ETV Bharat / state

ಮುಂಬರುವ ನಮ್ಮ ಮೆಟ್ರೋ ಮಾರ್ಗಗಳ ನಿರ್ಮಾಣದ ಸುರಕ್ಷತೆಗೆ ಐಐಎಸ್​ಸಿ ತಂಡ ನಿಯೋಜನೆ

author img

By

Published : Mar 11, 2023, 10:27 PM IST

ಮುಂಬರುವ ಮೂರು ನಮ್ಮ ಮೆಟ್ರೋ ಮಾರ್ಗಗಳ ನಿರ್ಮಾಣದ ಹಿನ್ನೆಲೆ ಸುರಕ್ಷತೆಗೆ ಐಐಎಸ್​ಸಿ ತಂಡವನ್ನು ನಿಯೋಜಿಸಲಾಗಿದೆ.

namma metro
ನಮ್ಮ ಮೆಟ್ರೋ

ಬೆಂಗಳೂರು: ಮುಂಬರುವ ಮೂರು ನಮ್ಮ ಮೆಟ್ರೋ ಮಾರ್ಗಗಳ ನಿರ್ಮಾಣದ ಸುರಕ್ಷತೆಗಾಗಿ ಐಐಎಸ್​​​​ಸಿ ತಂಡದ ನಿಯೋಜಿಸಲಾಗಿದೆ. ಹೌದು, ಮುಂಬರುವ ಮೂರು ಮಾರ್ಗಗಳ ನಿರ್ಮಾಣ ಸ್ಥಳಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಮೇಲ್ವಿಚಾರಣೆ ಮಾಡಲು ನಮ್ಮ ಮೆಟ್ರೋ ಸಂಸ್ಥೆ ( ಬಿ.ಎಂ.ಆರ್.ಸಿ.ಎಲ್) ಭಾರತೀಯ ವಿಜ್ಞಾನ ಸಂಸ್ಥೆಯ ( ಐ.ಐ.ಎಸ್.ಸಿ) ತಂಡವೊಂದನ್ನು ನಿಯೋಜನೆ ಮಾಡಿದೆ.

ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಜೆ.ಎಂ.ಚಂದ್ರ ಕಿಶನ್, ಸುಸ್ಥಿರ ತಂತ್ರಜ್ಞಾನಗಳ ಕೇಂದ್ರದ ಸಹ ಪ್ರಾಧ್ಯಾಪಕ ಲಕ್ಷ್ಮೀನಾರಾಯಣ ರಾವ್ ಹಾಗೂ ಮೂಲಸೌಕರ್ಯ, ಸುಸ್ಥಿರ ಸಾರಿಗೆ ಮತ್ತು ನಗರ ಯೋಜನೆ ಕೇಂದ್ರದಲ್ಲಿ ಈ ಹಿಂದೆ ಕೆಲಸ ಮಾಡಿದ ರಮೇಶ್ ಬಾಬು ನಾರಾಯಣಪ್ಪ ಪರಿಶೀಲನೆ ನಡೆಸಲಿದ್ದಾರೆ.

ಇದನ್ನೂ ಓದಿ: ಮೈಸೂರು: ಡಿಆರ್‌ಎಂ ಹುದ್ದೆಗೇರಿದ 2ನೇ ಮಹಿಳೆ 'ಶಿಲ್ಪಿ ಅಗರ್ವಾಲ್‌'

75 ದಿನಗಳಲ್ಲಿ ವರದಿ ನೀಡುವ ಸಾಧ್ಯತೆ: ಕಳೆದ ಬುಧವಾರದಿಂದಲೇ ಕೆಲಸ ಆರಂಭಿಸಿರುವ ತಂಡ 75 ದಿನಗಳಲ್ಲಿ ವರದಿ ನೀಡುವ ಸಾಧ್ಯತೆಯಿದೆ. ನಿರ್ಮಾಣ ಹಂತದಲ್ಲಿರುವ ಹೊರ ವರ್ತುಲ ರಸ್ತೆ ಮಾರ್ಗ (ಕೆ.ಆರ್. ಪುರಂನಿಂದ ಸಿಲ್ಕ್ ಬೋರ್ಡ್), ವಿಮಾನ ನಿಲ್ದಾಣ ಮಾರ್ಗ (ಕೆ.ಆರ್. ಪುರಂನಿಂದ ಕೆ.ಐ.ಎ) ಹಾಗೂ ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ಸುರಂಗ ಕಾರಿಡಾರ್‌ಗಳನ್ನು ಮೂವರು ಸದಸ್ಯರ ತಂಡ ಪರಿಶೀಲಿಸಲಿದೆ ಎಂದು ನಮ್ಮ ಮೆಟ್ರೋ ಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: 28 ಸ್ಮಾರ್ಟ್ ವರ್ಚುಯಲ್‌ ಕ್ಲಿನಿಕ್‌ & ಕಮಾಂಡ್ ಸೆಂಟರ್​ಗೆ ಸಿಎಂ ಚಾಲನೆ

ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳ ಪ್ರತಿಕ್ರಿಯೆ: ಈ ಕುರಿತು ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ಪ್ರತಿಕ್ರಿಯಿಸಿದ ಅವರು, ಮೆಟ್ರೊ ನಿರ್ಮಾಣದ ಸ್ಥಳಗಳಲ್ಲಿ ಬ್ಯಾರಿಕೇಡಿಂಗ್ ಸೇರಿದಂತೆ ಎಲ್ಲ ಸುರಕ್ಷತಾ ಅಂಶಗಳನ್ನು ಪರಿಶೀಲಿಸುತ್ತೇವೆ. ನಾವು ಒದಗಿಸಿದ ಮಾರ್ಗಸೂಚಿಗಳನ್ನು ಅಧ್ಯಯನ ಮಾಡುತ್ತೇವೆ. ಗುತ್ತಿಗೆದಾರರು ಅವುಗಳನ್ನು ಅನುಸರಿಸುತ್ತಿದ್ದಾರೆಯೇ ಎಂದು ಚೆಕ್ ಮಾಡುತ್ತಿದ್ದೇವೆ. ಸೈಟ್‌ಗಳಲ್ಲಿ ಟ್ರಾಫಿಕ್ ದೃಶ್ಯ ಮತ್ತು ಹತ್ತಿರದ ಜಂಕ್ಷನ್‌ಗಳನ್ನು ಸಹ ವಿವರವಾಗಿ ಪರಿಶೀಲಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: 5, 8ನೇ ತರಗತಿಗಳ ಬೋರ್ಡ್​ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್​ ಆದೇಶ: ಪರೀಕ್ಷೆ ದಿನಾಂಕ ಮುಂದೂಡಿದ ಶಿಕ್ಷಣ ಇಲಾಖೆ

ಅವಘಡದ ಹಿನ್ನೆಲೆ ಬಿ.ಎಂ.ಆರ್‌.ಸಿ.ಎಲ್‌ ಅಲರ್ಟ್: ಕಳೆದ ಜನವರಿ 10ರಂದು ನಾಗವಾರದ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ವೊಂದು ಮಹಿಳೆ ಮತ್ತು ಆಕೆಯ ಮಗನ ಮೇಲೆ ಬಿದ್ದು ಸಾವನ್ನಪ್ಪಿದ್ದರು. ಅಲ್ಲದೇ ಬಿ.ಎಂ.ಆರ್‌.ಸಿ.ಎಲ್‌ನ ಬ್ಯಾರಿಕೇಡ್‌ಗಳು ಹಾಗೂ ಸಿಂಕ್‌ಹೋಲ್‌ಗಳನ್ನು ಒಳಗೊಂಡ ಸಣ್ಣ ಅಪಘಾತಗಳು ಕಳೆದ ತಿಂಗಳು ಸಂಭವಿಸಿತ್ತು. ಇದು ಸಾರ್ವಜನಿಕವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಬಿ.ಎಂ.ಆರ್.ಸಿ.ಎಲ್ ಈ ಉಪಕ್ರಮವನ್ನು ಕೈಗೊಂಡಿದೆ.

ಇದನ್ನೂ ಓದಿ: ಯಾರದೋ ಮದುವೆಯಲ್ಲಿ ಪ್ರತಿಪಕ್ಷ ನಾಯಕರು ಬಾಸಿಂಗ ಕಟ್ಟಿಕೊಂಡು ನಿಂತಿದ್ದಾರೆ: ಎಕ್ಸ್ ಪ್ರೆಸ್ ವೇ ಕ್ರೆಡಿಟ್ ವಾರ್ ಗೆ ಸಿಸಿಪಿ ವ್ಯಂಗ್ಯ..!

ಇದನ್ನೂ ಓದಿ:ದಶಪಥ ರಸ್ತೆಯ ಸಂಪೂರ್ಣ ಕ್ರೆಡಿಟ್ ಪ್ರಧಾನಿ ಮೋದಿಗೆ ಸಲ್ಲಬೇಕು: ಸಿಎಂ ಬಸವರಾಜ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.