ETV Bharat / state

'ಪಿಎಸ್​ಐ ಅಕ್ರಮದ ಆಡಿಯೋ ಸಾಕ್ಷ್ಯ ಇಷ್ಟು ದಿನ ಯಾಕೆ ಬಿಡುಗಡೆ ಮಾಡಲಿಲ್ಲ?'

author img

By

Published : Apr 23, 2022, 3:23 PM IST

ಈಗ ಖರ್ಗೆ ಅವರ ಆಪ್ತರು ಬಂಧನವಾಗುತ್ತಿದ್ದಂತೆ ಆಡಿಯೋ ಸಾಕ್ಷ್ಯದ ಮಾಹಿತಿ ಹೊರಹಾಕಿದ್ದಾರೆ. ತಮ್ಮ ಬೆಂಬಲಿಗರು ಸಿಐಡಿ ತನಿಖೆಯಲ್ಲಿ ಸಿಕ್ಕಿ ಬೀಳುವುದಿಲ್ಲ ಎಂಬ ಹುಸಿ ನಂಬಿಕೆಯಿಂದ ಸಾಕ್ಷ್ಯ ಬಿಡುಗಡೆ ಮಾಡದೇ ಇರಬಹುದು. ಈಗಲಾದರೂ ಖರ್ಗೆಯವರು ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳಿಗೆ ತಮ್ಮ ಬಳಿಯಿರುವ ದಾಖಲೆ ಹಾಗೂ ಮಾಹಿತಿಯನ್ನು ಹಂಚಿಕೊಳ್ಳಬೇಕೆಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಪಿಎಸ್​ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಅಪ್ತರೆನ್ನಲಾದ ಅವರದೇ ಪಕ್ಷದ ನಾಯಕರನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಶನಿವಾರ ಪ್ರಿಯಾಂಕ್​ ಖರ್ಗೆ ಬಿಡುಗಡೆ ಮಾಡಿದ ಆಡಿಯೋ ಕುರಿತಂತೆ ಗೃಹ ಸಚಿವರು ಪತ್ರಿಕಾ ಹೇಳಿಕೆ ನೀಡಿದ್ದು, ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಹುದ್ದೆಯಿಂದ ವಂಚಿತರಾಗಬಾರದರು. ಅಂತಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಸಿಐಡಿ ತನಿಖೆಗೆ ನಾನೇ ಸ್ವತಃ ಆಸಕ್ತಿ ತೋರಿಸಿದ್ದೆ ಎಂದರು.

ಮುಖ್ಯಮಂತ್ರಿಗಳ ಜೊತೆಗೂ ಸಮಾಲೋಚಿಸಿ ನಾನು ತನಿಖೆಗೆ ಆದೇಶ ನೀಡಿದ್ದೆ. ಆ ನಂತರ ಪ್ರಿಯಾಂಕ್​ ಖರ್ಗೆ ಕೂಡ ಸುದ್ದಿಗೋಷ್ಠಿ ನಡೆಸಿದ್ದರು. ಆದರೆ, ಆಗ ಆಡಿಯೋ ರೆಕಾರ್ಡ್ ಬಗ್ಗೆ ಮಾಹಿತಿ ನೀಡಿರಲಿಲ್ಲ. ಇಷ್ಟು ದಿನ ಯಾಕೆ ಸಾಕ್ಷ್ಯವನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು? ಎಂದು ಸಚಿವರು ಮರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ : ಸ್ಫೋಟಕ ಆಡಿಯೋ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ

ಈಗ ಖರ್ಗೆ ಅವರ ಆಪ್ತರು ಬಂಧನವಾಗುತ್ತಿದ್ದಂತೆ ಮಾಹಿತಿ ಹೊರಹಾಕಿದ್ದಾರೆ. ತಮ್ಮ ಬೆಂಬಲಿಗರು ಸಿಐಡಿ ತನಿಖೆಯಲ್ಲಿ ಸಿಕ್ಕಿಬೀಳುವುದಿಲ್ಲ ಎಂಬ ಹುಸಿ ನಂಬಿಕೆಯಿಂದ ಸಾಕ್ಷ್ಯ ಬಿಡುಗಡೆ ಮಾಡದೇ ಇರಬಹುದು. ಈಗಲಾದರೂ ಖರ್ಗೆಯವರು ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳಿಗೆ ತಮ್ಮ ಬಳಿಯಿರುವ ದಾಖಲೆ ಹಾಗೂ ಮಾಹಿತಿಯನ್ನು ಹಂಚಿಕೊಳ್ಳಬೇಕು ಹಾಗೂ ತಮ್ಮ ಹೊಣೆಗಾರಿಕೆಯನ್ನು ಅರಿಯಬೇಕೆಂದು ಹೇಳಿದರು.

ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ. ಅಕ್ರಮದಲ್ಲಿ ಭಾಗಿಯಾದವರು ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ. ಕಾಂಗ್ರೆಸ್ ನಾಯಕರು ತನಿಖೆಗೆ ಸಹಕರಿಸಬೇಕು ಹಾಗೂ ಯಾವುದೇ ರೀತಿಯ ರಾಜಕೀಯ ಲಾಭ ಅಪೇಕ್ಷೆ ಮಾಡದೆ, ಅಕ್ರಮ ಎಸಗಿದವರನ್ನು ಕಾನೂನಿನ ಬಲೆಗೆ ತರಲು ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪಿಎಸ್‌ಐ ಅಕ್ರಮ : 'ಕೈ' ಮುಖಂಡನ ಸೋದರನ ಬಂಧನ.. ಮಹಾಂತೇಶ್​ಗೆ ಕರೆ ಮಾಡಿ ಬಲೆಗೆ ಬಿದ್ದ ಆರ್‌ ಡಿ ಪಾಟೀಲ್‌!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.