ETV Bharat / state

ಕಲ್ಯಾಣ ಕರ್ನಾಟಕ ವೃಂದದಲ್ಲಿ ನೇಮಕಾತಿ ಆದೇಶ ನೀಡಲು ಸರ್ಕಾರ ಸೂಚನೆ

author img

By

Published : Nov 26, 2021, 1:09 AM IST

ಕಲ್ಯಾಣ ಕರ್ನಾಟಕ ವೃಂದದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿ ನೀಡಿರುವ ಹಿನ್ನೆಲೆ, ನೇಮಕಾತಿ ಆದೇಶ ನೀಡುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಕಲ್ಯಾಣ ಕರ್ನಾಟಕ ವೃಂದದಲ್ಲಿ ನೇಮಕಾತಿ ಆದೇಶ ನೀಡಲು ಸರ್ಕಾರ ಸೂಚನೆ
ಕಲ್ಯಾಣ ಕರ್ನಾಟಕ ವೃಂದದಲ್ಲಿ ನೇಮಕಾತಿ ಆದೇಶ ನೀಡಲು ಸರ್ಕಾರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದಲ್ಲಿ ಈಗಾಗಲೇ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿ ನೀಡಿರುವ ಪ್ರಕರಣಗಳಲ್ಲಿ, ನೇಮಕಾತಿ ಆದೇಶ ನೀಡುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಕೋವಿಡ್-19ನಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಿ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲವನ್ನು ಕ್ರೋಢೀಕರಿಸಲು ಮತ್ತು ವೆಚ್ಚದ ಮಿತವ್ಯಯ ಪಾಲಿಸುವ ದೃಷ್ಟಿಯಿಂದ 2021-22ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಬ್ಯಾಕ್‌ಲಾಗ್ ಹುದ್ದೆಗಳು ಸೇರಿದಂತೆ ಹೊಸ ಹುದ್ದೆಗಳ ಸೃಜನೆ ಮತ್ತು ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಡಿಯಲಾಗಿತ್ತು.ಆದರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳಲ್ಲಿ ಅಧಿಕಾರಿ/ಸಿಬ್ಬಂದಿಗಳ ಕೊರತೆ ಎದುರಾಗಿದೆ. ಆದ್ದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಲು ಅನುಕೂಲವಾಗುವಂತೆ, ನೇರ ನೇಮಕಾತಿಯಡಿ ಬಾಕಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅನುವು ಮಾಡಿಕೊಡಲಾಗಿದೆ.

ಇನ್ನುಳಿದ ಇಲಾಖೆಗಳಲ್ಲಿ ವೃಂದಬಲ ಶೇ.80ಕ್ಕಿಂತ ಕಡಿಮೆ ಇದ್ದಲ್ಲಿ, ಅಂತಹ ಸಂದರ್ಭಗಳಲ್ಲಿ ವೃಂದಬಲದ ಶೇ.60ರವರೆಗೆ ಹುದ್ದೆಗಳನ್ನು ನೇರ ನೇಮಕಾತಿಯಡಿ ಭರ್ತಿ ಮಾಡಿಕೊಳ್ಳಲು ಆಡಳಿತ ಇಲಾಖೆಗಳು ತಮ್ಮ ಹಂತದಲ್ಲಿಯೇ ನಿಯಮಾನುಸಾರ ಪರಿಶೀಲಿಸಿ, ನೇಮಕಾತಿ ಮುಂದುವರೆಸಲು ಕ್ರಮವಹಿಸಬೇಕು. ಶೀಘ್ರಲಿಪಿಗಾರರು, ಬೆರಳಚ್ಚುಗಾರ, ವಾಹನ ಚಾಲಕರು ಮತ್ತು ಗ್ರೂಪ್ ಡಿ ವೃಂದಗಳ ಹುದ್ದೆಗಳನ್ನು ಅನುದಾನದ ಲಭ್ಯತೆಗೆ ಒಳಪಟ್ಟು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವಂತೆ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.