ETV Bharat / state

ನ.14 ರಿಂದ ಜೆಡಿಎಸ್‍ ಪಂಚರತ್ನ ರಥಯಾತ್ರೆ ಆರಂಭ

author img

By

Published : Nov 12, 2022, 6:54 AM IST

JDS Pancharatna yatra
ಜೆಡಿಎಸ್‍ ಪಂಚರತ್ನ ರಥಯಾತ್ರೆ

JDS Pancharatna yatra: ನ.1ರಂದು ಈ ಯಾತ್ರೆಯನ್ನು ಪ್ರಾರಂಭಿಸಲು ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿತ್ತು. ಆದರೆ, ಮಳೆ ಬಂದ ಕಾರಣ ಒಂದು ವಾರ ಕಾಲ ಪಂಚರತ್ನ ರಥಯಾತ್ರೆಯನ್ನು ಮುಂದೂಡಲಾಗಿತ್ತು. ಈಗ ಮಳೆ ಬಿಡುವು ಕೊಟ್ಟಿರುವುದರಿಂದ ಮೊದಲ ಹಂತದ ರಥ ಯಾತ್ರೆ ನ.14 ರಿಂದ ಪ್ರಾರಂಭವಾಗಲಿದೆ.

ಬೆಂಗಳೂರು: ಮುಂಬರುವ ಚುನಾವಣೆಗೆ ತಯಾರಿ ನಡೆಸಿರುವ ಜೆಡಿಎಸ್‍ ನಾಯಕರು ನ.1 ರಂದು ಚಾಲನೆ ನೀಡಿದ್ದ ಪಂಚರತ್ನ ರಥಯಾತ್ರೆಯನ್ನು ಮಳೆಯಿಂದಾಗಿ ಮುಂದೂಡಿದ್ದರು. ಇದೀಗ ನ.14 ರಿಂದ ಜೆಡಿಎಸ್​​ನ ಪಂಚರತ್ನ ರಥಯಾತ್ರೆ ಆರಂಭವಾಗಲಿದೆ.

ಈಗಾಗಲೇ ನಿಗದಿಯಾಗಿರುವಂತೆ ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾಕ್ಷೇತ್ರದಿಂದ ಈ ರಥಯಾತ್ರೆ ಪ್ರಾರಂಭವಾಗಲಿದ್ದು, ಡಿ.6ರವರೆಗೂ ನಿರಂತರವಾಗಿ ನಡೆಯಲಿದೆ. ಮುಳಬಾಗಿಲಿನ ಕುರುಡುಮಲೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಂಚರತ್ನ ರಥ ಯಾತ್ರೆಗೆ ಚಾಲನೆ ನೀಡಲಾಗುತ್ತದೆ.

ನ.1ರಂದು ಈ ಯಾತ್ರೆಯನ್ನು ಪ್ರಾರಂಭಿಸಲು ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿತ್ತು. ಆದರೆ, ಮಳೆ ಬಂದ ಕಾರಣ ಒಂದು ವಾರಗಳ ಕಾಲ ಪಂಚರತ್ನ ರಥಯಾತ್ರೆಯನ್ನು ಮುಂದೂಡಲಾಗಿತ್ತು. ಈಗ ಮಳೆ ಬಿಡುವು ಕೊಟ್ಟಿರುವುದರಿಂದ ಮೊದಲ ಹಂತದ ರಥ ಯಾತ್ರೆ ನ.14 ರಿಂದ ಪ್ರಾರಂಭವಾಗಲಿದೆ.

ರಥ ಯಾತ್ರೆಗೆ ಚಾಲನೆ ನೀಡಿದ ನಂತರ ಬೃಹತ್ ಸಮಾವೇಶ ನಡೆಯಲಿದೆ. ಆ ಸಮಾವೇಶದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಸಂಭವನೀಯ ಅಭ್ಯರ್ಥಿಗಳಿಂದ ಜೆಡಿಎಸ್‍ನಿಂದ ಸ್ಪರ್ಧಿಸಿ ಚುನಾಯಿತರಾದ ಮೇಲೆ ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡುವುದಿಲ್ಲ ಎಂಬ ಪ್ರಮಾಣವಚನ ಸ್ವೀಕರಿಸಲಾಗುತ್ತದೆ.

ಗ್ರಾಮ ವಾಸ್ತವ್ಯ: ಪ್ರವಾಸದ ಸಂದರ್ಭದಲ್ಲಿ ಜನ ಸಂಪರ್ಕ ಸಭೆ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ನ.14ರಿಂದ ಆರಂಭವಾಗುವ ಮೊದಲ ಹಂತದ ಯಾತ್ರೆ ಒಟ್ಟು 23 ದಿನಗಳ ಕಾಲ ನಡೆಯಲಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು, ಬಂಗಾರಪೇಟೆ, ಮಾಲೂರು, ಕೋಲಾರ, ಶ್ರೀನಿವಾಸಪುರ, ಕ್ಷೇತ್ರಗಳಲ್ಲಿ ಯಾತ್ರೆ ಸಾಗಲಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟ, ಬಾಗೇಪಲ್ಲಿ, ಗೌರಿಬಿದನೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ತುಮಕೂರು ಜಿಲ್ಲೆಯ ತುಮಕೂರು ನಗರ, ಮಧುಗಿರಿ, ಪಾವಗಡ, ಶಿರಾ, ಗುಬ್ಬಿ, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಕುಣಿಗಲ್ ಹಾಗೂ ತುಮಕೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ರಥಯಾತ್ರೆ ಸಾಗಲಿದೆ.

ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಈ ರಥಯಾತ್ರೆಗೆ ಬಿಡುವು ಕೊಟ್ಟು ಆನಂತರ 2ನೇ ಹಂತದ ರಥಯಾತ್ರೆಯನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಈಟಿವಿ ಭಾರತಕ್ಕೆ ಜೆಡಿಎಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ.. ಮುಳಬಾಗಿಲಿನಲ್ಲಿ ಸಮಾವೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.