ETV Bharat / state

ಅಧಿಕಾರದಲ್ಲಿದ್ದಾಗ ಏನೂ ಮಾಡದೇ ಈಗ ರೈತರ ಹೆಸರಲ್ಲಿ ಬೀದಿ ನಾಟಕ: ರಾಗಾಗೆ ತಿವಿದ ಬಿಜೆಪಿ

author img

By

Published : Oct 3, 2022, 5:43 PM IST

ಗರೀಬಿ ಹಠಾವೊ ಎಂದು ನಿಮ್ಮ ಅಜ್ಜಿ ಘೋಷಿಸಿ ಐದು ದಶಕ ಕಳೆದಿದೆ. ಇನ್ನೂ ಬಡವರ ಹೆಸರಿನಲ್ಲಿ ವೋಟ್ ಬ್ಯಾಂಕ್ ರಾಜಕಾರಣ ಮಾಡಲು ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ರಾಹುಲ್​ ಗಾಂಧಿಗೆ ರಾಜ್ಯ ಬಿಜೆಪಿ ಟ್ವೀಟ್​ ಮೂಲಕ ಪ್ರಶ್ನಿಸಿದೆ.

karnataka-bjp-tweet-against-rahul-gandhi
ಅಧಿಕಾರದಲ್ಲಿದ್ದಾಗ ಏನೂ ಮಾಡದೇ ಈಗ ರೈತರ ಹೆಸರಲ್ಲಿ ಬೀದಿ ನಾಟಕ: ರಾಹುಲ್​ಗೆ ತಿವಿದ ಬಿಜೆಪಿ

ಬೆಂಗಳೂರು: ಕರ್ನಾಟಕದಲ್ಲಿನ ಅಭಿವೃದ್ಧಿ ಕಾರ್ಯ ಸಹಿಸಿಕೊಳ್ಳಲಾಗದ ನಕಲಿ ಗಾಂಧಿ ಕುಡಿ ರಾಹುಲ್ ಗಾಂಧಿ ಅವರೇ, ಮುಖ್ಯಮಂತ್ರಿ ಸ್ಥಾನಕ್ಕಾಗಿ ನಿಮ್ಮೆದುರು ಕೈಕಟ್ಟಿ 'ಜೀ ಹುಜೂರ್' ಎನ್ನುವ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಮಾತು ಕೇಳಿ ಆರೋಪ ಮಾಡುವ ಬದಲು, ರಾಜ್ಯದ ಜನರ ಬಾಯಿಂದ ಸತ್ಯ ತಿಳಿಯಿರಿ ಎಂದು 40 ಪರ್ಸೆಂಟ್ ಕಮಿಷನ್ ಆರೋಪ ಪ್ರಸ್ತಾಪಿಸುತ್ತಿರುವ ರಾಹುಲ್ ಗಾಂಧಿಗೆ ಬಿಜೆಪಿ ಟಾಂಗ್ ನೀಡಿದೆ.

ರಾಹುಕಾಲ ಹೆಸರಿನ ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯ ಬಿಜೆಪಿ ಸರ್ಕಾರ ರೈತರ ಮಕ್ಕಳು, ಕಾರ್ಮಿಕರು, ನೇಕಾರರು, ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದ್ದು, 14 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ‌. ಗುಲಾಮಗಿರಿಯನ್ನೇ ನಂಬಿರುವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ರೈತರು, ಕಾರ್ಮಿಕರ ಮಕ್ಕಳು ಸುಶಿಕ್ಷಿತರಾಗುವುದು ಬೇಕಿಲ್ಲವೇ? ಎಂದು ಪ್ರಶ್ನಿಸಿದೆ.

  • ಭ್ರಷ್ಟಾಚಾರವನ್ನೇ ನರನಾಡಿಗಳಲ್ಲಿ ತುಂಬಿಸಿಕೊಂಡಿರುವ ನಕಲಿಗಾಂಧಿ ಕುಟುಂಬ ಮತ್ತು ಕಾಂಗ್ರೆಸ್‌ ಪಕ್ಷ ಇತರರ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವುದು ಚೋದ್ಯ.

    ಬೇಲ್ ಮೇಲೆ ಜೀವನ ನಡೆಸುವವರು ಇನ್ನೊಬ್ಬರ ಮೇಲೆ ಆರೋಪ ಮಾಡುವುದು ಹಾಸ್ಯಾಸ್ಪದ.

    ಆರೋಪಕ್ಕೆ ಸೂಕ್ತ ದಾಖಲೆ ಒದಗಿಸದೆ ಪಲಾಯನವಾದ ಅನುಸರಿಸುತ್ತಿರುವುದೇಕೆ?#RahuKaala

    — BJP Karnataka (@BJP4Karnataka) October 3, 2022 " class="align-text-top noRightClick twitterSection" data=" ">

ಗರೀಬಿ ಹಠಾವೊ ಎಂದು ನಿಮ್ಮ ಅಜ್ಜಿ ಘೋಷಿಸಿ ಐದು ದಶಕ ಕಳೆದಿದೆ. ಇನ್ನು ಬಡವರ ಹೆಸರಿನಲ್ಲಿ ವೋಟ್ ಬ್ಯಾಂಕ್ ರಾಜಕಾರಣ ಮಾಡಲು ನಿಮಗೆ ನಾಚಿಕೆ ಆಗುವುದಿಲ್ಲವೇ? ಮೋದಿ ಸರ್ಕಾರ ಜಾರಿಗೊಳಿಸಿದ ಕಿಸಾನ್ ಸಮ್ಮಾನ್ ಯೋಜನೆಯಿಂದ ರಾಜ್ಯದಲ್ಲಿ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ರೈತರು ಪ್ರಯೋಜನ ಪಡೆದು ನೆಮ್ಮದಿಯಿಂದ ಕೃಷಿ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ರೈತನಿಗೆ ಏನೂ ಮಾಡದೇ ಈಗ ರೈತರ ಹೆಸರಲ್ಲಿ ಬೀದಿ ನಾಟಕ ಮಾಡಲು ನಾಚಿಕೆಯಾಗುವುದಿಲ್ಲವೇ? ಎಂದು ರಾಹುಲ್‌ ಗಾಂಧಿಗೆ ಮಾತಿನಲ್ಲೇ ಬಿಜೆಪಿ ತಿವಿದಿದೆ.

ಇದನ್ನೂ ಓದಿ: ಮೈಸೂರು: ಸುರಿಯುತ್ತಿದ್ದ ಮಳೆಯಲ್ಲೇ ರಾಹುಲ್​ ಗಾಂಧಿ ಭಾಷಣ

ದೇಶದಲ್ಲಿ ಸೌಹಾರ್ದತೆ ಇಲ್ಲ ಎನ್ನುವ ರಾಹುಲ್ ಗಾಂಧಿ ಅವರೇ, ಪಿಎಫ್ಐನಂತಹ ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸಿದಾಗ ವಿರೋಧಿಸಿದ್ದೇಕೆ? ರಾಷ್ಟ್ರವಾದಿ ಮುಸಲ್ಮಾನರೇ ಉಗ್ರ ಸಂಘಟನೆಗಳ ನಿಷೇಧವನ್ನು ಸ್ವಾಗತಿಸಿರುವಾಗ ಸಿದ್ದರಾಮಯ್ಯ ಅವರಂತಹ ವೋಟ್ ಬ್ಯಾಂಕ್ ರಾಜಕಾರಣಿಗಳಿಗೆ ಮಾತ್ರ ಇದು ಬಿಸಿ ತುಪ್ಪವಾಗಿದೆ.

ಭ್ರಷ್ಟಾಚಾರವನ್ನೇ ನರನಾಡಿಗಳಲ್ಲಿ ತುಂಬಿಸಿಕೊಂಡಿರುವ ನಕಲಿಗಾಂಧಿ ಕುಟುಂಬ ಮತ್ತು ಕಾಂಗ್ರೆಸ್‌ ಪಕ್ಷ ಇತರರ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವುದು ಚೋದ್ಯ. ಬೇಲ್ ಮೇಲೆ ಜೀವನ ನಡೆಸುವವರು ಇನ್ನೊಬ್ಬರ ಮೇಲೆ ಆರೋಪ ಮಾಡುವುದು ಹಾಸ್ಯಾಸ್ಪದ.ಆರೋಪಕ್ಕೆ ಸೂಕ್ತ ದಾಖಲೆ ಒದಗಿಸದೆ ಪಲಾಯನವಾದ ಅನುಸರಿಸುತ್ತಿರುವುದೇಕೆ? ಎಂದು ಪ್ರಶ್ನಿಸಿದೆ.

  • ದೇಶದಲ್ಲಿ ಸೌಹಾರ್ದತೆ ಇಲ್ಲ ಎನ್ನುವ @RahulGandhi ಅವರೇ, ಪಿಎಫ್ಐನಂತಹ ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸಿದಾಗ ವಿರೋಧಿಸಿದ್ದೇಕೆ?

    ರಾಷ್ಟ್ರವಾದಿ ಮುಸಲ್ಮಾನರೇ ಉಗ್ರ ಸಂಘಟನೆಗಳ ನಿಷೇಧವನ್ನು ಸ್ವಾಗತಿಸಿರುವಾಗ @siddaramaiah ಅವರಂತಹ ಓಟ್ ಬ್ಯಾಂಕ್ ರಾಜಕಾರಣಿಗಳಿಗೆ ಮಾತ್ರ ಇದು ಬಿಸಿ ತುಪ್ಪವಾಗಿದೆ.#RahuKaala

    — BJP Karnataka (@BJP4Karnataka) October 3, 2022 " class="align-text-top noRightClick twitterSection" data=" ">
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಮಹಿಳೆಯರಿಗೆ ಉಜ್ವಲ ಯೋಜನೆಯಡಿ ಎಲ್ಲರ ಮನೆಗೂ ಗ್ಯಾಸ್ ಸಂಪರ್ಕ ಕಲ್ಪಿಸಲಾಗಿದೆ.
ಕೋವಿಡ್ ಸಂಕಷ್ಟದ ಸಮಯದಲ್ಲಿ 80 ಕೋಟಿ ಬಡವರಿಗೆ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಉಚಿತ ಆಹಾರ ವಿತರಣೆ ಮಾಡಿದೆ. ರಾಹುಲ್‌ ಗಾಂಧಿಗೆ ಇವೆಲ್ಲ ಏಕೆ ಕಾಣಿಸುತ್ತಿಲ್ಲ? ಪ್ರಧಾನಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ 34 ಕೋಟಿ ಪರಿಶಿಷ್ಟ ಸಮುದಾಯದ ಫಲಾನುಭವಿಗಳು ತಲಾ 10 ಲಕ್ಷ ಸಾಲ ಪಡೆಯುತ್ತಿದ್ದಾರೆ.
ಶ್ರೀಮಂತರ ಪರವಾದ ಸರ್ಕಾರ ಎನ್ನುವ ನಿರುದ್ಯೋಗಿ ರಾಹುಲ್ ಗಾಂಧಿ ಅವರಿಗೆ ಇದೆಲ್ಲ ಏಕೆ ಕಾಣಿಸುತ್ತಿಲ್ಲ? ಅಂಬಾನಿ ಅದಾನಿಗಳೆಲ್ಲ ಮೋದಿ ಸರ್ಕಾರದ ಅವಧಿಯಲ್ಲಿ ಶ್ರೀಮಂತರಾಗಿದ್ದೇ? ಎಂದು ಟೀಕಿಸಿದರು.

ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.