ETV Bharat / state

'18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಲಸಿಕೆ, ಮೊದಲ ಡೋಸ್‌ ನಂತರ ಕಾಲೇಜು ಆರಂಭಕ್ಕೆ ನಿರ್ಧಾರ'

author img

By

Published : Jun 24, 2021, 7:15 PM IST

vaccination
ಲಸಿಕೆ

ಮುಖ್ಯಮಂತ್ರಿಗಳ ಆಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಲಸಿಕೆ ಹಾಕಿದ ನಂತರ ಪದವಿ ತರಗತಿಗಳನ್ನು ಆರಂಭಿಸುವ ಬಗ್ಗೆ ಚರ್ಚಿಸಲಾಗಿದೆ. 18 ವರ್ಷ ಮೇಲ್ಪಟ್ಟ ಎಲ್ಲ ಕಾಲೇಜು ವಿದ್ಯಾರ್ಥಿಗಳು, ಬೋಧಕ ಹಾಗೂ ಸಹಾಯಕ ಸಿಬ್ಬಂದಿಗೆ ಆದ್ಯತೆ ಮೇಲೆ ಕೋವಿಡ್‌ ಲಸಿಕೆ ನೀಡಲಾಗುವುದು ಎಂದು ಡಿಸಿಎಂ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಂಗಳೂರು: ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲ ಕಾಲೇಜು ವಿದ್ಯಾರ್ಥಿಗಳು, ಬೋಧಕ ಹಾಗೂ ಸಹಾಯಕ ಸಿಬ್ಬಂದಿಗೆ ಆದ್ಯತೆ ಮೇಲೆ ಕೋವಿಡ್‌ ಲಸಿಕೆ ನೀಡಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಡಿಸಿಎಂ ಟ್ವೀಟ್‌ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳ ಸಮನ್ವಯದೊಂದಿಗೆ ಹಾಗೂ ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಲಸಿಕೆ ಆಭಿಯಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ಈಗಾಗಲೇ ಈ ಬಗ್ಗೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

  • ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಪದವಿ, ಡಿಪ್ಲೊಮಾ ಹಾಗೂ ಐಟಿಐ ಕಾಲೇಜುಗಳ ವಿದ್ಯಾರ್ಥಿಗಳು, ಬೋಧಕ ಹಾಗೂ ಬೆಂಬಲ ಸಿಬ್ಬಂದಿಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಶೀಘ್ರದಲ್ಲೇ ಕಾಲೇಜುಗಳಿಂದ ಮಾಹಿತಿ ಪಡೆದು ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ, ಸಿಬ್ಬಂದಿಗಳಿಗೆ ಕಾಲೇಜು ಆವರಣದಲ್ಲೇ ಲಸಿಕೆ ಕ್ಯಾಂಪ್ ಅಯೋಜಿಸಲಾಗುವುದು. pic.twitter.com/lRbYYPFwWl

    — Dr Sudhakar K (@mla_sudhakar) June 23, 2021 " class="align-text-top noRightClick twitterSection" data=" ">

ಮುಖ್ಯಮಂತ್ರಿಗಳ ಆಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಲಸಿಕೆ ಹಾಕಿದ ನಂತರ ಪದವಿ ತರಗತಿಗಳನ್ನು ಆರಂಭಿಸುವ ಬಗ್ಗೆ ಚರ್ಚಿಸಲಾಯಿತು. ಕಾಲೇಜು ಆರಂಭಕ್ಕೂ ಮೊದಲೇ ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ ಹಾಗೂ ಸಹಾಯಕ ಸಿಬ್ಬಂದಿಗೆ ಲಸಿಕೆ ನೀಡಲು ನಿರ್ಣಯ ಕೈಗೊಳ್ಳಲಾಗಿದೆ.

ಆಯಾ ಕಾಲೇಜುಗಳಲ್ಲಿಯೇ ಲಸಿಕೆ ಅಭಿಯಾನ ಕೈಗೊಳ್ಳಲಾಗುವುದು. ಇವರೆಲ್ಲರೂ ಲಸಿಕೆ ಪಡೆಯಲು ಆಯಾ ಸಂಸ್ಥೆಗಳಲ್ಲಿ ನೀಡಲಾಗುವ ದೃಢೀಕರಣ ಪತ್ರ ಹಾಜರುಪಡಿಸಬೇಕು. ಪ್ರತಿ ಕಾಲೇಜಿನ ಮುಖ್ಯಸ್ಥರು ಹಾಗೂ ಇನ್ನೊಬ್ಬ ಅಧಿಕಾರಿಯನ್ನು ನೋಡೆಲ್‌ ಅಧಿಕಾರಿಯನ್ನಾಗಿ ನಿಯೋಜನೆ ಮಾಡಲಾಗುವುದು ಎಂದು ಹೇಳಿದರು.

ಲಸಿಕಾಕರಣಕ್ಕೆ ಪ್ರತ್ಯೇಕ ಮಾರ್ಗಸೂಚಿ:

ಈ ಲಸಿಕಾಕರಣಕ್ಕೆ ಪ್ರತ್ಯೇಕ ಮಾರ್ಗಸೂಚಿ ಇರುತ್ತದೆ. ಅದರಂತೆಯೇ ಲಸಿಕಾಕರಣ ನಡೆಸಲಾಗುವುದು. ಅಲ್ಲದೇ, ನೋಡೆಲ್‌ ಅಧಿಕಾರಿಗಳು ಆಯಾ ಶಿಕ್ಷಣ ಸಂಸ್ಥೆಯಲ್ಲಿನ ಎಲ್ಲ ಅರ್ಹರಿಗೂ ತಪ್ಪದೇ ಲಸಿಕೆ ಕೊಡಿಸಬೇಕು ಹಾಗೂ ಅದರ ಬಗ್ಗೆ ಖಾತರಿ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ.

ಲಸಿಕೆ ಪಡೆದ ನಂತರ ನೇರ ತರಗತಿ:

ಈ ವಿಭಾಗದ ಎಲ್ಲರಿಗೂ ಮೊದಲ ಡೋಸ್‌ ಲಸಿಕೆ ಹಾಕಿದ ನಂತರ ನೇರ ತರಗತಿಗಳನ್ನು ಆರಂಭ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು. ಕಲಾನಿಧಿ-2021 ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಈ ವಿಷಯದ ಬಗ್ಗೆ ಮಾತನಾಡಿ, ಲಸಿಕೆ ಕೊಡಲಿ ಬಿಡಲಿ ಕಲಿಕೆ ನಿಲ್ಲುವುದಿಲ್ಲ. ಡಿಜಿಟಲ್‌ ವೇದಿಕೆಯಲ್ಲಿ ಕಲಿಕೆ ಮುಂದುವರಿದಿದೆ. ವ್ಯಾಕ್ಸಿನ್‌ ಪಡೆದ ಮೇಲೆ ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರಾಗಬಹುದು ಅಥವಾ ತಾವಿದ್ದಲ್ಲಿಯೇ ಆನ್‌ಲೈನ್‌ ತರಗತಿಗೆ ಹಾಜರಾಗಬಹುದು ಎಂದರು.

ಹಾಜರಾತಿ ಮಾತ್ರ ಕಡ್ಡಾಯ. ಮೊದಲ ಡೋಸ್‌ ಪಡೆದ ನಂತರ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಸಲಾರಂಭಿಸುತ್ತದೆ. ಒಂದು ವೇಳೆ ನೇರ ತರಗತಿಗೆ ಹಾಜರಾದ ನಂತರವೂ ಸೋಂಕು ಬಂದರೆ ಜೀವಕ್ಕೆ ಹಾನಿ ಆಗುವುದಿಲ್ಲ. ಹೀಗಾಗಿ ಎಲ್ಲ ವಿದ್ಯಾರ್ಥಿ, ಸಿಬ್ಬಂದಿ ಲಸಿಕೆ ಪಡೆಯಬೇಕು ಎಂದರು.

ಇದನ್ನೂ ಓದಿ: 'ಕೊರೊನಾಗೆ ಲಸಿಕೆಯೇ ಮದ್ದು, ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ವ್ಯಾಕ್ಸಿನ್​'

ಇನ್ನು ರಾಜ್ಯದಲ್ಲಿ ಡೆಲ್ಟಾ ಪ್ಲಸ್‌ ಪತ್ತೆಯಾಗಿದ್ದರೂ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಿದೆ. ಯಾವುದಕ್ಕೂ ಕೊರತೆ ಇಲ್ಲ. ಸದ್ಯಕ್ಕೆ ನಮ್ಮಲ್ಲಿ ಲಭ್ಯ ಇರುವ ಲಸಿಕೆಗಳು ಡೆಲ್ಟಾ ಪ್ಲಸ್‌ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡುವ ಶಕ್ತಿ ಹೊಂದಿವೆ ಎಂದು ಡಿಸಿಎಂ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.