ETV Bharat / state

ಆನ್‌ಲೈನ್ ಗೇಮ್​ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ : ತಿದ್ದುಪಡಿ ಕಾಯ್ದೆ ರದ್ದು

author img

By

Published : Feb 14, 2022, 12:46 PM IST

ರಾಜ್ಯ ಸರ್ಕಾರ ಆನ್​​ಲೈನ್ ಜೂಜು ರದ್ದುಪಡಿಸಲು ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದಿತ್ತು. ತಿದ್ದುಪಡಿ ಕಾಯ್ದೆಯನ್ನು 2021ರ ಸೆಪ್ಟೆಂಬರ್ 21ರಂದು ವಿಧಾನಸಭೆ ಮತ್ತು ಸೆ.23ರಂದು ವಿಧಾನಪರಿಷತ್ ಅಂಗೀಕರಿಸಿತ್ತು. 2021ರ ಅಕ್ಟೋಬರ್ 4ರಂದು ರಾಜ್ಯಪಾಲರು ಅಧಿಸೂಚನೆ ಹೊರಡಿಸಿದ್ದರು. ಅದರಂತೆ ಅಕ್ಟೋಬರ್ 5ರಂದು ತಿದ್ದುಪಡಿ ಕಾಯ್ದೆ ಜಾರಿಗೆ ಬಂದಿತ್ತು..

karnataka-high-court-verdict-on-online-gambling-ban
ಆನ್‌ಲೈನ್ ಗೇಮ್​ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು : ಆನ್​ಲೈನ್ ಗೇಮ್​ಗೆ ಗ್ರೀನ್ ಸಿಗ್ನಲ್ ನೀಡಿರುವ ಹೈಕೋರ್ಟ್ ವಿಭಾಗೀಯ ಪೀಠ, ಜೂಜು ನಿಷೇಧಿಸಲು ಕರ್ನಾಟಕ ಪೊಲೀಸ್ ಕಾಯ್ದೆ-1963ಕ್ಕೆ ತರಲಾಗಿದ್ದ ತಿದ್ದುಪಡಿಯನ್ನು ರದ್ದುಪಡಿಸಿದೆ.

ಕಾಯ್ದೆಗೆ ತಿದ್ದುಪಡಿ ತಂದು ಆನ್​ಲೈನ್ ಗೇಮ್ ನಿಷೇಧಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ 'ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್ ಆಫ್ ಇಂಡಿಯಾ' ಹಾಗೂ 'ಗ್ಯಾಲಕ್ಟಸ್ ಫನ್‌ವೇರ್ ಟೆಕ್ನಾಲಜೀಸ್' ಮತ್ತಿತರೆ ಕಂಪನಿಗಳು ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

ತೀರ್ಪಿನಲ್ಲಿ, ಆನ್​​ಲೈನ್ ಬೆಟ್ಟಿಂಗ್ ನಿಷೇಧಕ್ಕೆ ಸಂಬಂಧಿಸಿದಂತೆ ಸಂವಿಧಾನದ ನಿಯಮಗಳಿಗೆ ಅನುಸಾರವಾಗಿ ಹೊಸ ಕಾಯ್ದೆ ತರಲು ಈ ತೀರ್ಪು ಯಾವುದೇ ತಡೆ ಒಡ್ಡುವುದಿಲ್ಲ. ಆದರೆ, ಈಗ ಕಾಯ್ದೆಗೆ ತಿದ್ದುಪಡಿ ತಂದಿರುವ ಕ್ರಮ ಸಂವಿಧಾನಬದ್ಧವಾಗಿಲ್ಲ. ಆದ್ದರಿಂದ, ಕಾಯ್ದೆಯನ್ನು ರದ್ದುಪಡಿಸುತ್ತಿದ್ದೇವೆ ಎಂದು ಪೀಠ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಶಿವಮೊಗ್ಗ: ಹಿಜಾಬ್​ ಧರಿಸಲು ಅವಕಾಶ ನೀಡದ್ದಕ್ಕೆ ಪರೀಕ್ಷೆ ಬಹಿಷ್ಕರಿಸಿದ 13 ವಿದ್ಯಾರ್ಥಿನಿಯರು

ರಾಜ್ಯ ಸರ್ಕಾರ ಆನ್​​ಲೈನ್ ಜೂಜು ರದ್ದುಪಡಿಸಲು ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದಿತ್ತು. ತಿದ್ದುಪಡಿ ಕಾಯ್ದೆಯನ್ನು 2021ರ ಸೆಪ್ಟೆಂಬರ್ 21ರಂದು ವಿಧಾನಸಭೆ ಮತ್ತು ಸೆ.23ರಂದು ವಿಧಾನಪರಿಷತ್ ಅಂಗೀಕರಿಸಿತ್ತು. 2021ರ ಅಕ್ಟೋಬರ್ 4ರಂದು ರಾಜ್ಯಪಾಲರು ಅಧಿಸೂಚನೆ ಹೊರಡಿಸಿದ್ದರು. ಅದರಂತೆ ಅಕ್ಟೋಬರ್ 5ರಂದು ತಿದ್ದುಪಡಿ ಕಾಯ್ದೆ ಜಾರಿಗೆ ಬಂದಿತ್ತು.

ಕಾಯ್ದೆ ಜಾರಿಗೆ ಬರುತ್ತಿದ್ದಂತೆ ಆನ್​ಲೈನ್ ಗೇಮಿಂಗ್ ಕಂಪನಿಗಳ ವಿರುದ್ಧ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಗೇಮಿಂಗ್ ಸಂಸ್ಛೆಗಳು ಹೊಸ ಕಾಯ್ದೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದವು. ಅರ್ಜಿಗಳ ವಿಚಾರಣೆಯನ್ನು 2021ರ ಡಿಸೆಂಬರ್ 22ರಂದು ಪೂರ್ಣಗೊಳಿಸಿದ್ದ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.