ETV Bharat / state

ರಾಜ್ಯದ ಹಲವೆಡೆ ಆ.10ರವರೆಗೆ ಭಾರಿ ಮಳೆ ಸಾಧ್ಯತೆ: ಕೆಲ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್​

author img

By

Published : Aug 7, 2021, 5:17 AM IST

Heavy rains likely in many parts of the karnataka till 10 august
ಯೆಲ್ಲೋ ಅಲರ್ಟ್​

ಶನಿವಾರ (ಆ.7ರಂದು) ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂದಿನ ಎರಡು ದಿನ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20.5 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದೆ.

ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ಮತ್ತೆ ಏರಿಕೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನಲ್ಲಿ ಕೆಲವೆಡೆ ಆಗಸ್ಟ್‌ 10ರವರೆಗೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಶನಿವಾರ (ಆ.7ರಂದು) ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂದಿನ ಎರಡು ದಿನ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20.5 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಶುಕ್ರವಾರ ಸಹಜವಾಗಿದ್ದು, ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲ ಸ್ಥಳಗಳಲ್ಲಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗಿದೆ.

ಬೆಂಗಳೂರಲ್ಲಿ ಮಳೆ-ವಾಹನ ಸವಾರರ ಪರದಾಟ:

ಬೆಂಗಳೂರಿನ ಕೆಲವು ಭಾಗಗಳಲ್ಲಿ ಶುಕ್ರವಾರ ಜೋರು ಹಾಗೂ ಸಾಧಾರಣ ಮಳೆಯಾಗಿದೆ. ಹಲವೆಡೆ ತುಂತುರು ಮಳೆಯಾಗಿದ್ದು, ಸಂಜೆ ಬಳಿಕ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ರಾತ್ರಿಯ ವೇಳೆಯೂ ಕೂಡ ನಗರದಲ್ಲಿ ಬಹತೇಕ ಕಡೆ ಮಳೆ ಸುರಿದು ವಾಹನ ಸವಾರರು ಜನಜೀವನ ಕೊಂಚ ಅಸ್ತವ್ಯಸ್ತವಾಗಿತ್ತು.

ನಗರದ ಬೊಮ್ಮನಹಳ್ಳಿ, ಬೇಗೂರು, ಅಂಜನಪುರ ಹಾಗೂ ಗೊತ್ತಿಗೆರೆಯಲ್ಲಿ ಮಳೆ ಜೋರಾಗಿತ್ತು. ವಿದ್ಯಾಪೀಠ, ಆರ್.ಆರ್.ನಗರ, ಕೆಂಗೇರಿ, ಮಾರುತಿ ಮಂದಿರ, ನಾಗರಭಾವಿ, ಜ್ಞಾನಭಾರತಿ ವಾರ್ಡ್, ವಿಶ್ವನಾಥ ನಾಗೇನಹಳ್ಳಿ ಸೇರಿದಂತೆ ಕೆಲವು ಭಾಗಗಳಲ್ಲಿ ಸಂಜೆ ಮಳೆಯಾಗಿದೆ.

ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಮುಂದಿನ ಎರಡು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಆ.15ರಂದು ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಯುಪಿ ಸಿಎಂ ಯೋಗಿಗೆ ಬೆದರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.