ETV Bharat / state

ಸಿಂದಗಿ ಉಪ ಚುನಾವಣೆ: ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ

author img

By

Published : Oct 1, 2021, 7:46 PM IST

Updated : Oct 2, 2021, 12:44 PM IST

ಅನೇಕ ವರ್ಷಗಳಿಂದ ಸಮಾಜಮುಖಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನಾಜಿಯಾ ಶಕೀಲಾ ಅಂಗಡಿ ಅವರು ಅತ್ಯುತ್ತಮ ಅಭ್ಯರ್ಥಿ ಆಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಲ್ಲುವ ಮಹಿಳೆಯಾಗಿದ್ದಾರೆ ಎಂದು ಹೆಚ್​ಡಿಕೆ ತಿಳಿಸಿದ್ದಾರೆ.

HDK Announced the name of Nazma Shakeela as JDS candidate for Sindagi By election
ಸಿಂಧಗಿ ಉಪ ಚುನಾವಣೆ: ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ

ಬೆಂಗಳೂರು: ಸಿಂದಗಿ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಿದ್ದು, ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ‌‌.ಕುಮಾರಸ್ವಾಮಿ ಅಭ್ಯರ್ಥಿ ಹೆಸರನ್ನು ಘೋಷಿಸಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು, ಅದಕ್ಕೆ ಮುನ್ನುಡಿ ಎಂಬಂತೆ ಸಿಂದಗಿ ಕ್ಷೇತ್ರದ ಉಪಚುನಾವಣೆಗೆ ಮಹಿಳಾ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ. ನಾಜಿಯಾ ಶಕೀಲಾ ಅಂಗಡಿ ಅವರು ಎಂಎ, ಬಿಎಡ್ ಪದವೀಧರರಾಗಿದ್ದು, ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಅನೇಕ ವರ್ಷಗಳಿಂದ ಸಮಾಜಮುಖಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನಾಜಿಯಾ ಶಕೀಲಾ ಅಂಗಡಿ ಅವರು ಅತ್ಯುತ್ತಮ ಅಭ್ಯರ್ಥಿ ಆಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಲ್ಲುವ ಮಹಿಳೆಯಾಗಿದ್ದಾರೆ. ಪಕ್ಷನಿಷ್ಠೆ ಜೊತೆಗೆ ಪ್ರಾಮಾಣಿಕ ಹಾಗೂ ಸೇವಾ ಮನೋಭಾವ ಹೊಂದಿರುವ ನಾಜಿಯಾ ಶಕೀಲಾ ಅಂಗಡಿ ಅವರನ್ನು ಸಮಸ್ತ ಸಿಂದಗಿ ಮತದಾರರು ಆಶೀರ್ವದಿಸಿ ಆಯ್ಕೆ ಮಾಡಬೇಕು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

ಈಗಾಗಲೇ ಹಾನಗಲ್ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯನ್ನಾಗಿ ಪದವೀಧರ ನಿಯಾಜ್ ಶೇಕ್ ಅವರನ್ನು ಕುಮಾರಸ್ವಾಮಿ ಅವರು ಆಯ್ಕೆ ಮಾಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಉತ್ತಮ ಶಿಕ್ಷಣ ಪಡೆದಿರುವ ವಿದ್ಯಾವಂತರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದ್ದು, ಎರಡು ಕ್ಷೇತ್ರಗಳಲ್ಲಿ ಜನರು ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವಾದ ಮಾಡಬೇಕು ಎಂದು ಕೋರಿದ್ದಾರೆ.

Last Updated :Oct 2, 2021, 12:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.