ETV Bharat / state

ಜೀವ ವಿಮಾ ಪ್ರಕರಣ.. ಆನ್‌ಲೈನ್ ಮೂಲಕವೇ ಇತ್ಯರ್ಥಪಡಿಸಲು ಸೂಚನೆ

ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಸಂಪೂರ್ಣ ಗಣಕೀಕರಣ ಕಾರ್ಯ ಪ್ರಗತಿಯಲ್ಲಿದ್ದು, ಈಗಾಗಲೇ ಪ್ರಾಯೋಗಿಕವಾಗಿ ಬೆಂಗಳೂರು ನಗರ, ಬೆಳಗಾವಿ, ಚಿಕ್ಕಮಗಳೂರು, ಧಾರವಾಡ, ಮಂಡ್ಯ, ಮೈಸೂರು, ಕೊಡಗು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ.

ವಿಧಾನಸೌಧ
ವಿಧಾನಸೌಧ
author img

By

Published : Oct 10, 2022, 10:50 PM IST

ಬೆಂಗಳೂರು: ಜೀವ ವಿಮಾ ಪಾಲಿಸಿಗಳ ಮೇಲೆ ಸಾಲ ಮಂಜೂರಾತಿ ಮತ್ತು ಅವಧಿ ಪೂರೈಕೆ ಪ್ರಕರಣಗಳನ್ನು ಕಡ್ಡಾಯವಾಗಿ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಇತ್ಯರ್ಥಪಡಿಸಲಾಗುತ್ತದೆ.

ಜೀವ ವಿಮಾ ಪಾಲಿಸಿ
ಜೀವ ವಿಮಾ ಪಾಲಿಸಿ

ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಸಂಪೂರ್ಣ ಗಣಕೀಕರಣ ಕಾರ್ಯ ಪ್ರಗತಿಯಲ್ಲಿದ್ದು, ಈಗಾಗಲೇ ಪ್ರಾಯೋಗಿಕವಾಗಿ ಬೆಂಗಳೂರು ನಗರ, ಬೆಳಗಾವಿ, ಚಿಕ್ಕಮಗಳೂರು, ಧಾರವಾಡ, ಮಂಡ್ಯ, ಮೈಸೂರು, ಕೊಡಗು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ.

ತಂತ್ರಾಂಶವನ್ನು ಉಳಿದ 22 ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ. ಆದ್ದರಿಂದ ಇನ್ನು ಮುಂದೆ ರಾಜ್ಯದ 31 ಜಿಲ್ಲೆಗಳಲ್ಲಿ ಜೀವ ವಿಮಾ ಪಾಲಿಸಿಗಳ ಮೇಲೆ ಸಾಲ ಮಂಜೂರಾತಿ ಮತ್ತು ಅವಧಿ ಪೂರೈಕೆ ಪ್ರಕರಣಗಳನ್ನು ಕಡ್ಡಾಯವಾಗಿ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಇತ್ಯರ್ಥಪಡಿಸಲು ಸೂಚಿಸಿದೆ.

ಇನ್ನು ಮುಂದೆ ಸಾಲ ಮಂಜೂರಾತಿ ಹಾಗೂ ಅವಧಿ ಪೂರೈಕೆ ಪ್ರಕರಣಗಳನ್ನು ಆಫ್‌ಲೈನ್ ಮೂಲಕ ಇತ್ಯರ್ಥಪಡಿಸುವಂತಿಲ್ಲ ಹಾಗೂ ಭೌತಿಕವಾಗಿ ಕಡತದಲ್ಲಿ ನಿರ್ವಹಿಸುತ್ತಿದ್ದ ಪ್ರಕ್ರಿಯೆಗಳನ್ನು ನಿಲ್ಲಿಸತಕ್ಕದ್ದು.

ಆನ್‌ಲೈನ್​ನಲ್ಲಿ ಅನುಮೋದಿಸುವ ಮುನ್ನ ಲೆಕ್ಕಾಚಾರದ ಎಲ್ಲಾ ವಿವರಗಳನ್ನು ಕಡ್ಡಾಯವಾಗಿ ಪರಿಶೀಲಿಸಿದ ನಂತರವೇ ಹಣ ಪಾವತಿಗೆ ತಂತ್ರಾಂಶದಲ್ಲಿ ಅನುಮೋದಿಸುವುದು, ಹೆಚ್ಚುವರಿಯಾಗಿ ಹಣ ಪಾವತಿಸಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಯು ಸಂಪೂರ್ಣ ಜವಾಬ್ದಾರರಾಗಿರುತ್ತಾರೆ. ಉಪ ನಿರ್ದೇಶಕರ ಮತ್ತು ನಿರ್ದೇಶಕರ ಆರ್ಥಿಕ ಅಧಿಕಾರ ವ್ಯಾಪ್ತಿಯನ್ವಯ ಪಕರಣಗಳನ್ನು ಆನ್‌ಲೈನ್‌ನಲ್ಲಿ ಅನುಮೋದನೆಗೆ ಸಲ್ಲಿಸುವುದು. ಭೌತಿಕ ಕಡತಗಳನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ ಎಂದು ಸರ್ಕಾರಿ ವಿಮಾ ಇಲಾಖೆ ತಿಳಿಸಿದೆ.

ಓದಿ: ನಮ್ಮ ದೇಶದಲ್ಲಿ ಯಾವುದರಿಂದಲೂ ಧರ್ಮವನ್ನು ಹೊರಗೆ ತೆಗೆಯೋಕೆ ಆಗಲ್ಲ: ಬಿ ಎಲ್ ಸಂತೋಷ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.