ETV Bharat / state

ಹಲವು ನೀರಾವರಿ ಯೋಜನೆಗಳಿಗೆ ಸಂಪುಟ ಸಭೆ ಅನುಮೋದನೆ

author img

By

Published : Aug 25, 2022, 3:03 PM IST

ಹಲವು ನೀರಾವರಿ ಯೋಜನೆಗಳಿಗೆ ಸಂಪುಟ ಸಭೆ ಅನುಮೋದನೆ ನೀಡಿದ್ದು, ಇದರಲ್ಲಿ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಮುಖವಾಗಿದೆ. ಈ ಬಗ್ಗೆ ಸಂಪುಟ ಸಭೆ ಅನುಮೋದನೆ ನೀಡಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.

Horti Revanasiddeswar Irrigation Project
Horti Revanasiddeswar Irrigation Project

ಬೆಂಗಳೂರು: ಹೊರ್ತಿ-ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಹಾಗೂ ವಿಜಯಪುರ, ಬಾಗಲಕೋಟೆ, ಹಾಸನ ಜಿಲ್ಲೆಗಳಲ್ಲಿ ಹಲವು ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ವಿಧಾನಸೌಧದಲ್ಲಿ ಇಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ನಂತರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಹೊರ್ತಿ-ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯಡಿ ಪ್ರಸ್ತುತ ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಪ್ರತ್ಯೇಕವಾಗಿ 3.245 ಟಿ.ಎಂ.ಸಿ. ನೀರನ್ನು ಲಿಫ್ಟ್ ಮಾಡಿ (ಆರ್.ಎಲ್.504.75 ಮೀ.ನಿಂದ ಆರ್.ಎಲ್.660.00 ಮೀ.ವರೆಗೆ) ಪೈಪ್ ಲೈನ್ ಅಳವಡಿಕೆಯೊಂದಿಗೆ ಇಂಡಿ ಮತ್ತು ವಿಜಯಪುರ ತಾಲೂಕುಗಳ (ನಾಗಠಾಣ ಮತಕ್ಷೇತ್ರ ಒಳಗೊಂಡಂತೆ) 28,000 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜಿಸಿರುವ 3 ಹಂತಗಳ 2,638.00 ಕೋಟಿ ರೂಪಾಯಿ ಅಂದಾಜು ಮೊತ್ತದ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಹಲವು ನೀರಾವರಿ ಯೋಜನೆಗಳಿಗೆ ಸಂಪುಟ ಸಭೆ ಅನುಮೋದನೆ
ಹಲವು ನೀರಾವರಿ ಯೋಜನೆಗಳಿಗೆ ಸಂಪುಟ ಸಭೆ ಅನುಮೋದನೆ

ವಿಜಯಪುರ ಜಿಲ್ಲೆಯ ಇಂಡಿ ಮತ್ತು ವಿಜಯಪುರ ತಾಲೂಕುಗಳಡಿ ನೀರಾವರಿ ವಂಚಿತ ಸುಮಾರು 64,000 ಹೆಕ್ಟೇರ್ ಪ್ರದೇಶವು ಕೃಷ್ಣಾ ಮೇಲ್ದಂಡೆ ಯೋಜನೆಯ ಯಾವುದೇ ಸ್ಕೀಂನಿಂದ ನೀರಾವರಿ ಸೌಲಭ್ಯಕ್ಕೆ ಒಳಪಟ್ಟಿರಲಿಲ್ಲ. ಆ ಕೊರತೆಯನ್ನು ನೀಗಿಸಲು ಈ ಯೋಜನೆಯನ್ನು ಹಂತ ಹಂತವಾಗಿ 3 ಹಂತಗಳಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ವಿವರಿಸಿದರು.

ಸರ್ಕಾರವು 2019-20ನೇ ಸಾಲಿನ ಆಯವ್ಯಯ ಭಾಷಣದಲ್ಲಿ 250.00 ಕೋಟಿ ರೂ. ವೆಚ್ಚದಲ್ಲಿ ಇಂಡಿ ಹಾಗೂ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ 28,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಹೊರ್ತಿ-ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ ಎಂದರು.

ಇದನ್ನೂ ಓದಿ : ಕೆಂಪಣ್ಣರನ್ನು ಮೆಂಟಲ್ ಆಸ್ಪತ್ರೆಗೆ ಕಳುಹಿಸಿ.. ಕೃಷಿ ಸಚಿವ ಬಿಸಿ ಪಾಟೀಲ್ ಗರಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.