ETV Bharat / state

ಸಾಕ್ಷ್ಯಾಧಾರಗಳ ಕೊರತೆ: ಚಿನ್ನದ ಸರ ಕದ್ದ ಆರೋಪಿಗಳು ಖುಲಾಸೆ

author img

By ETV Bharat Karnataka Team

Published : Oct 23, 2023, 6:10 PM IST

ಮೂರು ಸರಗಳ್ಳತನ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಇಬ್ಬರನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ.

High Court News
ಹೈಕೋರ್ಟ್ ಸುದ್ದಿ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಕಪ್ಪು ಬಣ್ಣದ ಪಲ್ಸರ್ ಬೈಕ್‌ನಲ್ಲಿ ಬಂದು ಚಾಕು ತೋರಿಸಿ ಚಿನ್ನದ ಸರ ಕದ್ದ ಆರೋಪ ಪ್ರಕರಣ ಸಂಬಂಧ ಸಾಕ್ಷ್ಯಾಧಾರಗಳ ಕೊರತೆಯಿಂದ ಉತ್ತರ ಪ್ರದೇಶದ ವೆಂಕಿ ಸಿಂಗ್ ಮತ್ತು ವಿಶಾಲ್ ಸಿಂಗ್ ಎಂಬ ಇಬ್ಬರು ಆರೋಪಿಗಳನ್ನು ಹೈಕೋರ್ಟ್ ಖುಲಾಸೆಗೊಳಿಸಿ ಆದೇಶಿಸಿದೆ. ಮೂವರು ಆರೋಪಿಗಳನ್ನು ದೋಷಮುಕ್ತರನ್ನಾಗಿ ಆದೇಶಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಚ್.ಬಿ.ಪ್ರಭಾಕರ ಶಾಸ್ತ್ರಿ ಮತ್ತು ನ್ಯಾಯಮೂರ್ತಿ ಅನಿಲ್ ಬಿ.ಕಟ್ಟಿ ಅವರಿದ್ದ ನ್ಯಾಯಪೀಠ ಆದೇಶಿಸಿದೆ.

ಮೂರು ಪ್ರಕರಣದಲ್ಲಿ ಆರೋಪಿಗಳು ಮಹಿಳೆಯನ್ನು ಚಿನ್ನಾಭರಣ ದೋಚಲು ಚಾಕು ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆದರೆ, ಆ ಬೆದರಕೆ ಹಾಕಿದ ಕತ್ತಿಯನ್ನು ವಶಪಡಿಸಿಕೊಂಡು ಸಾಕ್ಷ್ಯವನ್ನಾಗಿ ನ್ಯಾಯಾಲಯದ ಮಂದಿಡುವಲ್ಲಿ ವಿಫಲರಾಗಿದ್ದಾರೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಅಲ್ಲದೆ, ಪ್ರಸ್ತುತ ಪ್ರಕರಣದಲ್ಲಿ ತನಿಖಾಧಿಕಾರಿಗಳು ಅಪರಾಧ ಕೃತ್ಯ ನಡೆದಿರುವುದನ್ನು ನಡೆದಿರುವ ಸಂಬಂಧ ವಿವರಿಸಿದ್ದಾರೆ. ಆದರೆ, ಅದಕ್ಕೆ ಪೂರಕವಾದ ಸಾಕ್ಷ್ಯಗಳು ಇಲ್ಲ ಎಂದು ಪೀಠ ತಿಳಿಸಿದೆ.

ಆರೋಪಗಳ ಗುರುತು ಪತ್ತೆ ಮಾಡುವುದಕ್ಕೂ ಮುನ್ನ ಸಂತ್ರಸ್ತರಿಗೆ ತೋರಿಸಲಾಗಿದೆ. ಆ ಬಳಿಕ ಪೆರಡ್ ನಡೆಸಲಾಗಿದೆ. ಈ ಪ್ರಕ್ರಿಯೆಯಿಂದ ಬಂಧಿತರೇ ಆರೋಪಿಗಳು ಎಂದು ಸಂತ್ರಸ್ತರು ತಿಳಿಸಿರುತ್ತಾರೆ. ಆ ರೀತಿಯ ಪೆರೆಡ್‌ಗೆ ಯಾವುದೇ ಮೌಲ್ಯವಿಲ್ಲ ಎಂದು ಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಬೆಂಗಳೂರಿನಲ್ಲಿ ಕದ್ದ ಚಿನ್ನಾಭರಣಗಳನ್ನು ಉತ್ತರಪ್ರದೇಶದಲ್ಲಿ ಗ್ರಾಹಕರ ಸೋಗಿನಲ್ಲಿ ಗಿರಿವಿ ಇಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದರೂ, ಅವುಗಳನ್ನು ವಶಪಡಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.

ಈ ನಿಟ್ಟಿನಲ್ಲಿ ಮೇಲ್ಮನವಿ ಅರ್ಜಿನ್ನು ವಜಾಗೊಳಿಸುತ್ತಿರುವುದಾಗಿ ಪೀಠ ತಿಳಿಸಿದ್ದು, ಮೂರು ಪ್ರಕರಣಗಳಲ್ಲಿ ವಿಚಾರಣಾ ನ್ಯಾಯಾಲಯ ಸೂಕ್ತರೀತಿಯಲ್ಲಿ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಆರೋಪಿಗಳನ್ನು ಖುಲಾಸೆ ಗೊಳಿಸಿದೆ. ಈ ಆದೇಶದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿರುವ ನ್ಯಾಯಪೀಠ, ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದೆ.

ಪ್ರಕರಣದ ಹಿನ್ನೆಲೆ: 2013 ಮಾರ್ಚ್ 1 ರಂದು ನಾಗರಭಾವಿ 2ನೇ ಹಂತದಲ್ಲಿ ವಾಯುವಿಹಾರ ನಡೆಸುತ್ತಿದ್ದ ಸುಬ್ಬಲಕ್ಷ್ಮಿ ಎಂಬುವರಿಂದ ದ್ವಿಚಕ್ರವಾಹನದಲ್ಲಿ ಬಂದಿದ್ದ ಇಬ್ಬರು ಆರೋಪಿಗಳು ಚಾಕು ತೋರಿಸಿ ಚಿನ್ನದ ಮಾಂಗಲ್ಯ ಸರ ಕದ್ದ ಆರೋಪದಲ್ಲಿ ದೂರು ದಾಖಲಿಸಿದ್ದರು.
2013ರ ಮೇ 22ರಂದು ಅನ್ನಪೂರ್ಣೇಶ್ವರಿ ನಗರದ ಐದನೇ ಅಡ್ಡರಸ್ತೆಯಲ್ಲಿ ವಾಯುವಿಹಾರ ನಡೆಸುತ್ತಿದ್ದ ಭಾಗ್ಯಮ್ಮ ಎಂಬುವರಿಂದ ಚಾಕು ತೋರಿಸಿ ಚಿನ್ನದ ಮಾಂಗಲ್ಯದ ಸರ ಕದ್ದಿದ್ದರು. ಮತ್ತು 2013 ರ ಫೆಬ್ರವರಿ 2ರಂದು ನಾಗರಭಾವಿಯ 2ನೇ ಹಂತದಲ್ಲಿ ಸುಂದರಾಂಭಾ ಎಂಬುವರಿಗೆ ಚಾಕು ತೋರಿಸಿ ಚಿನ್ನದ ಸರ ಕದ್ದಿದ್ದರು.

ಮೂರು ಪ್ರಕರಣದಲ್ಲಿ ದಾಖಲಾಗಿದ್ದ ದೂರಿನ ಸಂಬಂಧ ಜ್ಞಾನಭಾರತಿ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿಕೊಂದು ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಮೂರು ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳಾಗಿದ್ದು, ಅವರ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳು ವಶಪಡಿಸಿಕೊಳ್ಳುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತಿಳಿಸಿದ್ದ ವಿಚಾರಣಾ ನ್ಯಾಯಾಲಯ ಆರೋಪ ಮುಕ್ತರನ್ನಾಗಿಸಿತ್ತು. ಇದನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಹೈಕೋರ್ಟ್ ಮೆಟ್ಟಿಲೇರಿತ್ತು.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯ ಆಸ್ತಿ ದಾಖಲೆಗಳನ್ನು ಡಿಜಿಟಲ್​ ವ್ಯವಸ್ಥೆಗೆ ಅಳವಡಿಸಲು ಹೈಕೋರ್ಟ್​ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.