ETV Bharat / state

ಕನ್ನಡಪರ ಹೋರಾಟಗಾರರ ಮೇಲೆ ಪ್ರತಾಪ ತೋರಿಸಬೇಡಿ : ಸರ್ಕಾರದ ಕಿವಿ ಹಿಂಡಿದ ಹೆಚ್​ಡಿಕೆ

author img

By

Published : Dec 19, 2021, 4:54 PM IST

ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿಯವರು ಬಿಜೆಪಿ ಸರ್ಕಾರ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಟ್ವೀಟ್ ಮಾಡುವ ಮೂಲಕ ಟೀಕೆ ಮಾಡಿದ್ದಾರೆ..

HD Kumaraswamy gave comments against BJP govt
ಬಿಜೆಪಿ ಸರ್ಕಾರದ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಟೀಕೆ

ಬೆಂಗಳೂರು : ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದನ್ನು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರ್ಕಾರ ಪ್ರತಾಪ ತೋರಿಸುವುದು ಬೇಡ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

  • ಶಿವಾಜಿ ಪ್ರತಿಮೆ ವಿರೂಪ ಮಾಡಿದ ವಿಷಯವನ್ನು ಪ್ರಸ್ತಾಪ ಮಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅನಗತ್ಯ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿಯಲ್ಲಿದ್ದು ಒಕ್ಕೂಟ ವ್ಯವಸ್ಥೆ ಆಶಯವನ್ನು ಗಾಳಿಗೆ ತೂರುವ ಉದ್ಧಟತನದ ಮಾತೇಕೆ? 2/5

    — H D Kumaraswamy (@hd_kumaraswamy) December 19, 2021 " class="align-text-top noRightClick twitterSection" data=" ">

ಶಿವಾಜಿ ಪ್ರತಿಮೆ ವಿರೂಪ ಮಾಡಿದ ವಿಷಯವನ್ನು ಪ್ರಸ್ತಾಪ ಮಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಅನಗತ್ಯ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿಯಲ್ಲಿದ್ದು ಒಕ್ಕೂಟ ವ್ಯವಸ್ಥೆ ಆಶಯವನ್ನು ಗಾಳಿಗೆ ತೂರುವ ಉದ್ಧಟತನದ ಮಾತೇಕೆ ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

  • ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರಕಾರ ಪ್ರತಾಪ ತೋರಿಸುವುದು ಬೇಡ.1/5

    — H D Kumaraswamy (@hd_kumaraswamy) December 19, 2021 " class="align-text-top noRightClick twitterSection" data=" ">

ಶಿವಾಜಿ ಮಹಾರಾಜರ ಬಗ್ಗೆ ಗೌರವ ಕೊಡೋಣಾ, ಹಾಗಂತ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಬಗ್ಗೆ ಮರಾಠಿಗರಿಗೆ ಅಸಡ್ಡೆ ಯಾಕೆ? ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಗಲಿ ಎಂದು ಹೋರಾಟ ನಡೆಸಿದ ರಾಯಣ್ಣನವರ ಪ್ರತಿಮೆ ಹಾಳು ಮಾಡಿದ ಕೆಟ್ಟ ಮನಸ್ಸುಗಳಿಗೆ ಏನು ಹೇಳುವುದು.

ವಿಕೃತ ಮನಸ್ಸು ಯಾರದ್ದು ಎನ್ನುವುದು ಉದ್ಧವ್ ಠಾಕ್ರೆಯವರು ಅರ್ಥ ಮಾಡಿಕೊಂಡರೆ ಉತ್ತಮ. ನಿಮಗೆ ಶಿವಾಜಿ ಹೇಗೆ ಮುಖ್ಯವೋ, ನಮಗೆ ಸಂಗೊಳ್ಳಿ ರಾಯಣ್ಣ ಹಾಗೆಯೇ ಪೂಜ್ಯರು. ಈ ವಿಷಯ ನಿಮಗೆ ಯಾಕೆ ಅರ್ಥವಾಗಲಿಲ್ಲ ಎಂದಿದ್ದಾರೆ.

  • ವಿಕೃತ ಮನಸ್ಸು ಯಾರದ್ದು ಎನ್ನುವುದು ಉದ್ಧವ್ ಠಾಕ್ರೆ ಅವರು ಅರ್ಥ ಮಾಡಿಕೊಂಡರೆ ಉತ್ತಮ. ನಿಮಗೆ ಶಿವಾಜಿ ಹೇಗೆ ಮುಖ್ಯರೋ, ನಮಗೆ ಸಂಗೊಳ್ಳಿ ರಾಯಣ್ಣ ಅವರು ಹಾಗೆಯೇ ಪೂಜ್ಯರು. ಈ ವಿಷಯ ನಿಮಗೆ ಅರ್ಥವಾಗಲಿಲ್ಲ, ಯಾಕೆ? 4/5

    — H D Kumaraswamy (@hd_kumaraswamy) December 19, 2021 " class="align-text-top noRightClick twitterSection" data=" ">

ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣನವರ ಪ್ರತಿಮೆಗೆ ಹಾನಿ ಮಾಡಿದ್ದು ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಅಧಿವೇಶನಕ್ಕೆ ಹೆಚ್‌ಡಿಕೆ ಗೈರು ; ದಳಪತಿಗೆ ಬೆಳಗಾವಿ ಅಧಿವೇಶನ ಬಗ್ಗೆ ನಿರಾಸಕ್ತಿನಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.