ETV Bharat / state

ಹೆಚ್​​ಡಿಕೆ ಸರ್ಕಾರ ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಧೈರ್ಯವಿದ್ದರೆ ಸತ್ಯ ಹೇಳಿ: ಸಿದ್ದರಾಮಯ್ಯಗೆ ಕುಮಾರಸ್ವಾಮಿ ಸವಾಲ್..!

author img

By ETV Bharat Karnataka Team

Published : Oct 24, 2023, 9:07 AM IST

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಸಿದ್ದರಾಮಯ್ಯರಿಗೆ ಕುಮಾರಸ್ವಾಮಿ ಸವಾಲ್
ಸಿದ್ದರಾಮಯ್ಯರಿಗೆ ಕುಮಾರಸ್ವಾಮಿ ಸವಾಲ್

ಬೆಂಗಳೂರು: ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಮೀರ್​ಸಾದಿಕ'ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ 'ಮೈತ್ರಿದ್ರೋಹ'ಕ್ಕೆ ಏನು ಹೇಳುವುದು ಸಿದ್ದರಾಮಯ್ಯ ನವರೇ? ಕುಮಾರಸ್ವಾಮಿ ಸರ್ಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಧೈರ್ಯವಿದ್ದರೆ ಸತ್ಯ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸವಾಲೆಸೆದಿದ್ದಾರೆ.

  • ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ 'ಮೈತ್ರಿದ್ರೋಹ'ಕ್ಕೆ ಏನು ಹೇಳುವುದು @siddaramaiah ನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? 'ಮೀರುಸಾದಿಕ'ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ…

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 24, 2023 " class="align-text-top noRightClick twitterSection" data=" ">

ಸಿಎಂ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ 'ಮೈತ್ರಿದ್ರೋಹ'ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? 'ಮೀರ್​ಸಾದಿಕ'ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಸತ್ಯ ಹೇಳಿ ನೋಡೋಣ ಎಂದು ಸವಾಲೆಸೆಸಿದ್ದಾರೆ.

ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ. ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು? ಎಂದು ಟೀಕಿಸಿದ್ದಾರೆ.

ಇಷ್ಟಕ್ಕೂ ಇನ್ನೊಬ್ಬರು ಇದ್ದ, ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ? ಅದೆಂಥ ಶೋಭೆ? ಛೀ! ಛೀ!! ಎಂದು ಕುಟುಕಿದ್ದಾರೆ. ವೆಸ್ಟ್ ಎಂಡ್​ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್​ನಲ್ಲಿ ಸತೀಶ್​ಗೆ ಹಿಂಸೆ ಆಗುತ್ತಿದೆ: ರಮೇಶ್ ಜಾರಕಿಹೊಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.