ಮುಂದುವರೆದ ಮಳೆ ಅಬ್ಬರ: ಕೊಡಗುದಲ್ಲಿ ರೆಡ್​ ಅಲರ್ಟ್​, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌

author img

By

Published : Aug 6, 2022, 9:48 PM IST

karnataka-weather-report

Karnataka rain update: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ.

ಬೆಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಹೆಚ್ಚಾಗಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಹಾಗೂ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ವಿಜಯಪುರ, ಕಲಬುರಗಿ, ಯಾದಗಿರಿ, ಹಾವೇರಿ, ಧಾರವಾಡ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.

ಯೆಲ್ಲೊ ಅಲರ್ಟ್: ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಧಾರಾಕಾರ ಮಳೆ: ಕೃಷಿಭೂಮಿ ಜಲಾವೃತ, ಹೆದ್ದಾರಿ ಬಂದ್, ಸಂಚಾರ ಸ್ಥಗಿತ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.