ETV Bharat / state

ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲು ರಾಜ್ಯ ನಾಯಕರಿಗೆ ಸೂಚಿಸಿದ್ದೇನೆ: ಖರ್ಗೆ

author img

By

Published : Nov 7, 2022, 7:37 PM IST

ಎಲ್ಲರೂ ಕಾಂಗ್ರೆಸ್​ ಪಕ್ಷಕ್ಕೆ ಕೆಲಸ ಮಾಡುತ್ತೇವೆ ಅಂತ ಹೇಳಿದ್ದಾರೆ. ಎಲ್ಲರೂ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

i-have-directed-congress-leaders-to-work-together-mallikarjun-kharge
ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲು ರಾಜ್ಯ ನಾಯಕರಿಗೆ ಸೂಚಿಸಿದ್ದೇನೆ: ಖರ್ಗೆ

ಬೆಂಗಳೂರು: ಈಗಾಗಲೇ ರಾಜ್ಯದ ಕಾಂಗ್ರೆಸ್​​ ನಾಯಕರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲ ನಾಯಕರೂ ಒಗ್ಗಟ್ಟಾಗಿ ಹೋರಾಟ ಮಾಡಿ ಅಂತ ಹೇಳಿದ್ದೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ನಿನ್ನೆ ಕೂಡ ಸ್ಪಷ್ಟಪಡಿಸಿದ್ದೆ. ಪಕ್ಷಕ್ಕೆ ಎಲ್ಲರೂ ಕೆಲಸ ಮಾಡುತ್ತೇವೆ ಅಂತ ಹೇಳಿದ್ದಾರೆ. ಎಲ್ಲರೂ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು.

ಆರ್ಥಿಕ ದುರ್ಬಲ ವರ್ಗದವರಿಗೆ ಶೇ. 10ರ ಮೀಸಲಾತಿ ವಿಚಾರವಾಗಿ ಮಾತನಾಡಿ, ಅದನ್ನು ನಾವೆಲ್ಲ ಸಂಸತ್​ನಲ್ಲಿ ಒಮ್ಮತದಿಂದ ಪಾಸ್ ಮಾಡಿದ್ದೇವೆ. ಆ ತಿದ್ದುಪಡಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಇದನ್ನು ಸ್ವಾಗತ ಮಾಡುತ್ತೇವೆ ಎಂದು ಹೇಳಿದರು.

ದೆಹಲಿಗೆ ಪ್ರಯಾಣ: ಭಾನುವಾರ ಬೆಳಗ್ಗೆ ರಾಜ್ಯಕ್ಕೆ ಆಗಮಿಸಿದ್ದ ಮಲ್ಲಿಕಾರ್ಜುನ ಖರ್ಗೆ ರಾಜ್ಯ ನಾಯಕರು ಭವ್ಯ ಸ್ವಾಗತ ಕೋರಿದ್ದರು. ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಖರ್ಗೆ ಆಗಮಿಸಿದ್ದರು. ಇವರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿ ಅಭಿನಂದನಾ ಸಮಾರಂಭ ಸಹ ಹಮ್ಮಿಕೊಳ್ಳಲಾಗಿತ್ತು.

ಅಭಿನಂದನೆ ಸ್ವೀಕರಿಸಿ ತಮ್ಮ ಸಂತಸ ವ್ಯಕ್ತಪಡಿಸಿದ್ದ ಖರ್ಗೆ, ರಾಜ್ಯ ಕಾಂಗ್ರೆಸ್ ನಾಯಕರಿಗೆ ಒಗ್ಗಟ್ಟಿನ ಮಂತ್ರ ಬೋಧಿಸಿದ್ದರು. ನಿನ್ನೆ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ತಂಗಿದ್ದ ಮಲ್ಲಿಕಾರ್ಜುನ ಖರ್ಗೆ ಇಂದು ಸಂಜೆ ಮರಳಿ ದೆಹಲಿಗೆ ಪ್ರಯಾಣ ಬೆಳೆಸಿದರು.

ನಾಳೆಯಿಂದ ಹಿಮಾಚಲ ಪ್ರದೇಶ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿರುವ ಖರ್ಗೆ ನಂತರ ಗುಜರಾತ್ ಚುನಾವಣಾ ಪ್ರಚಾರದಲ್ಲೂ ಪಾಲ್ಗೊಳ್ಳಲಿದ್ದಾರೆ. ಸದ್ಯ ಬೆಂಗಳೂರಿಗೆ ಮತ್ತೆ ಬರುವುದು ತುಂಬಾ ತಡವಾಗಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: ಕಾಂಗ್ರೆಸ್​ಗೆ ಕರೆಯುವ ಹಕ್ಕು ಅವರಿಗೆ ಇರಬಹುದು. ಆದರೆ ಹೋಗದೇ ಇರುವ ಅಧಿಕಾರ ನಮಗಿದೆ: ಸಚಿವ ಶಿವರಾಮ್ ಹೆಬ್ಬಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.