ETV Bharat / state

ಇಂದು ತೆಲಂಗಾಣ ಚುನಾವಣಾ ಪ್ರಚಾರದಲ್ಲಿ ಬಿ.ಎಸ್.ಯಡಿಯೂರಪ್ಪ ಭಾಗಿ

author img

By ETV Bharat Karnataka Team

Published : Nov 22, 2023, 8:20 AM IST

B.S.Yeddyurappa will participate in Telangana election campaign: ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿರುವ ಬಿ.ಎಸ್.ಯಡಿಯೂರಪ್ಪ ಇಂದು ತೆಲಂಗಾಣ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ತೆಲಂಗಾಣ ವಿಧಾನಸಭೆ ಚುನಾವಣೆಯ ಪ್ರಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಬುಧವಾರ) ತೆಲಂಗಾಣಕ್ಕೆ ತೆರಳುವರು. ಬೆಳಿಗ್ಗೆ 7.40ಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹೈದರಾಬಾದ್​ಗೆ ಪ್ರಯಾಣಿಸಲಿದ್ದಾರೆ.

ಬೆಳಿಗ್ಗೆ 11.20ಕ್ಕೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಜಹೀರಾಬಾದ್​ನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವ ಅವರು ಮಧ್ಯಾಹ್ನ 2ಕ್ಕೆ ರ‍್ಯಾಲಿಯಲ್ಲಿ ಭಾಗವಹಿಸುವರು. ಬಳಿಕ ಬೀದರ್​ಗೆ ಆಗಮಿಸಿ, ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರವನ್ನೇ ಪುತ್ರ ವಿಜಯೇಂದ್ರ ಅವರಿಗೆ ಬಿಟ್ಟುಕೊಟ್ಟು ಚುನಾವಣಾ ರಾಜಕೀಯ ಭವಿಷ್ಯ ಭದ್ರಪಡಿಸಿದ್ದರು. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನೂ ಕೊಡಿಸುವ ಮೂಲಕ ಮುಂದಿನ ರಾಜಕೀಯ ಭವಿಷ್ಯ ರೂಪಿಸಿದ್ದಾರೆ. ಈ ಮೂಲಕ ಓರ್ವ ಪುತ್ರ ಸಂಸದನಾದರೆ ಮತ್ತೋರ್ವ ಪುತ್ರ ಶಿಕಾರಿಪುರ ಶಾಸಕ ಹಾಗು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ಆ ಮಟ್ಟಿಗೆ ಪುತ್ರರಿಬ್ಬರ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ. ಇದೀಗ ರಾಜಕಾರಣದಲ್ಲಿ ಸಕ್ರಿಯರಾಗಿರುವ ಯಡಿಯೂರಪ್ಪ ಪಕ್ಷ ಸಂಘಟನೆಗೆ ಒತ್ತು ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ: ಹೈಕಮಾಂಡ್ ಸೂಚನೆಯಂತೆ ಚುನಾವಣಾ ರಾಜಕೀಯದಿಂದ ಸದಾನಂದಗೌಡ ನಿವೃತ್ತಿ: ಬಿ ಎಸ್​ ಯಡಿಯೂರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.