ ಪರಿಹಾರದ ಹಣವೇ ಕೊಟ್ಟಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ‌ ಸಿಎಂ, ಪ್ರವಾಹ ಬಂದಾಗ ಕೂಡಲೇ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡ್ತಿದೆ. ಈ ಹಿಂದೆ ಅವರು ಯಾವ ರೀತಿ ಮಾಡಿದ್ದಾರೆ ಎಂದು ಗೊತ್ತಿದೆ. ಹೀಗಾಗಿ, ಮಾಜಿ ಸಿಎಂ ಆಗಿದ್ದವರು ಸ್ವಲ್ಪ ಅರ್ಥ ಮಾಡಿಕೊಂಡು ಮಾತಾಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.

ಓದಿ: ಹೈಕಮಾಂಡ್​ನಿಂದ ಸಂದೇಶ ಬಂದ ಕೂಡಲೇ ಸಂಪುಟ‌ ರಚನೆ‌: ಬೊಮ್ಮಾಯಿ

Last Updated : Aug 1, 2021, 3:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.