ETV Bharat / state

ಮಳಲಿ ಮಸೀದಿ ವಿವಾದ: ಅಸಲು ದಾವೆ ಸಿಂಧುತ್ವ ಕುರಿತ ಅರ್ಜಿ ವಿಚಾರಣೆಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ

author img

By

Published : Jun 13, 2022, 10:50 PM IST

ಮಳಲಿಪೇಟೆ ಮಸೀದಿಯಲ್ಲಿ ದೇವಾಲಯ ಮಾದರಿಯ ರಚನೆ ಪತ್ತೆಯಾಗಿದೆ ಎನ್ನಲಾದ ವಿಚಾರ ಸಂಬಂಧ ಸಲ್ಲಿಕೆಯಾಗಿರುವ ಅಸಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿ ನೀಡಿದೆ.

high-court-grants-conditional-permission-on-malali-mosque-case
ಮಳಲಿ ಮಸೀದಿ ವಿವಾದ: ಅಸಲು ದಾವೆ ಸಿಂಧುತ್ವ ಕುರಿತ ಅರ್ಜಿ ವಿಚಾರಣೆಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಪೇಟೆ ಮಸೀದಿಯಲ್ಲಿ ದೇವಾಲಯ ಮಾದರಿಯ ರಚನೆ ಪತ್ತೆಯಾಗಿದೆ ಎನ್ನಲಾದ ವಿಚಾರ ಸಂಬಂಧ ಸಲ್ಲಿಕೆಯಾಗಿರುವ ಅಸಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿ ನೀಡಿದ್ದು, ಯಾವುದೇ ಆದೇಶ ಹೊರಡಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಮಂಗಳೂರಿನ ತೆಂಕಳೈಪಡಿ ಗ್ರಾಮದ ಧನಂಜಯ್ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರ ಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ, ಮಳಲಿಪೇಟೆ ಮಸೀದಿಯಲ್ಲಿ ಪತ್ತೆಯಾಗಿರುವ ದೇವಾಲಯದ ಮಾದರಿ ರಚನೆ ಬಗ್ಗೆ ವಸ್ತುಸ್ಥಿತಿ ಪರಿಶೀಲಿಸಲು ನ್ಯಾಯಾಲಯದ ವತಿಯಿಂದ ಕಮಿಷನರ್ ಒಬ್ಬರನ್ನು ನೇಮಕ ಮಾಡಬೇಕು. ಪರಿಶೀಲನೆ ನಡೆಸುವವರೆಗೆ ದಾವೆಯ ಸಿಂಧುತ್ವದ ಕುರಿತು ಯಾವುದೇ ಆದೇಶ ನೀಡದಂತೆ ಸಿವಿಲ್ ಕೋರ್ಟ್‌ಗೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದರು.

ವಾದ ಆಲಿಸಿದ ನ್ಯಾಯಪೀಠ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅಸಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸಬಹುದು. ಆದರೆ, ಯಾವುದೇ ಆದೇಶ ಹೊರಡಿಸಬಾರದು ಎಂದು ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತು. ಮಳಲಿಪೇಟೆ ಜುಮ್ಮಾ ಮಸೀದಿಯ ಅಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂ.17ಕ್ಕೆ ಮುಂದೂಡಿಕೆ ಮಾಡಿತು.

ಇದನ್ನೂ ಓದಿ: ಶಿವಮೊಗ್ಗ: ಬಾಲಕಿ ಮೇಲೆ ಯುವಕನಿಂದ ರೇಪ್​, ದೂರು ವಾಪಸ್ ಪಡೆಯುವಂತೆ ವಿದೇಶದಿಂದ ಧಮ್ಕಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.