ETV Bharat / state

ಕರ್ನಾಟಕ ಹೈಕೋರ್ಟ್​ ನೇಮಕಾತಿ: ಇಲ್ಲಿದೆ ಸಂಪೂರ್ಣ ಮಾಹಿತಿ

author img

By ETV Bharat Karnataka Team

Published : Oct 26, 2023, 2:30 PM IST

ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ, ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆ ವಿವರ ಇಲ್ಲಿದೆ.

Karnataka High court Recruitment for 14 district judges
Karnataka High court Recruitment for 14 district judges

ಕರ್ನಾಟಕ ಉಚ್ಛ ನ್ಯಾಯಾಲಯದಿಂದ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ನ್ಯಾಯಾಧೀಶರ ಹುದ್ದೆಗಳು ಇವಾಗಿವೆ. ಒಟ್ಟು 14 ಹುದ್ದೆಗಳ ನೇಮಕಾತಿ ನಡೆಯಲಿದೆ. ಈಗಾಗಲೇ ವಕೀಲಿ ವೃತ್ತಿಯಲ್ಲಿ ಅನುಭವ ಹೊಂದಿರುವ ವಕೀಲರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ, ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆಗಳು ಈ ಕೆಳಗಿನಂತಿವೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಕರ್ನಾಟಕ ಹೈಕೋರ್ಟ್​​ನ ಅಧೀನದಲ್ಲಿರುವ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 14 ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಹೊಂದಿರಬೇಕು.

ಅನುಭವ: ಅಭ್ಯರ್ಥಿಗಳು ಹೈಕೋರ್ಟ್​ ಅಥವಾ ಅದರ ಅಧೀನ ನ್ಯಾಯಾಲಯದಲ್ಲಿ ಕನಿಷ್ಠ 7 ವರ್ಷ ಹುದ್ದೆ ನಿರ್ವಹಣೆ ಮಾಡಿರುವ ಅನುಭವ ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 45 ವರ್ಷ ವಯೋಮಿತಿ ಹೊಂದಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಗಮನಿಸಿ ಮುಂದುವರೆಯುವುದು ಅವಶ್ಯಕವಾಗಿದೆ. ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗೆ ಪ್ರತ್ಯೇಕ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪ್ರಿಲಿಮನರಿಗೆ ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 500 ರೂ, ಇತರ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕ ಇರುತ್ತೆ.

ಮುಖ್ಯ ಪರೀಕ್ಷೆಗೆ ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 750 ರೂ, ಇತರ ಅಭ್ಯರ್ಥಿಗಳಿಗೆ 1500 ರೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಪ್ರಿಲಿಮನರಿ, ಮುಖ್ಯ ಪರೀಕ್ಷೆ ಮತ್ತು ವೈವಾ ಮೂಲಕ ಆಯ್ಕೆ ಮಾಡಲಾಗುವುದು

ಈ ಹುದ್ದೆಗೆ ಅಕ್ಟೋಬರ್​ 19ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 17 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ನವೆಂಬರ್​ 18 ಆಗಿರುತ್ತದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ karnatakajudiciary.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಕೋಲಾರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ನೇಮಕಾತಿ; ಪಿಯುಸಿ ಆದವರಿಗೆ ಸುವರ್ಣಾವಕಾಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.