ETV Bharat / state

ಗೋದಾಮಿನಲ್ಲಿ ಅಗ್ನಿ ದುರಂತದ ಸಮಗ್ರ ತನಿಖೆಗೆ ಆದೇಶಿಸಿದ್ದೇನೆ: ಗೃಹ ಸಚಿವ ಬೊಮ್ಮಾಯಿ

author img

By

Published : Nov 11, 2020, 2:08 PM IST

ಅಧಿಕಾರಿಗಳು ಏನಾದರೂ ಲೋಪ ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಯಾವ ಅಧಿಕಾರಿ ಲಾಭಕ್ಕಾಗಿ ಅನುಮತಿ ನೀಡಿದ್ದರೆ ಅಂತಹ ಅಧಿಕಾರಿ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು..

Home minister Basavaraj bommayi
ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ಹೊಸಗುಡ್ಡದಹಳ್ಳಿಯ ಗೋದಾಮಿನಲ್ಲಿ ನಿನ್ನೆ ಸಂಭವಿಸಿದ ಅಗ್ನಿ ಅವಘಡ ಸಂಬಂಧ ಸಮಗ್ರ ತನಿಖೆಗೆ ಆದೇಶಿಸಿದ್ದೇನೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಪ್ರಕರಣವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು. ಈಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ ಎಂದರು. ಅಧಿಕಾರಿಗಳು ಏನಾದರೂ ಲೋಪ ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಯಾವ ಅಧಿಕಾರಿ ಲಾಭಕ್ಕಾಗಿ ಅನುಮತಿ ನೀಡಿದ್ದರೆ ಅಂತಹ ಅಧಿಕಾರಿ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಈಗ ಯಶಸ್ವಿಯಾಗಿದ್ದಾರೆ. ಸುಮಾರು 48 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕೆಲಸ ಆಗಿದೆ. ಗೋದಾಮಿನಲ್ಲಿ ಇತರ ಸ್ಪೋಟಕ ಮತ್ತು ಅಪಾಯಕಾರಿ ವಸ್ತುಗಳನ್ನು ಇಡಲು ಅನುಮತಿ ಇದೆಯೇ?, ಗೋದಾಮು ನಿರ್ಮಿಸಲು ಬಿಬಿಎಂಪಿ, ಅಗ್ನಿಶಾಮಕ ಇಲಾಖೆ ಹಾಗೂ ಇತರ ಇಲಾಖೆಯಿಂದ ಅನುಮತಿ ತೆಗೆದುಕೊಂಡಿದ್ದಾರಾ? ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಯಾರೂ ಎಷ್ಟೇ ಪ್ರಭಾವಿ ಇದ್ದರೂ ತಪ್ಪು ಕಂಡು ಬಂದರೆ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.