ETV Bharat / state

ಬಿಜೆಪಿ ನಾಯಕರು ಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್ಚುತ್ತಿದ್ದಾರೆ; ಸಿದ್ದರಾಮಯ್ಯ

author img

By

Published : Mar 21, 2021, 2:16 PM IST

ಬಿಜೆಪಿ ನಾಯಕರು ಹಾಗೂ ಸಚಿವರ ವಿರುದ್ಧ ಸಿಡಿ ವಿಚಾರವಾಗಿ ನಿರಂತರವಾಗಿ ದಾಳಿ ನಡೆಸುತ್ತಾ ಬಂದಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ.

Former CM Siddaramaiah tweet
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಕಾಂಗ್ರೆಸ್​ಗೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಮೂಲಕ ಖಡಕ್ ಪ್ರತಿಕ್ರಿಯೆ ನೀಡಿರುವ ಅವರು, ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ. ಬೇಕಿದ್ದರೆ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಿಗೆ ಕೂಡಾ ಎಂದು ಹೇಳಿದ್ದಾರೆ.

  • ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ @BJP4Karnataka ನಾಯಕರಿಗೆ ದಾನ ಮಾಡೋಣ ಎಂದು
    90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ.

    ಬೇಕಿದ್ದರೆ @nalinkateel ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ.

    ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾ. pic.twitter.com/CnErHQ3dhU

    — Siddaramaiah (@siddaramaiah) March 21, 2021 " class="align-text-top noRightClick twitterSection" data=" ">

ಬಿಜೆಪಿ ನಾಯಕರು ಹಾಗೂ ಸಚಿವರ ವಿರುದ್ಧ ಸಿಡಿ ವಿಚಾರವಾಗಿ ನಿರಂತರವಾಗಿ ದಾಳಿ ನಡೆಸುತ್ತಾ ಬಂದಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರು ನಿರಂತರವಾಗಿ ಸರ್ಕಾರದ ವಿರುದ್ಧ ಮುಗಿಬೀಳುತ್ತಿದ್ದು, ನಾಳೆ ವಿಧಾನಸಭೆಯಲ್ಲಿ ಸಹ ಸಿಡಿ ವಿಚಾರ ಪ್ರಸ್ತಾಪಕ್ಕೆ ನಿರ್ಧರಿಸಿದ್ದಾರೆ.

ಓದಿ : ಕೊರೊನಾ ಎರಡನೇ ಅಲೆ ಆರ್ಭಟ.. ಆಗುತ್ತಾ ನೈಟ್​ ಕರ್ಫ್ಯೂ? ಸಮಿತಿ ಶಿಫಾರಸು ಏನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.