ETV Bharat / state

ಭಾರತೀಯ ವಿಜ್ಞಾನ ಸಂಸ್ಥೆಯ ಪಿಹೆಚ್​ಡಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

author img

By ETV Bharat Karnataka Team

Published : Dec 1, 2023, 6:43 PM IST

Updated : Dec 1, 2023, 7:34 PM IST

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

indian-institute-of-science-phd-student-commits-suicide-in-bengaluru
ಭಾರತೀಯ ವಿಜ್ಞಾನ ಸಂಸ್ಥೆಯ ಪಿಹೆಚ್​ಡಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆಯ ಸಾಲಿಡ್ ಸ್ಟೇಟ್ ಮತ್ತು ಸ್ಟ್ರಕ್ಚರಲ್ ಕೆಮಿಸ್ಟ್ರಿ ಯೂನಿಟ್​ನಲ್ಲಿ ಇಂಟಿಗ್ರೇಟೆಡ್ ಪಿಎಚ್‌ಡಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ. 2022ನೇ ಬ್ಯಾಚ್​ನ ದ್ವಿತೀಯ ವರ್ಷದ ವಿದ್ಯಾರ್ಥಿ ಡೈಮೊಂಡ್ ಖುಷ್ವಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ಸಂಬಂಧ ಐಐಎಸ್​ಸಿ ಪ್ರಕಟಣೆ ಹೊರಡಿಸಿ, ಕ್ಯಾಂಪಸ್ ಎಲ್ಲರಿಗೂ ಸುರಕ್ಷಿತ ಸ್ಥಳವಾಗಿದೆ. ಎಲ್ಲ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿ ತಕ್ಷಣವೇ ತಮ್ಮ ಕ್ಯಾಂಪಸ್​ನಲ್ಲಿ ಲಭ್ಯವಿರುವ ಆಪ್ತ ಸಹಾಯಕರ ನೆರವು ಪಡೆಯಬೇಕು. ಮಾನಸಿಕ ಆರೋಗ್ಯ ವೃತ್ತಿಪರರೊಂದಿಗೆ ಮಾತನಾಡಲು ಅಗತ್ಯ ಇರುವವರು 24 x 7 ತುರ್ತು ಕರೆ ಸೇವೆ (ಫೋನ್ ಸಂಖ್ಯೆ:080-47113444) ಗೆ ಸಂಪರ್ಕಿಸಬೇಕು ಎಂದು ತಿಳಿಸಿದೆ.

ಕ್ಯಾಂಪಸ್‌ನಲ್ಲಿ ಸಲಹೆಗಾರರು ಮತ್ತು ಮನೋವೈದ್ಯರೊಂದಿಗೆ ಸಮಾಲೋಚನೆಗೆ ಅಪಾಯಿಂಟ್‌ಮೆಂಟ್ ಕೂಡ ಪಡೆಯಬಹುದಾಗಿದೆ. ನಮ್ಮ ಕ್ಷೇಮ ಕೇಂದ್ರದಿಂದ ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಕ್ರಮಗಳು, ಆನ್​ಲೈನ್​ ಕಾರ್ಯಕ್ರಮ, ಯೋಗಾ ಸೆಷನ್‌ಗಳು ಮತ್ತು ಒತ್ತಡವನ್ನು ನಿರ್ವಹಿಸುವ ಕುರಿತು ಮನೋವೈದ್ಯರಿಂದ ಪ್ಯಾನಲ್ ಚರ್ಚೆಗಳನ್ನು ನೆಡೆಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಇದನ್ನೂ ಓದಿ: ಎರಡು ಲಕ್ಷ ರೂಪಾಯಿ ನಾಯಿ ಮರಿಗಾಗಿ ಹಠ!: ಯುವಕ ಆತ್ಮಹತ್ಯೆ

Last Updated : Dec 1, 2023, 7:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.