ETV Bharat / state

ಇಬ್ಬರು ಶಾಸಕರ ಸದಸ್ಯತ್ವ ರದ್ದುಪಡಿಸಲು ನಾಳೆ ಸ್ಪೀಕರ್​ಗೆ ಜೆಡಿಎಸ್‍ ದೂರು

author img

By

Published : Jun 14, 2022, 7:08 PM IST

ಜೆಡಿಎಸ್‍ ದೂರು
ಜೆಡಿಎಸ್‍ ದೂರು

ಗುಬ್ಬಿ ಶಾಸಕ ಶ್ರೀನಿವಾಸ್ ಹಾಗೂ ಕೋಲಾರ ಕ್ಷೇತ್ರದ ಶಾಸಕ ಶ್ರೀನಿವಾಸ್ ಗೌಡ ಅವರ ಸದಸ್ಯತ್ವ ರದ್ದುಗೊಳಿಸುವಂತೆ ವಿಧಾನಸಭೆ ಸ್ಪೀಕರ್‌ಗೆ ನಾಳೆ (ಬುಧವಾರ) ಜೆಡಿಎಸ್‍ ದೂರು ನೀಡಲು ನಿರ್ಧರಿಸಿದೆ.

ಬೆಂಗಳೂರು: ರಾಜ್ಯಸಭೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್ ಹಾಗೂ ಕೋಲಾರ ಕ್ಷೇತ್ರದ ಶಾಸಕ ಶ್ರೀನಿವಾಸ್ ಗೌಡ ಅವರ ಸದಸ್ಯತ್ವ ರದ್ದುಗೊಳಿಸುವಂತೆ ವಿಧಾನಸಭೆ ಸ್ಪೀಕರ್ ಅವರಿಗೆ ನಾಳೆ ಜೆಡಿಎಸ್‍ ದೂರು ನೀಡಲು ನಿರ್ಧರಿಸಿದೆ. ಈ ಕುರಿತು ಮಾಹಿತಿ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಗುಬ್ಬಿ ಶ್ರೀನಿವಾಸ್ ಮತ್ತು ಶ್ರೀನಿವಾಸ್ ಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.

ಮಾಜಿ ಸಿಎಂ, ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ವಿಶ್ರಾಂತಿ ಮುಗಿಸಿ ನಾಳೆ ಬರುತ್ತಿದ್ದಾರೆ. ಕಾನೂನು ಹೋರಾಟ ಸಂಬಂಧ ಅವರ ಜೊತೆ ಚರ್ಚಿಸುತ್ತೇವೆ. ನಾಳೆ ಅವರ ಬಳಿ ಸಹಿ ಪಡೆದು ಅಧಿಕೃತ ಆದೇಶ ಹೊರಡಿಸುತ್ತೇವೆ. ಶಾಸಕ ಗುಬ್ಬಿ ಶ್ರೀನಿವಾಸ್ ತಪ್ಪು ಮಾಡಿಲ್ಲ ಅಂದರೆ ಅವತ್ತೇ ಹೇಳಬೇಕಿತ್ತು. ಮತ ಪತ್ರ ಮುಚ್ಚಿಕೊಂಡು ಯಾಕೆ ಮತ ಹಾಕಿದ್ರು?. ಅಮೇಲೆ ಯಾಕೆ ಕುಮಾರಸ್ವಾಮಿ ಬಗ್ಗೆ ಮಾತಾಡಿದ್ರು. ಈಗ ಯಾಕೆ ಆಣೆ ಪ್ರಮಾಣ ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಜೆಡಿಎಸ್​​ಗೆ ಡಬಲ್​ ಶಾಕ್: ಖಾಲಿ ಮತ ಪತ್ರ ಹಾಕಿದ ಗುಬ್ಬಿ ಶ್ರೀನಿವಾಸ್!

ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ನಾಳೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ದೂರು ಕೊಡುತ್ತೇವೆ. ಅವರು ಪಕ್ಷದ ವಿಪ್ ಉಲ್ಲಂಘನೆ ಮಾಡಿದ್ದಾರೆ. ಕಾಂಗ್ರೆಸ್-ಬಿಜೆಪಿ ಒಟ್ಟಾಗಿ ಅಡ್ಡ ಮತದಾನ ಮಾಡಿಸಿದ್ದಾರೆ. ಈಗ ಇರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಂವಿಧಾನ ಬದ್ಧವಾಗಿ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದೆ. ಒಂದು ವೇಳೆ ಸ್ಪೀಕರ್ ಸರಿಯಾಗಿ ನಿರ್ಣಯ ಮಾಡದೇ ಹೋದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ ಅಭ್ಯರ್ಥಿಗೆ ಮತ ಹಾಕಿದ್ದೇನೆ: ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.