ETV Bharat / state

ಆಂಧ್ರದಿಂದ ತಂದು ಬೆಂಗಳೂರಿನಲ್ಲಿ ಮಾರಾಟ: 2 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ವಶ

author img

By

Published : Mar 4, 2023, 6:04 PM IST

ಆಂಧ್ರಪ್ರದೇಶದಿಂದ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟ - ಇಬ್ಬರು ಆರೋಪಿಗಳ ಬಂಧನ - 2.47 ಕೋಟಿ ಮೌಲ್ಯದ ಗಾಂಜಾ ವಶ

ganja-seized-worth-rupees-2-crores-in-bengaluru
ಆಂಧ್ರದಿಂದ ತಂದು ಬೆಂಗಳೂರಿನಲ್ಲಿ ಮಾರಾಟ : 2 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ವಶ

ಬೆಂಗಳೂರು : ನೆರೆಯ ಆಂಧ್ರಪ್ರದೇಶದಿಂದ ಮಾದಕವಸ್ತು ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಡಿ.ಜೆ ಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನವಾಜ್ ಖಾನ್ ಹಾಗೂ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಇವರಿಂದ ಬರೋಬ್ಬರಿ 2.47 ಕೋಟಿ ಮೌಲ್ಯದ 415 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಗಳು ಆಂಧ್ರಪ್ರದೇಶದ ವಿಶಾಖಪಟ್ಟಣಂನ ಫೈರೋಜ್ ಖಾನ್ ಹಾಗೂ ಪ್ರಸಾದ್ ಎಂಬವರಿಂದ ಗಾಂಜಾ ಖರೀದಿಸುತ್ತಿದ್ದರು. ಬಳಿಕ ಆರೋಪಿಗಳು ಬೆಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಹಿಂದೆ ಟ್ಯಾನರಿ ರಸ್ತೆಯ ಈದ್ಗಾ ಮೈದಾನದ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ನವಾಜ್ ಖಾನ್ ಎಂಬಾತನನ್ನು ಡಿ.ಜೆ‌.ಹಳ್ಳಿ ಪೊಲೀಸರು ಬಂಧಿಸಿದ್ದರು.ಈ ವೇಳೆ ಬಂಧಿತನಿಂದ ಸುಮಾರು 3 ಲಕ್ಷ ಮೌಲ್ಯದ 3.5 ಕೆ.ಜಿ ತೂಕದ ಗಾಂಜಾವನ್ನು ವಶಕ್ಕೆ ಪಡೆಯಲಾಗಿತ್ತು.

ಆರೋಪಿ ನವಾಜ್​ ಖಾನ್​​ನನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಫೆ. 27ರಂದು ಬೆಂಗಳೂರಿಗೆ ಗಾಂಜಾ ತಂದಿದ್ದ ಫೈರೋಜ್ ಖಾನ್ ಹಾಗೂ ಪ್ರಸಾದ್ ಬಗ್ಗೆ ಮಾಹಿತಿ ನೀಡಿದ್ದನು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಈ ವೇಳೆ ಆರೋಪಿ ಅಬ್ದುಲ್ ರೆಹಮಾನ್​ನ್ನು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 415 ಕೆ.ಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರ ದಾಳಿ ವೇಳೆ ಕೆಲವು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಇವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಪೂರ್ವ ಡಿಸಿಪಿ ಭೀಮಾಶಂಕರ್​ ಗುಳೇದ್​ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್​​ಸ್ಪೆಕ್ಟರ್​ ಪ್ರಕಾಶ್​ ಮತ್ತು ಇತರ ಪೊಲೀಸ್​ ಸಿಬ್ಬಂದಿ ಭಾಗವಹಿಸಿದ್ದರು. ಆಂಧ್ರಪ್ರದೇಶ್ ವಿಶಾಖ ಪಟ್ಟಣಂ ಜಿಲ್ಲೆಯ ಅರಕ್ಕು ಎಂಬಲ್ಲಿಂದ ಗಾಂಜಾ ಪೂರೈಕೆಯಾಗುತ್ತಿದೆ. ಈ ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಡಿಜೆ ಹಳ್ಳಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನವಾಜ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಈತನನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಇಬ್ಬರು ಗಾಂಜಾಪೂರೈಕೆದಾರರ ಬಗ್ಗೆ ಮಾಹಿತಿ ದೊರೆತಿದೆ. ಇವರನ್ನು ಬಂಧಿಸಲು ನಮ್ಮ ಪೊಲೀಸರ ತಂಡ ಸ್ಥಳಕ್ಕೆ ಹೋಗಿತ್ತು. ಅಬ್ದುಲ್​ ರೆಹಮಾನ್​ ಅಲಿಯಾಸ್​ ಅಜ್ಜು ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಆಯುಕ್ತರು ಮಾಹಿತಿ ನೀಡಿದರು. ಬಂಧಿತನ ವಿರುದ್ಧ ಬಾಣಸವಾಡಿ, ವೈಯಾಲಿಕಾವಲ್ ಠಾಣೆಗಳಲ್ಲಿ ಮಾದಕವಸ್ತು ಮಾರಾಟ ಹಾಗೂ ಕೊಲೆ ಪ್ರಕರಣಗಳಿದ್ದು, ಹೆಚ್ಚಿನ ತನಿಖೆ ಮುಂದುವರೆಸಲಾಗಿದೆ ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ತಿಳಿಸಿದ್ದಾರೆ.

ವಿದೇಶಿ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ: ಕಳೆದ ತಿಂಗಳು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳು ಹಂಪಿ, ಆನೆಗೊಂದಿಗೆ ಬರುವ ಪ್ರವಾಸಿಗರನ್ನು ಗುರಿಯಾಗಿಸಿ ಗಾಂಜಾ ಮಾರಾಟ ಮಾಡುತ್ತಿದ್ದರು. ತಾಲ್ಲೂಕಿನ ಸಣಾಪುರ ಗ್ರಾಮದಲ್ಲಿರುವ ಸಮತೋಲನಾ ಜಲಾಶಯದ (ಕೆರೆ) ಬಳಿಯ ನೀರಿನ ಟ್ಯಾಂಕ್​ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರಿಂದ 3 ಸಾವಿರ ಮೌಲ್ಯದ ಗಾಂಜಾ,ಒಂದು ಕಾರು ಮತ್ತು ಬೈಕ್​ನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಇದನ್ನೂ ಓದಿ : ಕಸದ ರಾಶಿಯಲ್ಲಿ ಅಡಗಿಸಿಟ್ಟಿದ್ದ ಹಸುಗೂಸಿನ ಮೇಲೆ ಹರಿದ ವಾಹನಗಳು: ಬೆಂಗಳೂರಿನಲ್ಲೊಂದು ದಾರುಣ ಘಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.