ETV Bharat / state

ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ ಕರೆ, ಕಿಡಿಗೇಡಿ ಸೆರೆ

author img

By

Published : Jan 6, 2023, 7:07 AM IST

ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ ದೂರವಾಣಿ ಕರೆ ಮಾಡಿದ್ದ ಆರೋಪಿಯನ್ನು ನಗರ ಪೊಲೀಸರು ಸೆರೆ ಹಿಡಿದಿದ್ದಾರೆ.

Bomb threat call  Bomb threat call to Bangalore City Civil Court  City Civil Court news  Bomb threat call accused arrested in Bengaluru  ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ  ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಸೆರೆ  ವಿಧಾನಸೌಧ ಪೊಲೀಸರಿಂದ ಆರೋಪಿಯ ಬಂಧನ  ಸಿಟಿ ಸಿವಿಲ್ ಕೋರ್ಟ್‌ಗೆ ಬಾಂಬ್ ಬೆದರಿಕೆ  ಕೋರ್ಟ್‌ಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ  ಪೊಲೀಸ್ ಕಂಟ್ರೋಲ್ ರೂಮ್ 112ಕ್ಕೆ ಕರೆ
ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ ಕಿಡಿಗೇಡಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿಯ ನಿವಾಸಿ ಸುನೀಲ್ ಬಂಧಿತ ಆರೋಪಿಯಾಗಿದ್ದಾನೆ. ಕೆಲವು ತಿಂಗಳ ಹಿಂದೆ ಅಪರಾಧ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಈತ ವಿಚಾರಣೆಯ ಸಲುವಾಗಿ ಕೋರ್ಟ್‌ಗೆ ಹಾಜರಾಗಿ ಹಿಂತಿರುಗುತ್ತಿದ್ದ. ಈ ಸಂದರ್ಭದಲ್ಲಿ ಅಂದರೆ, ಜನವರಿ 3ರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಪೊಲೀಸ್ ಕಂಟ್ರೋಲ್ ರೂಮ್ 112 ಸಂಖ್ಯೆಗೆ ಕರೆ ಮಾಡಿ, ಬೆದರಿಕೆ ಕರೆ ಮಾಡಿದ್ದಾನೆ. ಪೊಲೀಸರು ಬಾಂಬ್ ಪತ್ತೆದಳವನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ಕೈಗೊಂಡಿದ್ದರು. ಎಲ್ಲೆಡೆ ಹುಡುಕಾಡಿದಾಗ ಬಾಂಬ್​ ಪತ್ತೆಯಾಗಿರಲಿಲ್ಲ. ಕೊನೆಗೆ ಇದೊಂದು ಹುಸಿ ಕರೆ ಎಂದು ಪೊಲೀಸರು ಖಚಿತಪಡಿಸಿದ್ದರು.

ವಿಧಾನಸೌಧ ಪೊಲೀಸರಿಂದ ಆರೋಪಿಯ ಬಂಧನ: ಈ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡ ವಿಧಾನಸೌಧ ಪೊಲೀಸರು ಆರೋಪಿಯ ಮೊಬೈಲ್ ಸಂಖ್ಯೆ ಆಧರಿಸಿ ಬಂಧಿಸಿದ್ದಾರೆ. ಕಾಡುಗೋಡಿಯಲ್ಲಿ ಈ ಹಿಂದೆ ನಡೆದಿದ್ದ ಪ್ರಕರಣದಲ್ಲಿ ಸುನೀಲ್​ ಆರೋಪಿಯಾಗಿದ್ದನು. ಕೋರ್ಟ್‌ಗೆ ಹಲವು ಬಾರಿ ಓಡಾಡಿ ಬೇಸತ್ತಿದ್ದನಂತೆ. ಹೀಗಾಗಿ ದುಷ್ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಏರ್ಪೊರ್ಟ್‌ಗೆ ಬಾಂಬ್​ ಹಾಕುವುದಾಗಿ ಟ್ವೀಟ್​: ಕೆಲ ದಿನಗಳ ಹಿಂದೆ ಬೆಂಗಳೂರು ಏರ್​ಪೋರ್ಟ್‌ಗೆ ಬಾಂಬ್ ಹಾಕುವುದಾಗಿ ಬೆದರಿಕೆ ಟ್ವೀಟ್ ಮಾಡಿದ್ದ ವ್ಯಕ್ತಿಯನ್ನು ಈಶಾನ್ಯ ವಿಭಾಗದ ಸೈಬರ್ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದರು. ಕೃತ್ಯಕ್ಕೆ ಬಳಸಿದ್ದ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಬೆಂಗಳೂರಿನ ಕೂಡ್ಲುಗೇಟ್ ನಿವಾಸಿ ವೈಭವ್ ಗಣೇಶ್ (20) ಬಂಧಿತ. ಈತ ಡಿ.10ರಂದು ತನ್ನ ಟ್ವಿಟರ್ ಖಾತೆಯಲ್ಲಿ, ನಾನು ಬೆಂಗಳೂರು ಏರ್​ಪೋರ್ಟ್​ಗೆ ಬಾಂಬ್ ಹಾಕುತ್ತೇನೆ ಎಂದು ಇಂಗ್ಲಿಷ್​ನಲ್ಲಿ ಟ್ವೀಟ್ ಮಾಡಿದ್ದ. ಈ ಟ್ವೀಟ್​ ಅನ್ನು ಬೆಂಗಳೂರು ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್​ ಖಾತೆಗೂ ಟ್ಯಾಗ್​ ಮಾಡಿದ್ದನು.

ಇದನ್ನೂ ಓದಿ: ಭಟ್ಕಳದಲ್ಲಿ ಬಾಂಬ್​ ಸ್ಪೋಟಿಸುವುದಾಗಿ ಬೆದರಿಕೆ.. ಕಳ್ಳತನ ಮುಚ್ಚಿಡಲು ಹುಸಿ ಬೆದರಿಕೆ ಪತ್ರ!

ನಾನ್‌ ಕಾಗ್ನಿಜಬಲ್ ಕೇಸ್ ದಾಖಲು: ಟರ್ಮಿನಲ್ ಮ್ಯಾನೇಜರ್ ರೂಪಾ ಮ್ಯಾಥ್ಯೂ ಅವರು ಪೊಲೀಸರನ್ನು ಸಂಪರ್ಕಿಸಿ ಈ ಕುರಿತು ದೂರು ದಾಖಲಿಸಿದ್ದರು. ಇದು ನಾನ್ ಕಾಗ್ನಿಜಬಲ್ ಕೇಸ್ ಆಗಿದ್ದು ಪೊಲೀಸ್ ಅಧಿಕಾರಿಗಳು ಸಂಬಂಧಪಟ್ಟ ಸ್ಥಳೀಯ ನ್ಯಾಯಾಲಯವನ್ನು ಸಂಪರ್ಕಿಸಿ ಪ್ರಥಮ ಮಾಹಿತಿ ವರದಿಯನ್ನು(ಎಫ್‌ಐಆರ್‌) ದಾಖಲಿಸಲು ಅನುಮತಿ ಕೋರಿದ್ದರು. ಅದರಂತೆ, ಐಪಿಸಿ 505 ಹಾಗೂ 507 ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿತ್ತು. ಪೊಲೀಸ್ ಅಧಿಕಾರಿಗಳು ಸೈಬರ್ ಕ್ರೈಂ ಪೊಲೀಸರ ಜೊತೆಗೂಡಿ ತನಿಖೆ ಮುಂದುವರೆಸಿದ್ದರು.

ಕೊನೆಗೂ ಸಿಕ್ಕಿಹಾಕಿಕೊಂಡ ಆರೋಪಿ: ಅಂತಿಮವಾಗಿ, ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿದ್ದರು. ಬೆಂಗಳೂರಿನ ಕೂಡ್ಲುಗೇಟ್ ನಿವಾಸಿ ವೈಭವ್ ಗಣೇಶ್ ಎಂಬಾತ ಟ್ವೀಟ್​ ಮಾಡಿದ್ದ ಎಂದು ಪೊಲೀಸರಿಗೆ ಗೊತ್ತಾಗಿತ್ತು. ಕೂಡಲೇ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ನಾನ್ ಕಾಗ್ನಿಜಬಲ್ ಕೇಸ್ ಎಂದರೇನು?: ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ಕಾಗ್ನಿಜಬಲ್ ಅಪರಾಧವನ್ನು ಅಪರಾಧ ಎಂದು ವ್ಯಾಖ್ಯಾನಿಸುತ್ತದೆ. ಇದಕ್ಕಾಗಿ ಪೊಲೀಸರಿಗೆ ಬಂಧನದ ವಾರಂಟ್ ಅಗತ್ಯವಿಲ್ಲ. ಕಾಗ್ನಿಜಬಲ್ ಅಪರಾಧಗಳು ಸಾಮಾನ್ಯವಾಗಿ ಗಂಭೀರವಾಗಿರುತ್ತವೆ. ಇದರಲ್ಲಿ ಪೊಲೀಸರು ತಕ್ಷಣವೇ ಕಾರ್ಯನಿರ್ವಹಿಸಬೇಕಾಗುತ್ತದೆ.

ಇದನ್ನೂ ಓದಿ: ಸಂಘಟನೆಯೊಂದರ ಕಾರ್ಯಕರ್ತನ ಮನೆಗೆ ಬೆದರಿಕೆ ಪತ್ರ.. ದೇಹದಿಂದ ತಲೆ ಬೇರ್ಪಡಿಸುವುದಾಗಿ ಧಮ್ಕಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.