ETV Bharat / state

ಇನ್ಮುಂದೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಇರಲ್ಲ

author img

By

Published : Nov 5, 2021, 2:59 PM IST

Updated : Nov 5, 2021, 3:36 PM IST

ಕೊರೊನಾ ಎರಡನೇ ಅಲೆ ಸಮಯದಲ್ಲಿ ರಾಜ್ಯದಲ್ಲಿ ಜಾರಿಗೊಳಿಸಿದ್ದ ನೈಟ್ ಕರ್ಫ್ಯೂವನ್ನು ಸರ್ಕಾರ ಹಿಂಪಡೆದಿದೆ.

vidhana soudha
ವಿಧಾನಸೌಧ

ಬೆಂಗಳೂರು: ಕೋವಿಡ್​ ನಿಯಂತ್ರಣಕ್ಕೆ ರಾಜ್ಯಾದ್ಯಂತ ವಿಧಿಸಲಾಗಿದ್ದ ನೈಟ್ ಕರ್ಫ್ಯೂವನ್ನು ಸರ್ಕಾರ ಹಿಂಪಡೆದಿದೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಜುಲೈ ತಿಂಗಳಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹೇರಲಾಗಿತ್ತು. ಇದೀಗ ಕೊರೊನಾ ಪ್ರಕರಣ ಇಳಿಕೆಯಾಗುತ್ತಿದ್ದು ನೈಟ್ ಕರ್ಫ್ಯೂ ಹಿಂದಕ್ಕೆ ಪಡೆಯಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಹೇರಲಾಗಿತ್ತು.

ರಾಜ್ಯದಲ್ಲಿ ನೈಟ್ ಕರ್ಫ್ಯೂ ಇರಲ್ಲ
ರಾಜ್ಯದಲ್ಲಿ ನೈಟ್ ಕರ್ಫ್ಯೂ ಇರಲ್ಲ

ಕೊರೊನಾ ನಿಯಮ ಪಾಲನೆಯೊಂದಿಗೆ ಕುದುರೆ ಓಟದ ಪಂದ್ಯಗಳನ್ನು ನಡೆಸಲು ಸರ್ಕಾರ ಅನುಮತಿಸಿದೆ. ಪೂರ್ಣವಾಗಿ ಕೊರೊನಾ ಲಸಿಕೆ ಪಡೆದಂತಹ ವ್ಯಕ್ತಿಗಳಿಗೆ ಮಾತ್ರ ಇಂತಹ ಅವಕಾಶ ಕಲ್ಪಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ‌.

Last Updated : Nov 5, 2021, 3:36 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.