ETV Bharat / state

ಜನಾದೇಶ ಸ್ವಾಗತಿಸುತ್ತೇನೆ, ನೂತನ ಸರ್ಕಾರಕ್ಕೆ ಶುಭವಾಗಲಿ: ಹೆಚ್‌ಡಿಕೆ

author img

By

Published : May 13, 2023, 1:48 PM IST

h-d-kumaraswamy-reaction-on-karnataka-assembly-elections-results
ಚುನಾವಣೆ ಫಲಿತಾಂಶ: ಜನಾದೇಶ ಸ್ವಾಗತಿಸುವುದಾಗಿ ಹೇಳಿದ ಹೆಚ್.ಡಿ.ಕುಮಾರಸ್ವಾಮಿ

ರಾಜ್ಯದ ಜನತೆ ನೀಡಿದ ಚುನಾವಣಾ ಫಲಿತಾಂಶವನ್ನು ಹೆಚ್.ಡಿ. ಕುಮಾರಸ್ವಾಮಿ ಸ್ವಾಗತಿಸಿದ್ದು, ನೂತನ ಸರ್ಕಾರಕ್ಕೆ ಶುಭವಾಗಲಿ ಎಂದರು.

ಬೆಂಗಳೂರು: ಜನಾದೇಶವನ್ನು ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದ ಜನತೆ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ ಎಂದು ತಿಳಿಸಿದ್ದಾರೆ.

  • ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು. 1/3

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 13, 2023 " class="align-text-top noRightClick twitterSection" data=" ">

ಇದೇ ವೇಳೆ, ಪಕ್ಷವನ್ನು ಆಶೀರ್ವದಿಸಿದ ಜನತೆಗೆ ಮಾಜಿ ಮುಖ್ಯಮಂತ್ರಿ ಅಭಿನಂದನೆ ಸಲ್ಲಿಸಿದ್ದಾರೆ. ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರ್ಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಗಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ಗೆ ಪ್ರಚಂಡ ಗೆಲುವು: ಡಿಕೆಶಿ ಭಾವುಕ ನುಡಿ- ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.