ETV Bharat / state

ಕಾಂಗ್ರೆಸ್ ವಿರುದ್ಧ ಬಿಜೆಪಿ ಲಿಂಗಾಯತ ಮುಖ್ಯಮಂತ್ರಿ ಅಸ್ತ್ರ ಪ್ರಯೋಗ.. ಶಾಸಕ ರೇಣುಕಾಚಾರ್ಯ ಹೀಗಂದ್ರು

author img

By

Published : Apr 20, 2023, 7:11 AM IST

ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ​ವೀರಶೈವ ಲಿಂಗಾಯತ ಸಮುದಾಯದ ಮುಖಂಡರ ಜೊತೆ ತುರ್ತು ಸಭೆ ಕೈಗೊಂಡಿದ್ದು, ಅನೇಕ ನಿರ್ಧಾರಗಳನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ.

Karnataka assembly election 2023  Karnataka election 2023  BJP decision to test Lingayat CM weapon  Lingayat CM weapon against Congress  ಕಾಂಗ್ರೆಸ್ ವಿರುದ್ಧ ಲಿಂಗಾಯತ ಮುಖ್ಯಮಂತ್ರಿ ಅಸ್ತ್ರ  ಲಿಂಗಾಯತ ಮುಖ್ಯಮಂತ್ರಿ ಅಸ್ತ್ರ ಪ್ರಯೋಗ  ಲಿಂಗಾಯತ ಮುಖ್ಯಮಂತ್ರಿ ಅಸ್ತ್ರ ಪ್ರಯೋಗಕ್ಕೆ ಬಿಜೆಪಿ  ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ  ​ವೀರಶೈವ ಲಿಂಗಾಯತ ಸಮುದಾಯ  ಸಮುದಾಯದ ಮುಖಂಡರ ಜೊತೆ ತುರ್ತು ಸಭೆ  ಸಮುದಾಯವನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಪ್ರಯತ್ನ  ಕಾಂಗ್ರೆಸ್​ಗೆ ಲಿಂಗಾಯತ ಸಿಎಂ ಅಸ್ತ್ರದ ಮೂಲಕ ತಿರುಗೇಟು  ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ  ಬಿಜೆಪಿ ಅಧಿಕಾರಕ್ಕೆ ಬಂದಾಗ ಹೈಕಮಾಂಡ್ ಸಮ್ಮತಿ
ಕಾಂಗ್ರೆಸ್ ವಿರುದ್ಧ ಲಿಂಗಾಯತ ಮುಖ್ಯಮಂತ್ರಿ ಅಸ್ತ್ರ ಪ್ರಯೋಗಕ್ಕೆ ಬಿಜೆಪಿ ನಿರ್ಧಾರ

ಬೆಂಗಳೂರು: ಲಿಂಗಾಯತ ಸಮುದಾಯವನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ನಡೆಸುತ್ತಿರುವ ಕಾಂಗ್ರೆಸ್​ಗೆ ಲಿಂಗಾಯತ ಸಿಎಂ ಅಸ್ತ್ರದ ಮೂಲಕ ತಿರುಗೇಟು ನೀಡಲು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ವೀರಶೈವ ಲಿಂಗಾಯತ ನಾಯಕರ ಸಭೆಯಲ್ಲಿ ನಿರ್ಧರಿಸಲಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದಾಗ ಹೈಕಮಾಂಡ್ ಸಮ್ಮತಿ ಸಿಕ್ಕರೇ ಲಿಂಗಾಯತರನ್ನೇ ಮುಖ್ಯಮಂತ್ರಿ ಮಾಡುವ ಘೋಷಣೆ ಮೊಳಗಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ತಿಳಿದುಬಂದಿದೆ.

ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿಎಸ್‌ ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿಯ ವೀರಶೈವ ಲಿಂಗಾಯತ ಸಮುದಾಯದ ಮುಖಂಡರ ಸಭೆ ನಡೆಸಲಾಯಿತು. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಹಿರಿಯ ನಾಯಕ ವಿ.ಸೋಮಣ್ಣ, ರೆಬಲ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಬಿ.ಸಿ ಪಾಟೀಲ್, ಅರವಿಂದ್ ಬೆಲ್ಲದ್, ಶಂಕರ್ ಪಾಟೀಲ್ ಮುನೇನಕೊಪ್ಪ ಸೇರಿದಂತೆ 23 ನಾಯಕರು ಪಾಲ್ಗೊಂಡಿದ್ದರು.

  • ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಶ್ರೀ @BSYBJP ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮ ಮಿತ್ರರ ಜೊತೆ ಮಾತನಾಡಲಾಯಿತು. pic.twitter.com/YJ0QwkwAuS

    — M P Renukacharya (@MPRBJP) April 19, 2023 " class="align-text-top noRightClick twitterSection" data=" ">

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷ ತೊರೆದ ನಂತರ ಬಿಜೆಪಿ ವಿರುದ್ಧ ಲಿಂಗಾಯತ ವಿರೋಧಿ ಅಸ್ತ್ರ ಪ್ರಯೋಗಿಸುತ್ತಿರುವ ಕಾಂಗ್ರೆಸ್​ಗೆ ಲಿಂಗಾಯತ ಮುಖ್ಯಮಂತ್ರಿ ಅಸ್ತ್ರ ಪ್ರಯೋಗಿಸಿ ಇಕ್ಕಟ್ಟಿಗೆ ಸಿಲುಕಿಸುವ ನಿರ್ಧಾರ ಕೈಗೊಳ್ಳಲಾಯಿತು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಲಿಂಗಾಯತ ವ್ಯಕ್ತಿಯನ್ನೇ ಮುಖ್ಯಮಂತ್ರಿ ಮಾಡಲಾಗುತ್ತದೆ. ನಿಮಗೆ ಅದು ಸಾಧ್ಯವೇ ಎಂದು ಕಾಂಗ್ರೆಸ್ ಅನ್ನು ಪ್ರಶ್ನಿಸಿ ರಾಜ್ಯಾದ್ಯಂತ ಪ್ರಚಾರದ ವೇಳೆ ಲಿಂಗಾಯತ ಸಿಎಂ ವಿಷಯ ಪ್ರಸ್ತಾಪಿಸುವ ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿದು ಬಂದಿದೆ. ಗುರುವಾರ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಿ ಲಿಂಗಾಯತ ಮುಖ್ಯಮಂತ್ರಿ ವಿಷಯವನ್ನು ಪ್ರಕಟಿಸುವ ನಿರ್ಧಾರ ಮಾಡಿದ್ದು, ಹೈಕಮಾಂಡ್ ನಾಯಕರಿಂದಲೂ ಈ ಹೇಳಿಕೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಹೈಕಮಾಂಡ್​ ಜೊತೆ ನಡೆಸುವ ಸಭೆ ಬಳಿಕವೇ ಇದರ ಬಗ್ಗೆ ಅಂತಿಮ ತೀರ್ಮಾನ ಹೊರ ಬೀಳಲಿದೆ.

ಈ ಕುರಿತು ಮಾತನಾಡಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ. ಬಿಜೆಪಿ ಸಂಘಟನೆ ಬಲಿಷ್ಠವಾಗಿದೆ. ಕಾರ್ಯಕರ್ತರ ಪಡೆ ಇದೆ. ರಾಜ್ಯದಲ್ಲಿ ಬೊಮ್ಮಾಯಿ ನಾಯಕತ್ವ ಇದೆ. ಸವದಿ ಸೋತು ಸುಣ್ಣ‌ ಆಗಿದ್ದರು. ಅಂತವರನ್ನು ಡಿಸಿಎಂ ಮಾಡಿ‌ ಪರಿಷತ್ ಸದಸ್ಯರಾಗಿ ಮಾಡಲಾಗಿತ್ತು. ಉಪ ಮುಖ್ಯಮಂತ್ರಿ ಆದ ಮೇಲೆ ಜನರಿಗೆ ಸವದಿ‌ ಗೊತ್ತಾಗಿದ್ದು. ಶೆಟ್ಟರ್ ಹಿರಿಯರು. ವಿಪಕ್ಷ‌ ನಾಯಕರಾಗಿ ಸಿಎಂ ಆಗಿದ್ದರು. ಅವರ ಬಗ್ಗೆ ಹೆಚ್ಚು ಮಾತನಾಡಲ್ಲ. ಆದರೆ ರಾಜ್ಯದಲ್ಲಿ ವೀರಶೈವ ಲಿಂಗಾಯತರನ್ನು ಮುಂದಿನ ಸಿಎಂ ಆಗಿ ಮಾಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

  • ಮಾನ್ಯ ನಿಖಟ ಪೂರ್ವ ಮುಖ್ಯಮಂತ್ರಿ ಶ್ರೀ @BSYBJP ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಳ್ಳಲಾಯಿತು.

    ಈ ಸಭೆಯಲ್ಲಿ ಕೇಂದ್ರ ನಾಯಕರು, ರಾಜ್ಯ ನಾಯಕರು, ಸಂಸದರು, ಸಚಿವರು, ಶಾಸಕರು, ಪರಿಷತ್ ಸದಸ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. pic.twitter.com/wBbcL2QB7D

    — M P Renukacharya (@MPRBJP) April 19, 2023 " class="align-text-top noRightClick twitterSection" data=" ">

ಕಾಂಗ್ರೆಸ್ ಅಸ್ತ್ರಕ್ಕೆ ಬಿಜೆಪಿ ಪ್ರತ್ಯಸ್ತ್ರ: ಇನ್ನು ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಿದ್ದು, ಈ ವಿಚಾರ ಮುಂದಿಟ್ಟು ಬಿಜೆಪಿ ವಿರುದ್ಧ ಕಾಂಗ್ರೆಸ್ ಲಿಂಗಾಯತ ವಿರೋಧಿ ಅಸ್ತ್ರ ಪ್ರಯೋಗ ಮಾಡುತ್ತಿದೆ. ಲಿಂಗಾಯತ ಸಮುದಾಯವನ್ನು ಪಕ್ಷದ ವಿರುದ್ಧ ಎತ್ತಿಕಟ್ಟಲಾಗುತ್ತಿದೆ. ಇದಕ್ಕೂ ಕಡಿವಾಣ ಹಾಕುವ ಕುರಿತು ಕಳೆದ ದಿನ ಮಹತ್ವದ ಚರ್ಚೆ ನಡೆಸಲಾಯಿತು. ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ವೀರಶೈವ ಲಿಂಗಾಯತ ಮತಗಳ ಚದುರಬಾರದು, ಶೆಟ್ಟರ್, ಸವದಿ ರಾಜೀನಾಮೆ ಪರಿಣಾಮ ಬಿಜೆಪಿ ಮೇಲಾಗಬಾರದು ಎನ್ನುವ ಕಾರಣಕ್ಕಾಗಿ ತುರ್ತು ಸಭೆ ನಡೆಸಿ, ಚುನಾವಣಾ ಕಾರ್ಯತಂತ್ರದ ಕುರಿತು ಮಹತ್ವದ ಸಮಾಲೋಚನೆ ಮಾಡಿದರು.

ಓದಿ: ಕಾಂಗ್ರೆಸ್​ನಿಂದ ಸ್ಟಾರ್ ಕ್ಯಾಂಪೇನರ್‌ಗಳ ಪಟ್ಟಿ ಬಿಡುಗಡೆ: ನಟಿ ರಮ್ಯಾ, ಶೆಟ್ಟರ್​​ಗೂ ಸ್ಥಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.