ETV Bharat / state

2022ನೇ ಸಾಲಿನ ವೃತ್ತಿಪರ ಕೋರ್ಸ್​​​​​ಗಳ ಸಿಇಟಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

author img

By

Published : Mar 28, 2022, 12:16 PM IST

ಶುಲ್ಕ ಪಾವತಿಸಿದ ನಂತರ, ತಮ್ಮ ಅರ್ಜಿಯಲ್ಲಿ ಏನಾದರೂ ಮಾಹಿತಿ ಪರಿಷ್ಕರಿಸುವುದಿದ್ದರೆ ಅಂತವರಿಗೆ ಮೇ 2ರಿಂದ 6ರವರೆಗೆ ಕಾಲಾವಕಾಶವಿರಲಿದೆ. ಇದಾದ ಬಳಿಕ ವಿದ್ಯಾರ್ಥಿಗಳು ಮೇ 30ರಿಂದ ಪ್ರವೇಶ ಪತ್ರಗಳನ್ನು ಡೌನ್​​ಲೋಡ್ ಮಾಡಿಕೊಳ್ಳಬಹುದು ಎಂದು ಸಚಿವರು ವಿವರಿಸಿದ್ದಾರೆ..

cet exam Time Table released
ಸಾಂದರ್ಭಿಕ ಚಿತ್ರ

ಬೆಂಗಳೂರು : ವೃತ್ತಿ ಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಇಂತಹ ಪರೀಕ್ಷೆಗೆ ಗೊತ್ತುಪಡಿಸಿಕೊಂಡಿರುವ ಸಂಭವನೀಯ ದಿನಾಂಕಗಳ ಬಗ್ಗೆ ತಿಳಿದುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

  • #CET2022 ಪ್ರಸ್ತಾವಿತ ವೇಳಾಪಟ್ಟಿ ಇಂತಿದೆ -

    16/06/2022 - ಜೀವಶಾಸ್ತ್ರ, ಗಣಿತ

    17/06/2022 - ಭೌತಶಾಸ್ತ್ರ, ರಸಾಯನಶಾಸ್ತ್ರ

    18/06/2022 - ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ

    ಎಪ್ರಿಲ್‌ 05 ರಿಂದ CET-2022ರ ನೋಂದಣಿ, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಹೆಚ್ಚಿನ ಮಾಹಿತಿಗಾಗಿ: pic.twitter.com/tFGC2MqDgE

    — Dr. Ashwathnarayan C. N. (@drashwathcn) March 28, 2022 " class="align-text-top noRightClick twitterSection" data=" ">

ಪರೀಕ್ಷಾ ವೇಳಾಪಟ್ಟಿ : ಇದರಂತೆ ಜೂನ್ 16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, 17ರಂದು ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಹಾಗೂ 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಸಿಇಟಿ ನಡೆಸಲು ಉದ್ದೇಶಿಸಲಾಗಿದೆ ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 5ರಿಂದ 20ರವರೆಗೆ ಸಿಇಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿ, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೇ ಆನ್‌ಲೈನ್‌ ಮೂಲಕವೇ ನಿಗದಿತ ಶುಲ್ಕ ಪಾವತಿಸಲು ಏ.22ರವರೆಗೆ ಅವಕಾಶವಿದೆ. ಶುಲ್ಕ ಪಾವತಿಸಿದ ನಂತರ, ತಮ್ಮ ಅರ್ಜಿಯಲ್ಲಿ ಏನಾದರೂ ಮಾಹಿತಿ ಪರಿಷ್ಕರಿಸುವುದಿದ್ದರೆ ಅಂತವರಿಗೆ ಮೇ 2ರಿಂದ 6ರವರೆಗೆ ಕಾಲಾವಕಾಶವಿರಲಿದೆ. ಇದಾದ ಬಳಿಕ ವಿದ್ಯಾರ್ಥಿಗಳು ಮೇ 30ರಿಂದ ಪ್ರವೇಶ ಪತ್ರಗಳನ್ನು ಡೌನ್​​ಲೋಡ್ ಮಾಡಿಕೊಳ್ಳಬಹುದು ಎಂದು ಸಚಿವರು ವಿವರಿಸಿದ್ದಾರೆ.

ಇದನ್ನೂ ಓದಿ: SSLC ಪರೀಕ್ಷೆ ಆರಂಭ: ಹಿಜಾಬ್​ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿಲ್ಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.