ETV Bharat / state

ಗ್ಯಾರಂಟಿ ಜಾರಿಗೊಳಿಸದೇ ಕಾಂಗ್ರೆಸ್​ ಸರ್ಕಾರ ದೋಖಾ ಮಾಡಿದೆ : ಬಸವರಾಜ ಬೊಮ್ಮಾಯಿ

author img

By

Published : Jul 4, 2023, 7:58 PM IST

ಜನರಿಗೆ ನೀಡಿದ ಗ್ಯಾರಂಟಿಯನ್ನು ಜಾರಿ ಮಾಡುವಲ್ಲಿ ಮೋಸ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್​ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನಡೆ ಇಟ್ಟಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

former-cm-basavaraj-bommai-slams-congress-govt
ಗ್ಯಾರಂಟಿ ಜಾರಿಗೊಳಿಸದೇ ಕಾಂಗ್ರೆಸ್​ ಸರ್ಕಾರ ದೋಖಾ ಮಾಡಿದೆ : ಬಸವರಾಜ ಬೊಮ್ಮಾಯಿ

ಗ್ಯಾರಂಟಿ ಜಾರಿಗೊಳಿಸದೇ ಕಾಂಗ್ರೆಸ್​ ಸರ್ಕಾರ ದೋಖಾ ಮಾಡಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು : ಮೊದಲ ದಿನವೇ ಹೊಸ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸಿದೆ. ಜನರಿಗೆ ಯಾವ ಗ್ಯಾರೆಂಟಿ ನೀಡಿದ್ದರೋ ಅದನ್ನು ಅನುಷ್ಠಾನ ಮಾಡುವಲ್ಲಿ ಮೋಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ವಿಧಾನಸೌಧದ ಹೈಕೋರ್ಟ್ ಗೇಟ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಮನೆಯಲ್ಲಿ ಯಾರು ಯಜಮಾನಿ ಅಂತ ಹೇಳಿ ಮನೆಗಳಲ್ಲಿ ಗಲಾಟೆ ಶುರುವಾಗುವಂತೆ ಮಾಡಿದ್ದಾರೆ. ಗೃಹ ಜ್ಯೋತಿ ಯೋಜನೆ ಘೋಷಿಸಿ ಮೂರು ಪಟ್ಟು ಬಿಲ್ ಏರಿಸಿ ಜನರಿಗೆ ಭಾರ ಮಾಡಿದ್ದಾರೆ. ಬಸ್ ಗಳಲ್ಲಿ ಗೊಂದಲ ಹೆಚ್ಚಾಗಿದೆ. ಶಾಲಾ ಮಕ್ಕಳಿಗೆ ಬಸ್ ಇಲ್ಲ. ಕಿಟಕಿಯಲ್ಲಿ ಬಸ್ ಹತ್ತುವಂತಾಗಿದೆ ಎಂದು ಟೀಕಿಸಿದರು.

ಯುವ ನಿಧಿ ಏನಾಗಿದೆ ಗೊತ್ತಿಲ್ಲ. ಅಕ್ಕಿಯಲ್ಲಿ ದೊಡ್ಡ ಗೋಲ್​ ಮಾಲ್ ನಡೆಯುತ್ತಿದೆ. ಎಷ್ಟು ಅಕ್ಕಿ ಕೊಡುತ್ತಾರೆ ಗೊತ್ತಿಲ್ಲ. ಈ ಸರ್ಕಾರದ ಮುಖವಾಡ ಬಯಲಾಗಿದೆ. ಇವರ ಬಣ್ಣ ಬಯಲಾಗಿದೆ ಎಂದು ವಾಗ್ದಾಳಿ ‌ನಡೆಸಿದರು.ಗ್ಯಾರಂಟಿ ಯೋಜನೆಗಳ ಗೊಂದಲಗಳ ಕುರಿತು ಚರ್ಚಿಸಲು ನಾವು ಅವಕಾಶ ಕೇಳಿದ್ದೇವೆ. ಅದಕ್ಕೆ ಅವಾಕಶ ಕೊಡದೇ ಸರ್ಕಾರ ಹಠಮಾರಿತನ, ಮೊಂಡತನ ಮಾಡುತ್ತಿದೆ. ಸಭಾಧ್ಯಕ್ಷರ ಮೇಲೆ ಒತ್ತಡ ತಂದು ಅವಕಾಶ ಕೊಡದಂತೆ ತಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ : ಕೊಬ್ಬರಿಗೆ ಬೆಂಬಲ ಬೆಲೆ ನೀಡುವ ವಿಚಾರ: ಸದನದಲ್ಲಿ ಶಿವಲಿಂಗೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ವಾಗ್ವಾದ!

ರಾಜ್ಯದಲ್ಲಿ ಬರ ಬಂದಿದೆ. ಕುಡಿಯುವ ನೀರಿನ ಸಮಸ್ಯೆ ಇದೆ.‌ ಇದೆಲ್ಲದರ ಬಗ್ಗೆ ಚರ್ಚೆ ಮಾಡಬೇಕಿದೆ. ಸರ್ಕಾರ ಮೊದಲ ದಿನವೇ ವಿರೋಧ ಪಕ್ಷವನ್ನು ಬಾವಿಗೆ ತಳ್ಳುವ ಕೆಲಸ ಮಾಡಿದೆ. ಸರ್ಕಾರ ದೋಖಾ ಮಾಡಿದೆ. ನಮ್ಮ ಬೇಡಿಕೆ ಇಷ್ಟೆ ನೀವು ಕೊಟ್ಟ ಭರವಸೆ ಈಡೇರಿಸಿ ಎಂದು ಆಗ್ರಹಿಸುತ್ತಿದ್ದೇವೆ ಎಂದು ಹೇಳಿದರು.

ಈ ಸರ್ಕಾರ ಮುಂದಿನ ಕಲಾಪದ ಬಗ್ಗೆ ಚರ್ಚೆ ಮಾಡುವ ಕುರಿತು ಕಲಾಪ ಸಲಹಾ ಸಮಿತಿ ಸಭೆ ಕರೆದಿದೆ. ಈಗಿನ ಗೊಂದಲ ಬಗೆ ಹರಿಸದೇ ಮುಂದಿನ ಕಲಾಪದ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ. ಹೀಗಾಗಿ ನಾವು ಕಲಾಪವನ್ನು ಬಹಿಷ್ಕಾರ ಮಾಡಿದ್ದೇವೆ. ಕಾಂಗ್ರೆಸ್​ ತನ್ನ ಗ್ಯಾರಂಟಿ ಯೋಜನೆಗಳನ್ನು ಷರತ್ತುಗಳಿಲ್ಲದೆ ಜಾರಿ ಮಾಡುವ ತನಕ ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದರು.

ಇನ್ನು ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುವ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜನಪರ ಕಾನೂನುಗಳನ್ನು ಜಾರಿಗೆ ತಂದಿದ್ದೇವೆ. ಅವು ಕಾಂಗ್ರೆಸ್ ನವರಿಗೆ ಬೇಡವಾಗಿರಬಹುದು. ಜನ ಬಯಸಿದ್ದನ್ನು ನಾವು ಮಾಡಿದ್ದೇವು ಎಂದು ಹೇಳಿದರು.ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಆರ್ ಅಶೋಕ್, ಸುನಿಲ್ ಕುಮಾರ್ ಮತ್ತಿತರು ಉಪಸ್ಥಿತರಿದ್ದರು.

ಇದನ್ನೂ ಓದಿ : ಹೊಂದಾಣಿಕೆಗೆ ಬಗ್ಗದ ಹಿಂದುತ್ವವಾದಿ ವ್ಯಕ್ತಿ ಬಿಜೆಪಿ ರಾಜ್ಯಾಧ್ಯಕ್ಷ ಆಗಬೇಕು: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.