ETV Bharat / state

'ಜನತಾ ಜಲಧಾರೆ' ಕಾರ್ಯಕ್ರಮಕ್ಕೆ ಜೆಡಿಎಸ್‍ ಸಿದ್ಧತೆ ?

author img

By

Published : Feb 7, 2022, 10:20 PM IST

ರಾಜ್ಯದ 15 ದಿಕ್ಕುಗಳಿಗೆ ಹೊರಡುವ ಗಂಗಾ ರಥಗಳಿಗೆ (15 ವಾಹನಗಳು) ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ..

jds-ready-janata-jaladhare-program
ಜನತಾ ಜಲಧಾರೆ ಕಾರ್ಯಕ್ರಮ

ಬೆಂಗಳೂರು : ಕೋವಿಡ್ ಸೋಂಕು ಕಡಿಮೆಯಾಗುತ್ತಿದ್ದು, ಸರ್ಕಾರದ ಕೋವಿಡ್ ನಿರ್ಬಂಧಗಳನ್ನು ಸಡಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್‍ ರೂಪಿಸಿರುವ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ.

ಈ ಕಾರ್ಯಕ್ರಮವನ್ನು ಜನವರಿ 26ರಂದು ಆರಂಭಿಸಬೇಕಿತ್ತು. ಆದರೆ, ಕೋವಿಡ್ ಮೂರನೇ ಅಲೆ ಹೆಚ್ಚಿದ್ದ ಕಾರಣ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಜೆಡಿಎಸ್‍ ವರಿಷ್ಠರು ಬ್ರೇಕ್ ನೀಡಿದ್ದರು. ಇದೀಗ ರಾಜ್ಯದಲ್ಲಿ ಕೊರೊನಾ ಕ್ಷೀಣಿಸುತ್ತಿದೆ.

ಹಾಗಾಗಿ, ಈ ತಿಂಗಳ ಕೊನೆವಾರದಲ್ಲಿ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಜನತಾ ಜಲಧಾರೆ ಕಾರ್ಯಕ್ರಮದ ನಕ್ಷೆ, ರೂಟ್ ಮ್ಯಾಪ್, ವಾಹನ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ವಿಶಿಷ್ಟ ವಾಹನಗಳ ಸಿದ್ಧತೆ: ಜನತಾ ಜಲಧಾರೆಗೆಂದೇ ವಿಶಿಷ್ಟವಾಗಿ 15 ವಾಹನ ಸಿದ್ಧಪಡಿಸಲಾಗುತ್ತಿದೆ. ಈ ವಾಹನಗಳಲ್ಲಿ ಕಲಶಗಳನ್ನಿಟ್ಟು ಕಾವೇರಿ, ಕಬಿನಿ, ಮೇಕೆದಾಟು, ಹೇಮಾವತಿ, ನೇತ್ರಾವತಿ, ಕುಮಾರಧಾರ, ತುಂಗಭದ್ರಾ, ಶರಾವತಿ, ಅಘನಾಶಿನಿ, ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಭೀಮಾ, ಅರ್ಕಾವತಿ, ಉತ್ತರ ಪಿನಾಕಿನಿ, ಚಿತ್ರಾವತಿ ಸೇರಿ 51 ಸ್ಥಳಗಳಲ್ಲಿ ಜಲ ಸಂಗ್ರಹ ಮಾಡುವ ಮೂಲಕ ಜನ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ.

ರಾಜ್ಯದ 15 ದಿಕ್ಕುಗಳಿಗೆ ಹೊರಡುವ ಗಂಗಾ ರಥಗಳಿಗೆ (15 ವಾಹನಗಳು) ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ.

ಒಟ್ಟು 51 ಕಡೆ ಜಲ ಸಂಗ್ರಹ : ಪೂರ್ವ ನಿಗದಿಯಂತೆ ಇಡೀ ಜಲಧಾರೆ ಕಾರ್ಯಕ್ರಮದಲ್ಲಿ ಒಟ್ಟು 51 ಸ್ಥಳಗಳಲ್ಲಿ ಪವಿತ್ರ ನದಿಗಳ ಜಲ ಸಂಗ್ರಹ ಮಾಡಲಾಗುತ್ತದೆ. ರಾಜ್ಯದ 180 ವಿಧಾನಸಭೆ ಕ್ಷೇತ್ರಗಳು, 140 ತಾಲ್ಲೂಕು ಕೇಂದ್ರಗಳಲ್ಲಿ ಈ ಕಲಶಗಳು ಹಾದು ಹೋಗಲಿದ್ದು, ಎಲ್ಲೆಡೆ ಜಲ ತುಂಬಿದ ಕಲಶಗಳ ಮೆರೆವಣಿಗೆ, ಕಲಾ ತಂಡಗಳ ಮೆರಗು, ಮಂಗಳವಾದ್ಯಗಳ ಮೇಳ, ಕಲಶಗಳೊಂದಿಗೆ ಮಹಿಳೆಯರ ನಡಿಗೆ ನಡೆಯಲಿದೆ. ದಿನಂಪ್ರತಿ 15 ಕಡೆ ಇಂಥ ಕಾರ್ಯಕ್ರಮಗಳು ನಡೆಯಲಿವೆ ಎಂದು ಜೆಡಿಎಸ್‍ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕೇಂದ್ರಕ್ಕೆ ಪ್ರಸ್ತಾಪಿಸಬೇಕಾದ ವಿಷಯಗಳ ಬಗ್ಗೆ ಸಂಸದರೊಂದಿಗೆ ಚರ್ಚಿಸಿದ್ದೇನೆ : ದೆಹಲಿಯಲ್ಲಿ ಸಿಎಂ ಹೇಳಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.