ETV Bharat / state

ಶ್ರೀಲಂಕಾದ ಕರಾವಳಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಆ.26ರವರೆಗೆ ಭಾರಿ ಮಳೆ ಸಾಧ್ಯತೆ

author img

By

Published : Aug 22, 2021, 5:56 PM IST

ರಾಜ್ಯಾದ್ಯಂತ ಭಾನುವಾರ ನೈರುತ್ಯ ಮುಂಗಾರು ಚುರುಕಾಗಿತ್ತು. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ ಕಲಬುರಗಿಯಲ್ಲಿ 10 ಸೆಂ.ಮೀ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ 9 ಸೆಂ.ಮೀ, ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ 5 ಸೆಂ.ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ..

ರಾಜ್ಯದಲ್ಲಿ ಆ.26ರವರೆಗೆ ಭಾರಿ ಮಳೆ ಸಾಧ್ಯತೆ
Heavy rain in state till August 26th

ಬೆಂಗಳೂರು : ನೈರುತ್ಯ ಬಂಗಾಳ ಉಪಸಾಗರದ ಶ್ರೀಲಂಕಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ ಆಗಸ್ಟ್‌ 26ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ

ಆ.23ರಿಂದ 26ರವರೆಗೆ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂದಿನ ಎರಡು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ರಾಜ್ಯಾದ್ಯಂತ ಭಾನುವಾರ ನೈರುತ್ಯ ಮುಂಗಾರು ಚುರುಕಾಗಿತ್ತು. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ ಕಲಬುರಗಿಯಲ್ಲಿ 10 ಸೆಂ.ಮೀ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ 9 ಸೆಂ.ಮೀ, ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ 5 ಸೆಂ.ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.