ETV Bharat / state

ಶಿಕ್ಷಕರ ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿ ಸರ್ಕಾರ ಆದೇಶ

author img

By

Published : Jan 30, 2023, 10:38 PM IST

ಶಿಕ್ಷಕರ ವರ್ಗಾವಣೆ ಅರ್ಜಿ ಸಲ್ಲಿಕೆ ಇಂದು ಕೊನೆಯ ದಿನಾಂಕವಾಗಿತ್ತು ಆದರೆ ಈಗ ಸರ್ಕಾರ ಈ ದಿನಾಂಕವನ್ನು ಮಾರ್ಚ್​ ನಾಲ್ಕರ ವರೆಗೆ ಮುಂದೂಡಿ ಆದೇಶ ಹೊರಡಿಸಿದೆ.

teacher transfer application submission period
ಶಿಕ್ಷಕರ ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿ ಸರ್ಕಾರ ಆದೇಶ

ಬೆಂಗಳೂರು: 2022-23ನೇ ಸಾಲಿನ ಸರ್ಕಾರಿ ಪಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಾಲಾ ಶಿಕ್ಷಕರು ತತ್ಸಮಾನ ವೃಂದದ ಶಿಕ್ಷಕರಗಳು ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಕ್ರಮಗಳ ಮುಂದುವರಿಕೆ ಮತ್ತು ವರ್ಗಾವಣೆಗೆ ಅರ್ಜಿಸಲ್ಲಿಸುವ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿ ಆದೇಶ ಹೊರಡಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರ ಅಧಿ ಸೂಚನೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 (2020ರ ಕರ್ನಾಟಕ ಆದಿನಿಯಮ ಸಂಖ್ಯೆ:14) ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು- 2020ರ ನಿಯಮಗಳಂತೆ, ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮ-2022ರ ಪ್ರಕಾರ ಉಲ್ಲೇಖಿತ-1ರಲ್ಲಿ ಈಗಾಗಲೇ ಮಾರ್ಗಸೂಚಿ ಸಹಿತ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು.

ಕೆಲವು ತಾಂತ್ರಿಕ ಮತ್ತು ಆಡಳಿತಾತ್ಮಕ ಕಾರಣಗಳಿಂದಾಗಿ ಹೆಚ್ಚುವರಿ ಶಿಕ್ಷಕರ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಶಿಕ್ಷಕರುಗಳು / ಕ್ಷೇತ್ರಶಿಕ್ಷಣಾಧಿಕಾರಿಗಳು ಸೇವಾ ಮಾಹಿತಿಯನ್ನು ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ನಿಗದಿತ ಕಾಲಾವಕಾಶದೊಳಗೆ ಆಗಿರುವ ಲೋಪದಿಂದಾಗಿ ಸಮಸ್ಯೆ ಉದ್ಭವವಾಗಿರುತ್ತದೆ. ಪ್ರಸ್ತುತ ಸಮಸ್ಯೆಯನ್ನು ಇತ್ಯರ್ಥಪಡಿಸಿ ಹೆಚ್ಚುವರಿ ಪ್ರಕ್ರಿಯೆಯನ್ನು ಮುಂದುವರೆಸಲು ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಕೆಳಕಂಡಂತೆ ದಿನಾಂಕಗಳನ್ನು ಮರು ನಿಗದಿಪಡಿಸಲಾಗಿದೆ.

Govt orders extension of teacher transfer application submission period
ಶಿಕ್ಷಕರ ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿ ಸರ್ಕಾರ ಆದೇಶ

ರಾಜ್ಯದ ಎಲ್ಲಾ ಶಿಕ್ಷಕರು ಮತ್ತು ಸಕ್ಷಮ ವರ್ಗಾವಣಾ ಪ್ರಾಧಿಕಾರಿಗಳು ಹಾಗೂ ಅನುಷ್ಟಾನಾಧಿಕಾರಿಗಳು, ಈ ಪತ್ರದೊಂದಿಗೆ ನೀಡಲಾಗಿರುವ ಸೂಚನೆ/ ಮಾರ್ಗಸೂಚಿ ಅಂಶಗಳನ್ನು ಕಡ್ಡಾಯವಾಗಿ ಓದಿಕೊಳ್ಳತಕ್ಕದ್ದು, ಅದರಂತೆ ಕಾರ್ಯ ನಿರ್ವಹಿಸಲು ತಿಳಿಸಿದೆ. ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಗಳು ಸ್ಥಗಿತಗೊಂಡಿರುವುದಿಲ್ಲ ಮುಂದುವರೆಯುತ್ತದೆ. ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: 30/01/2023ರವರೆಗೆ ನಿಗಧಿಪಡಿಸಲಾಗಿತ್ತು, ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಂತಿಮವಾಗಿ ದಿನಾಂಕ: 04/03/2022 ರವರೆಗೆ ವಿಸ್ತರಿಸಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ವಿಧಾನಸಭೆ ಚುನಾವಣೆ: ಅಧಿಕಾರಿ ಮತ್ತು ಸಿಬ್ಬಂದಿ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿಗೆ ಸರ್ಕಾರದಿಂದ ಮಾರ್ಗಸೂಚಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.