ETV Bharat / state

2022-2023ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿ ಪ್ರಕಟ

author img

By

Published : May 24, 2023, 7:19 PM IST

Announcing Kannada Sahitya Parishad Honorary Award
Announcing Kannada Sahitya Parishad Honorary Award

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಕೊಡಮಾಡುವ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿ ಪ್ರಕಟಗೊಂಡಿದೆ.

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2022 ಹಾಗೂ 2023ನೇ ಸಾಲಿನ ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ 'ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿ' ಪ್ರಕಟಗೊಂಡಿದೆ. ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಒಬ್ಬ ಲೇಖಕ ಹಾಗೂ ಒಬ್ಬ ಲೇಖಕಿಯನ್ನು ಪ್ರತಿವರ್ಷ ಪರಿಷತ್ತಿನ ಮೂಲಕ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ, ಡಾ.ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Honorary Award of Kannada Sahitya Parishat announced
ವಸುಮತಿ ಉಡುಪ

ಇದನ್ನೂ ಓದಿ: ಗೋಹತ್ಯೆ, ಮತಾಂತರ ನಿಷೇಧ ಬಿಲ್ ಮರು ಪರಿಶೀಲನೆ, ಶಾಂತಿ ಕದಡುವ ಸಂಘಟನೆಗಳ ವಿರುದ್ಧ ಕ್ರಮ: ಪ್ರಿಯಾಂಕ್ ಖರ್ಗೆ

ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ 'ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿ'ಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ ಅವರು ಪರಿಷತ್ತಿನ ಅಧ್ಯಕ್ಷರಾಗಿದ್ದಾಗ ಅಧ್ಯಕ್ಷರಿಗೆ ನೀಡುವ ಮಾಸಿಕ ಗೌರವ ಸಂಭಾವನೆಯನ್ನು ಪರಿಷತ್ತಿನಲ್ಲಿಯೇ ದತ್ತಿ ನಿಧಿ ರೂಪದಲ್ಲಿ ಸ್ಥಾಪಿಸಿದ್ದಾರೆ. 12,61,000 ರೂಪಾಯಿಯ ಖಾಯಂ ದತ್ತಿನಿಧಿಯನ್ನು ಸ್ಥಾಪಿಸಿರುತ್ತಾರೆ. ಪ್ರತಿವರ್ಷ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಒಬ್ಬ ಲೇಖಕ ಹಾಗೂ ಒಬ್ಬ ಲೇಖಕಿಗೆ ತಲಾ 30,000 ರೂಪಾಯಿ ನಗದು, ಸ್ಮರಣಿಕೆ, ಹಾರ ಹಾಗೂ ಫಲತಾಂಬೂಲ ನೀಡಿ ಗೌರವಿಸಲಾಗುತ್ತದೆ.

Honorary Award of Kannada Sahitya Parishat announced
ಡಾ. ಬಿ.ಟಿ. ಲಲಿತಾ ನಾಯಕ್‌

ಇದನ್ನೂ ಓದಿ: ಅರ್ಥಪೂರ್ಣ ಬರ್ತಡೇ ಆಚರಿಸಿಕೊಂಡ ತುಪ್ಪದ ಬೆಡಗಿ: ರಾಗಿಣಿ ಐಪಿಎಸ್ ಬಳಿಕ ಐಎಎಸ್​ ಪಾತ್ರದಲ್ಲಿ ದ್ವಿವೇದಿ

ದತ್ತಿ ದಾನಿಗಳ ಸೂಚನೆಯ ಮೇರೆಗೆ 2022ನೇ ಸಾಲಿನ ನಾಡೋಜ ಡಾ. ಮನು ಬಳಿಗಾ‌ರ ಸ್ಥಾಪಿಸಿರುವ 'ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿ'ಗೆ ಹಿರಿಯ ಲೇಖಕಿ ವಸುಮತಿ ಉಡುಪ ಹಾಗೂ ಲೇಖಕ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಅವರನ್ನು ಆಯ್ಕೆ ಮಾಡಲಾಗಿದೆ. 2023ನೇ ಸಾಲಿನ ಪ್ರಶಸ್ತಿಗೆ ಹಿರಿಯ ಲೇಖಕಿ ಡಾ. ಬಿ.ಟಿ. ಲಲಿತಾ ನಾಯಕ್‌ ಹಾಗೂ ಲೇಖಕ ಡಾ. ಅಮರೇಶ ನುಗಡೋಣಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Honorary Award of Kannada Sahitya Parishat announced
ಡಾ. ಅಮರೇಶ ನುಗಡೋಣಿ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ, ವಿಮರ್ಶಕಿ ಡಾ. ಎಂ.ಎಸ್. ಆಶಾದೇವಿ, ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗಶೆಟ್ಟಿ, ಡಾ. ಪದ್ಮನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

Honorary Award of Kannada Sahitya Parishat announced
ಪ್ರೊ. ಮಲ್ಲಿಕಾರ್ಜುನ ಹಿರೇಮಠ

ಇದನ್ನೂ ಓದಿ: ಕನ್ನಡ ಸಾಹಿತ್ಯ ಪರಿಷತ್ತಿನ ಶತಮಾನೋತ್ಸವ ಪ್ರಶಸ್ತಿಗೆ ಡಾ.ಮನು ಬಳಿಗಾರ ಆಯ್ಕೆ

ಇನ್ನು ಇತ್ತೀಚೆಗಷ್ಟೇ ಕನ್ನಡ ಸಾಹಿತ್ಯ ಪರಿಷತ್ತು ಪ್ರದಾನ ಮಾಡುವ ಶತಮಾನೋತ್ಸವ ದತ್ತಿ ಪ್ರಶಸ್ತಿಯ 2022ನೇ ಸಾಲಿನ ಪ್ರಶಸ್ತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ ಅವರನ್ನು ಆಯ್ಕೆ ಮಾಡಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.