ಅಪೌಷ್ಟಿಕತೆ, ರಕ್ತಹೀನತೆ.. ರಾಜ್ಯದ 14 ಲಕ್ಷ ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ

author img

By

Published : Nov 25, 2021, 7:27 AM IST

Karnataka to provide eggs for students

ಅಪೌಷ್ಟಿಕತೆ ಪ್ರಮಾಣ ಹೆಚ್ಚಿರುವ ಜಿಲ್ಲೆಗಳಲ್ಲಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ 1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ವಿತರಿಸಲಾಗುತ್ತಿದೆ.

ಬೆಂಗಳೂರು: ಅಪೌಷ್ಟಿಕತೆ, ರಕ್ತಹೀನತೆ ಮತ್ತು ಪ್ರೊಟೀನ್ ಕೊರತೆಯಿಂದ ಬಳಲುತ್ತಿರುವ ಆರರಿಂದ 15 ವರ್ಷದೊಳಗಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ. ಉತ್ತರ ಕರ್ನಾಟಕ ಭಾಗದ 7 ಜಿಲ್ಲೆಗಳ ವಿದ್ಯಾರ್ಥಿಗಳು ಕೊರತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದರಿಂದ ಕಾರ್ಯಕ್ರಮದ ಅಡಿ ಪ್ರಯೋಜನ ಪಡೆಯಲಿದ್ದಾರೆ.

ಡಿಸೆಂಬರ್ 1ರಿಂದ ಕಾರ್ಯಕ್ರಮ ಆರಂಭ: ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಯಲ್ಲಿ ಒಂದರಿಂದ 8ನೇ ತರಗತಿವರೆಗೆ ಓದುತ್ತಿರುವ 14,44,322 ವಿದ್ಯಾರ್ಥಿಗಳು ಫಲಾನುಭವಿಗಳಾಗಲಿದ್ದಾರೆ. ಡಿಸೆಂಬರ್‌ 1ರಿಂದ ಪ್ರಾರಂಭವಾಗುವ ಕಾರ್ಯಕ್ರಮವು ಮಾರ್ಚ್ 2022ರವರೆಗೆ ಮುಂದುವರೆಯಲಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ನೀಡಲಾಗುತ್ತದೆ. ಪ್ರತಿ ವಿದ್ಯಾರ್ಥಿಯು ನಾಲ್ಕು ತಿಂಗಳವರೆಗೆ ತಿಂಗಳಿಗೆ 10 ಮೊಟ್ಟೆ/ಬಾಳೆಹಣ್ಣುಗಳನ್ನು ಪಡೆಯುತ್ತಾನೆ.

ಯಾದಗಿರಿ ಜಿಲ್ಲೆಯಲ್ಲಿ ಶೇ.74ರಷ್ಟು ವಿದ್ಯಾರ್ಥಿಗಳು ಅಪೌಷ್ಟಿಕತೆ ಮತ್ತು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಕಲಬುರಗಿ ಶೇ.72.4, ಬಳ್ಳಾರಿ ಶೇ.72.3, ಕೊಪ್ಪಳ ಶೇ.70.7, ರಾಯಚೂರು ಶೇ.70.6, ಬೀದರ್‌ ಶೇ.69.1 ಮತ್ತು ವಿಜಯಪುರದಲ್ಲಿ ಶೇ.68ರಷ್ಟು ವಿದ್ಯಾರ್ಥಿಗಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಇದನ್ನೂ ಓದಿ: ಸಂತ್ರಸ್ತೆಯನ್ನು ಮದುವೆಯಾದ್ರೂ ಅತ್ಯಾಚಾರಿ ವಿರುದ್ಧದ ರೇಪ್​ ಕೇಸ್​ ರದ್ದಾಗಲ್ಲ: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.