ETV Bharat / state

ಶೋಕಿ ಜೀವನಕ್ಕಾಗಿ ಬೈಕ್, ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

author img

By

Published : Nov 4, 2022, 9:13 PM IST

Kn_bng_
ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳ ಬಂಧನ

ಮನೆ ಹಾಗೂ ಬೈಕ ಕಳ್ಳತನ ಪ್ರಕರಣದಲ್ಲಿ ಹೆಣ್ಣೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು: ಶೋಕಿ ಜೀವನ ಮಾಡುವ ಸಲುವಾಗಿ ಮನೆಗಳ್ಳತನ ಹಾಗೂ ಬೈಕ್ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿಗಳನ್ನ ಪ್ರತ್ಯೇಕ ಪ್ರಕರಣಗಳಲ್ಲಿ ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.

1ನೇ ಪ್ರಕರಣ: ಸುಮಾರು 100 ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಾರ್ತಿಕ್​ ಅಲಿಯಾಸ್ ಎಸ್ಕೇಪ್ ಕಾರ್ತಿಕ್​​ನನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 12 ಲಕ್ಷ ಮೌಲ್ಯದ ಸುಮಾರು 278 ಗ್ರಾಂ ಚಿನ್ನವನ್ನ ವಶಪಡಿಸಿಕೊಳ್ಳಲಾಗಿದೆ.

2ನೇ ಪ್ರಕರಣ: ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ಮನೆಕಳ್ಳತನ‌ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಅಲಿಯಾಸ್ ಮಂಜುನಾಥ್, ಆಜಮ್‌ ಖಾನ್‌ ಅಲಿಯಾಸ್ ಬ್ರೂಸ್ಲಿ, ಸೈಯದ್ ನದೀಂ ಬಂಧಿತ ಆರೋಪಿಗಳು.

ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳ ಬಂಧನ

3ನೇ ಪ್ರಕರಣ: ಐಷಾರಾಮಿ ಜೀವನ ಮಾಡಬೇಕು ಎನ್ನುವ ಉದ್ದೇಶದಿಂದ ಮನೆಯ ಮುಂದೆ ನಿಲ್ಲಿಸಿದ ಬೈಕ್​ಗಳನ್ನ ಕಳ್ಳತನ ಮಾಡುತ್ತಿದ್ದ ಖದೀಮರನ್ನ ಪೊಲೀಸರು ಬಂಧಿಸಿದ್ದಾರೆ. ಮನೋಜ್ ಕುಮಾರ್ ಹಾಗೂ ಅಪ್ರೋಜ್ ಬಂಧಿತ ಆರೋಪಿಗಳು. ಇನ್ನು ಬಂಧಿತರಿಂದ 7 ಲಕ್ಷ ಮೌಲ್ಯದ 12 ಬೈಕ್​ಗಳನ್ನ ವಶಪಡಿಸಿಕೊಂಡಿರುವುದಾಗಿ ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಗುಂಡಿನ ದಾಳಿ: 7ನೇ ತರಗತಿ ವಿದ್ಯಾರ್ಥಿಗೆ ಗುಂಡು ಹಾರಿಸಿದ ಯುವಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.