ETV Bharat / state

ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲ್ಲ: ಸಚಿವ‌ ತಂಗಡಗಿ

author img

By ETV Bharat Karnataka Team

Published : Nov 9, 2023, 6:55 PM IST

ಕಾಂತರಾಜು ವರದಿ ಜಾತಿಗಣತಿ ಸಮೀಕ್ಷೆ ಅಲ್ಲ.‌ ಪ್ರತಿ ಸಮುದಾಯದ ಬಗ್ಗೆ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ತಿಳಿದುಕೊಳ್ಳುವ ಸಲುವಾಗಿ ವರದಿ ತಯಾರಿಸಲಾಗಿತ್ತು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

Minister Shivraj spoke to the media.
ಮಾಧ್ಯಮದವರೊಂದಿಗೆ ಸಚಿವ ಶಿವರಾಜ್ ತಂಗಡಗಿ ಮಾತನಾಡಿದರು.

ಬೆಂಗಳೂರು:ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್‌ ಕಾಂತರಾಜು ನೇತೃತ್ವದ ಸಮೀಕ್ಷಾ ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನು ಕಾಂತರಾಜು ವರದಿಯನ್ನು ಜಾತಿ ಗಣತಿ ಎಂದು ಕರೆಯಲಾಗುತ್ತಿದೆ. ಮೂಲವಾಗಿ ಇದು ಜಾತಿಗಣತಿ ಸಮೀಕ್ಷೆ ಅಲ್ಲವೇ, ಅಲ್ಲ.‌ ಇದು ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಸರಿಪಡಿಸುವ ಹಿನ್ನೆಲೆಯಲ್ಲಿ ವರದಿ ಸಿದ್ಧಪಡಿಸಲಾಗಿದೆ. ಅದನ್ನು ಹೊರತುಪಡಿಸಿ ಜಾತಿ ವರದಿ ಎಂದು ಕರೆಯುವುದು ಸರಿಯಲ್ಲ ಎಂದು ತಿಳಿಸಿದರು.‌

ಕಾಂತರಾಜು ವರದಿಯಿಂದ ಪ್ರತಿಯೊಂದು ಸಮಾಜದ ಜನಸಂಖ್ಯೆ, ಶಿಕ್ಷಣ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾಜದ ಅಂಕಿ- ಅಂಶ ಸ್ಪಷ್ಟವಾಗಿ ತಿಳಿಯಲಿದೆ. ಕಾಂತರಾಜು ಸಮೀಕ್ಷಾ ವರದಿಯನ್ನು ಕೆಲ ಸಮುದಾಯದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ‌ ಸರ್ಕಾರಕ್ಕೆ ಸಲ್ಲಿಕೆಯೇ ಆಗಿಲ್ಲ. ವರದಿ ಸ್ವೀಕಾರ ಮಾಡಿದರೆ ಅದನ್ನು ಪಡೆದು ಮೊದಲು ಅಧ್ಯಯನ ಮಾಡುತ್ತೇವೆ. ವರದಿಯನ್ನು ವಿರೋಧ ಮಾಡುತ್ತಿದ್ದವರೂ ವರದಿ ನೋಡಿದ್ದರೆ ನಮಗೆ ತಿಳಿಸಲಿ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಲ್ಲೂ ಕೂಡ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

ಕಾಂತರಾಜು ವರದಿ ಜಾತಿ ಜನಗಣತಿ ಅಲ್ಲ: ಕಾಂತರಾಜು ವರದಿಯಲ್ಲಿ ಪ್ರತಿಯೊಂದು ಸಮುದಾಯದ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಸಮೀಕ್ಷೆ ಮಾಡಲಾಗಿದೆ. ವರದಿ ನೋಡದೇ ಅದನ್ನು ವಿರೋಧ ಮಾಡುವುದು ಸರಿಯಲ್ಲ. ಕಾಂತರಾಜು ವರದಿ ಜಾತಿ ಜನಗಣತಿ ಅಲ್ಲ. ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಿರುವುದು. ಪ್ರತಿಯೊಂದು ಸಮುದಾಯದ ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿ ತಿಳಿಯುವ ಸಲುವಾಗಿ ಸಮೀಕ್ಷೆ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲೇ ವರದಿ ಸಿದ್ಧವಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ವರದಿ ಸ್ವೀಕಾರವಾಗಿಲ್ಲ. ವರದಿ ಸಲ್ಲಿಕೆಯಾಗದೇ ವರದಿ ಬಗ್ಗೆ ಅಪಸ್ವರ ತೆಗೆಯುವುದು ಸರಿಯಲ್ಲ. ಯಾವದೇ ರಾಜಕೀಯ ಹಿತಾಸಕ್ತಿ ಕೂಡ ಇದರಲ್ಲಿ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಜೆಪಿಯವರು ಮೊದಲು ಜಾಮೂನು ಕೊಟ್ಟು ಬಳಿಕ ವಿಷ ಕೊಡುತ್ತಾರೆ ಎಂಬ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಇದು ನಮಗೆ ಮೊದಲೇ ಗೊತ್ತು. ಸೋಮಶೇಖರ್ ಅವರಿಗೆ ಇದೀಗ ಸತ್ಯದ ಅರಿವು ಆಗಿದೆ. ಈ ಹಿಂದೆ ಪಕ್ಷೇತರರಾಗಿ ಗೆದ್ದು ಬಿಜೆಪಿ ಸರ್ಕಾರ ರಚನೆ ಮಾಡಲು ಬೆಂಬಲ ಕೊಟ್ಟ ನಮಗೆ ಏನು ಮಾಡಿದರೂ ಎಂಬುದು ರಾಜ್ಯದ ಜನತೆಗೆ ತಿಳಿದಿದೆ ಎಂದು ಮಾರ್ಮಿಕವಾಗಿ ತಿಳಿಸಿದರು.

ಇದನ್ನೂಓದಿ:ಪಿಎಸ್ಐ ಪರೀಕ್ಷಾ ನೇಮಕಾತಿ‌ ಹಗರಣ; ಈ ತಿಂಗಳೊಳಗೆ ಸರ್ಕಾರಕ್ಕೆ ವರದಿ - ನ್ಯಾ. ಬಿ ವೀರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.