ETV Bharat / state

Karnataka Weather Report: ರಾಜ್ಯದಲ್ಲಿ ಅ.31ರವರೆಗೆ ಭಾರಿ ಮಳೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

author img

By

Published : Oct 27, 2021, 1:33 PM IST

karnataka-weather-report-yellow-alert-in-many-districts
Weather Report: ರಾಜ್ಯದಲ್ಲಿ ಅ. 31ರವರೆಗೆ ಭಾರಿ ಮಳೆ.. ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ರಾಜ್ಯಕ್ಕೆ ಇಂದಿನಿಂದ ಈಶಾನ್ಯ ಮಾರುತಗಳ ಪ್ರವೇಶವಾಗಲಿದ್ದು, ಹಿಂಗಾರು ಮಳೆ ಸುರಿಯಲಿದೆ. ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಗೆ ಕಾರಣವಾಗಲಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 31ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಇಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚುಸಹಿತ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ.

ಕೆಲವು ಜಿಲ್ಲೆಗಳಲ್ಲಿ ಒಣಹವೆ:

ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯಲ್ಲೊ ಒಣಹವೆ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಹಿಂಗಾರು ಪ್ರವೇಶ:

ರಾಜ್ಯಕ್ಕೆ ಇಂದಿನಿಂದ ಈಶಾನ್ಯ ಮಾರುತಗಳ ಪ್ರವೇಶವಾಗಲಿದ್ದು, ಹಿಂಗಾರು ಮಳೆ ಸುರಿಯಲಿದೆ. ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಗೆ ಕಾರಣವಾಗಲಿವೆ ಎಂದು ಹೇಳಿದೆ.

ಉತ್ತರ ಒಳನಾಡಿನಲ್ಲಿ ಪ್ರಮಾಣ ಕಡಿಮೆ:

ಕರಾವಳಿಯಲ್ಲಿ ಸಾಧಾರಣ ಮಳೆ ಸುರಿಯುತ್ತದೆ. ಉತ್ತರ ಒಳನಾಡಿನ ಜಿಲ್ಲೆಗಳ ಮೇಲೆ ಅಷ್ಟೊಂದು ಪ್ರಭಾವ ಬೀರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ನಿಮ್ಮ ಮನೆಯಲ್ಲಿ ಬೈಕ್ ಮತ್ತು ಮಕ್ಕಳಿದ್ದಾರೆಯೇ?: ಇಲ್ಲಿದೆ ಕೇಂದ್ರ ಸರ್ಕಾರದ ಹೊಸ ರೂಲ್ಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.