ETV Bharat / state

KSET Exam: ಕೆ ಸೆಟ್​ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

author img

By ETV Bharat Karnataka Team

Published : Sep 5, 2023, 1:35 PM IST

K Set exam online application link open in KEA
K Set exam online application link open in KEA

ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರ್ವಹಣೆ ಮಾಡುವ ಇಚ್ಛೆ ಹೊಂದಿರುವ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್​​) ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರ್ವಹಣೆಗೆ ಈ ಪರೀಕ್ಷೆ ಅರ್ಹತೆ ಕಡ್ಡಾಯವಾಗಿರುವ ಹಿನ್ನೆಲೆ ಈ ಪರೀಕ್ಷೆ ಹೆಚ್ಚು ಮಹತ್ವಪೂರ್ಣವಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರ್ವಹಣೆ ಮಾಡುವ ಇಚ್ಛೆ ಹೊಂದಿರುವ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ಈ ಪರೀಕ್ಷೆಗೆ ಎದುರಾಗಬಹುದು. ಇಂದಿನಿಂದ ಈ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಮಾಡಲಾಗಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: 2023ನೇ ಸಾಲಿನ ಸಹಾಯಕ ಪ್ರಾಧ್ಯಾಪಕ ಹುದ್ದೆ ಅರ್ಹತೆಗೆ ನಡೆಸುವ ಪರೀಕ್ಷೆ ಇದಾಗಿದೆ.

ವಿದ್ಯಾರ್ಹತೆ: ಅಧಿಕೃತ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರೈಸಿದ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ. ಒಟ್ಟು 41 ವಿಷಯದಲ್ಲಿ ಅರ್ಹರಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಯಾವುದೇ ವಯೋಮಿತಿ ಇಲ್ಲ.

ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ನಿರ್ವಹಣೆಗೆ ಕೆ ಸೆಟ್​ ಅರ್ಹತೆ ಪಡೆಯುವುದು ಅವಶ್ಯವಾಗಿದ್ದು, ಅಭ್ಯರ್ಥಿಗಳು ಪರೀಕ್ಷೆಗೆ ಆನ್​ಲೈನ್​ ಮೂಲಕ ನೋಂದಣಿ​ ಮಾಡಿಕೊಳ್ಳಬಹುದು. ಯುಜಿಸಿ ನಿಯಮದ ಅಡಿಯಲ್ಲಿ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿ ಸುಲಭವಾಗಲಿದೆ. ಇಲ್ಲಿಯವರೆಗೆ ಈ ಪರೀಕ್ಷೆಯನ್ನು ಮೈಸೂರು ವಿಶ್ವವಿದ್ಯಾಲಯದಿಂದ ನಡೆಸಲಾಗುತ್ತಿತ್ತು. ಆದರೆ, ಇದೇ ಮೊದಲ ಬಾರಿಗೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರಿದಿಂದ ನಡೆಸಲಾಗುತ್ತಿದೆ.

ಪರೀಕ್ಷೆ: ಈ ಅರ್ಹತಾ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರಲಿದೆ. ಈ ಪರೀಕ್ಷೆಯಲ್ಲಿ ಕನಿಷ್ಠ 40 ಅಂಕಗಳನ್ನು ಗಳಿಸುವ ಮೂಲಕ ಅರ್ಹತೆ ಸಂಪಾದಿಸಬಹುದು. ರಾಜ್ಯದ ಪ್ರಮುಖ 11 ಕೇಂದ್ರದಲ್ಲಿ ಈ ಪರೀಕ್ಷೆ ನಡೆಯಲಿದೆ.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 1150, ಪ್ರವರ್ಗ 2 ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 960 ಮತ್ತು ಪರಿಶಿಷ್ಟ ಜಾತಿ, ಪಂಗಡ, ವಿಕಲಚೇತನ ಅಭ್ಯರ್ಥಿಗಳಿಗೆ 650 ರೂ. ನಿಗದಿಸಲಾಗಿದೆ.

ಅರ್ಜಿ ಸಲ್ಲಿಕೆ: ಈ ಅರ್ಹತಾ ಪರೀಕ್ಷೆಗೆ ಇಂದಿನಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆ. 30 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಅಕ್ಟೋಬರ್​ 3 ಆಗಿದೆ. ಈ ಪರೀಕ್ಷೆಗಳನ್ನು ಪ್ರಾಧಿಕಾರ ನವೆಂಬರ್​ 5ರಂದು ನಡೆಸುವ ಸಾಧ್ಯತೆ ಇದೆ ಎಂಬ ತಾತ್ಕಾಲಿಕ ದಿನಾಂಕವನ್ನು ಘೋಷಿಸಲಾಗಿದೆ.

ಈ ಅರ್ಹತಾ ಪರೀಕ್ಷೆ ಕುರಿತು ಹೆಚ್ಚಿನ ವಿವರ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು cetonline.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ

ಇದನ್ನೂ ಓದಿ: Nabard Recruitment: ನಬಾರ್ಡ್​ನಲ್ಲಿ 150 ಅಸಿಸ್ಟಂಟ್​ ಮ್ಯಾನೇಜರ್​ ಹುದ್ದೆ ನೇಮಕಾತಿ; ಪದವಿ ಆದವರಿಗೆ ಅವಕಾಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.